ಕಲಬುರಗಿ ಚಿನ್ನದಂಗಡಿ ದರೋಡೆ ಕೇಸ್; ಮೂವರು ಅಂತರರಾಜ್ಯ ದರೋಡೆಕೋರರ ಬಂಧನ

Public TV
2 Min Read
Kalaburagi Gold Theft

– 2.86 ಕೆಜಿ ಚಿನ್ನ, 4.80 ಲಕ್ಷ ರೂ. ನಗದು ವಶಕ್ಕೆ

ಕಲಬುರಗಿ: ನಗರದ ಸರಾಫ್ ಬಝಾರ್‌ನಲ್ಲಿ ಜ್ಯುವೆಲರಿ ಶಾಪ್ (Jewellery Shop) ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಅಂತರರಾಜ್ಯ ದರೋಡೆಕೋರರನ್ನ ಪೊಲೀಸರು ಬಂಧಿಸಿದ್ದು, 2.865 ಕೆಜಿ ಚಿನ್ನ ಹಾಗೂ 4.80 ಲಕ್ಷ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ.

Kalaburagi Gold

ನಗರದ ಪೊಲೀಸ್ ಆಯುಕ್ತಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ನಡೆಸಿ, ಮಾತನಾಡಿದ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಅವರು, ಪಶ್ಚಿಮ ಬಂಗಾಳದ ಗೋಪಾಲ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ನಿವಾಸಿ ಅಯೋಧ್ಯಾ ಪ್ರಸಾದ್ ಚೌಹಾಣ್(48), ದಡಪೂರ ಪೊಲೀಸ್ ಠಾಣೆಯ ವ್ಯಾಪ್ತಿಯ ಬಂಗಾರ ವ್ಯಾಪಾರಿಯಾಗಿದ್ದ ಫಾರುಕ್ ಅಹಮದ್ ಮಲ್ಲಿಕ್(40) ಹಾಗೂ ಮುಂಬೈನಲ್ಲಿ ಟೇಲರ್ ಆಗಿ ಕೆಲಸ ಮಾಡುತ್ತಿದ್ದ ಸೊಹೆಲ್ ಶೇಖ್ ಅಲಿಯಾಸ್ ಬಾದಶಾ(30) ಬಂಧಿತ ಆರೋಪಿಗಳಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ಧವಾಗಿ ನಡೆಯಲಿ: ಬೊಮ್ಮಾಯಿ

ಜುಲೈ 11ರಂದು ನಗರದಲ್ಲಿ ಮಲ್ಲಿಕ್ ಜ್ಯುವೆಲರಿ ಶಾಪ್‌ನಿಂದ ಅಂದಾಜು 3 ಕೋಟಿ ಮೌಲ್ಯದ ಬಂಗಾರದ ಆಭರಣಗಳನ್ನು ದರೋಡೆ ಮಾಡಿರುವ ಪ್ರಕರಣ ರಾಜ್ಯದೆಲ್ಲೆಡೆ ಭಾರೀ ಸಂಚಲನ ಮೂಡಿಸಿತ್ತು. ಈ ಪ್ರಕರಣವನ್ನು ಬೇಧಿಸಲು ವಿವಿಧ ಠಾಣೆಗಳ ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ಒಳಗೊಂಡ 5 ತನಿಖಾ ತಂಡಗಳನ್ನು ರಚಿಸಿ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಮಹಾರಾಷ್ಟ್ರ, ತೆಲಂಗಾಣ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿದ್ದೆವು. ಇದಕ್ಕೂ ಮುನ್ನ ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ದರೋಡೆಕೋರರನ್ನು ಬಂಧಿಸಿ, ಅವರ ಬಳಿಯಿದ್ದ ಚಿನ್ನ ಮತ್ತು ನಗದನ್ನು ವಶಕ್ಕೆ ಪಡೆಯುವಲ್ಲಿ ನಗರದ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ಪತನ – ಓರ್ವ ಸಾವು, ನಾಲ್ವರು ಗಂಭೀರ

ಬ್ರಹ್ಮಪುರ ಪಿಐ ಸೋಮಲಿಂಗ, ಚೌಕ್ ಪೊಲೀಸ್ ಠಾಣೆಯ ಪಿಐ ರಾಘವೇಂದ್ರ, ಅಶೋಕ್‌ನಗರ ಸಿಪಿಐ ಅರುಣ್ ಕುಮಾರ್, ವಿವಿ ಸಿಪಿಐ ಸುಶೀಲ್, ಶಿವಾನಂದ ವಾಲೀಕಾರ, ಬಂದೇ ನವಾಜ್ ಮತ್ತಿತರರನ್ನು ಒಳಗೊಂಡ ತನಿಖಾ ತಂಡ ಪಶ್ಚಿಮ ಬಂಗಾಳ ಹಾಗೂ ಉತ್ತರ ಪ್ರದೇಶಕ್ಕೆ ತೆರಳಿತ್ತು. ಈ ತಂಡ ಸೇರಿ ಇನ್ನುಳಿದ 4 ತಂಡಗಳ ಶ್ರಮದಿಂದ ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದೆ ಎಂದು ವಿವರಿಸಿದ್ದಾರೆ.

Share This Article