Mandya | ಕಾಲೇಜು ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿ ನೇಣಿಗೆ ಶರಣು

Public TV
1 Min Read
Mandya Medical Student Suicide copy

ಮಂಡ್ಯ: ವೈದ್ಯಕೀಯ ವಿದ್ಯಾರ್ಥಿ (Medical Student) ಹಾಸ್ಟೆಲ್‌ನಲ್ಲಿ (Hostel) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ (Mandya) ಜಿಲ್ಲೆಯಲ್ಲಿ ನಡೆದಿದೆ.

ಕೊಪ್ಪಳ (Koppal) ಮೂಲದ ಭರತ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಓದಿನ ಬಗ್ಗೆ ನಿರಾಸಕ್ತಿ ಹೊಂದಿದ್ದ ಭರತ್ ಮೊದಲ ವರ್ಷದ ಪರೀಕ್ಷೆಗಳಿಗೆ ಗೈರಾಗಿದ್ದ. ಅಲ್ಲದೇ ಕಾಲೇಜಿಗೂ ಸಹ ಭರತ್ ಸರಿಯಾಗಿ ಹೋಗುತ್ತಿರಲಿಲ್ಲ. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್‌ಗೆ ಟ್ವಿಸ್ಟ್‌ – ಪ್ರಮುಖ ಆರೋಪಿಯಿಂದ ನಟಿ ರಚಿತಾ ರಾಮ್‌ಗೆ ಭರ್ಜರಿ ಗಿಫ್ಟ್

ಫುಟ್ಬಾಲ್ ಆಟದಲ್ಲಿ ಭರತ್ ಹೆಚ್ಚಿನ ಆಸಕ್ತಿ ಹೊಂದಿದ್ದ. ಮೊದಲ ವರ್ಷ ಗೈರು ಆಗಿದ್ದ ಪರೀಕ್ಷೆಗಳನ್ನು ಈ ಬಾರಿ ಪಾಸ್ ಮಾಡಿಕೊಳ್ಳಬೇಕೆಂದು ಪರೀಕ್ಷಾ ಶುಲ್ಕವನ್ನು ಕಟ್ಟಲು ಭರತ್ ಮುಂದಾಗಿದ್ದ. ಭಾನುವಾರ ರಾತ್ರಿ 12 ಗಂಟೆವರೆಗೆ ಹಾಸ್ಟೆಲ್‌ನ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ್ದಾನೆ. ಬಳಿಕ ತನ್ನ ಕೊಠಡಿಗೆ ಬಂದು ನೇಣು ಬಿಗಿದುಕೊಂಡು ಭರತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಮುಡಾ ಕೇಸ್ | ಇಡಿ-ಬಿಜೆಪಿ ಪಾಲುದಾರಿಕೆಯ ಪ್ರಚಾರವನ್ನು ಸುಪ್ರೀಂ ರದ್ದುಗೊಳಿಸಿದೆ: ಸುರ್ಜೇವಾಲಾ

ಇಂದು ಬೆಳಗ್ಗೆ ಸಹಪಾಠಿಗಳು ನೋಡಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಮಂಡ್ಯ ಪೂರ್ವ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸುಳ್ಳು ಸುದ್ದಿ ಹರಿಬಿಟ್ಟ ಆರೋಪ – ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ರದ್ದುಗೊಳಿಸಿದ ಸುಪ್ರೀಂ

Share This Article