ಸಣ್ಣ ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ಕೇಂದ್ರದ್ದಲ್ಲ: ಪ್ರಹ್ಲಾದ್ ಜೋಶಿ ಸ್ಪಷ್ಟನೆ

Public TV
3 Min Read
Prahlad Joshi 1

– ಬೇರೆಲ್ಲೂ ಇಲ್ಲದ ನೋಟಿಸ್ ಇಲ್ಲೇಕೆ?; ಜನರ ಕಣ್ಣಿಗೆ ಮಣ್ಣೆರೆಚೋ ಕೆಲಸ

ನವದೆಹಲಿ: ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ (GST) ಬಾಕಿ ನೋಟಿಸ್ ನೀಡುತ್ತಿರುವುದು ರಾಜ್ಯ ಸರ್ಕಾರವೇ ಹೊರತು ಕೇಂದ್ರ ಸರ್ಕಾರವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಸ್ಪಷ್ಟಪಡಿಸಿದ್ದಾರೆ.

‘ತೆರಿಗೆ ನೋಟಿಸ್ ನೀಡುವಲ್ಲಿ ರಾಜ್ಯ ಸಾರ್ಕಾರದ ಪಾತ್ರವೇನಿಲ್ಲ’ ಎಂದಿರುವ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರ ಮಾಡುವುದೆಲ್ಲ ಮಾಡಿಬಿಟ್ಟು ಈಗ ತನಗೇನೂ ಸಂಬಂಧವಿಲ್ಲ ಎನ್ನುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದ ಅರಣ್ಯಗಳಲ್ಲಿ ಸಾಕುಪ್ರಾಣಿ, ದನಕರುಗಳನ್ನ ಮೇಯಿಸುವುದು ನಿಷೇಧಿಸಲು ಈಶ್ವರ ಖಂಡ್ರೆ ಆದೇಶ

GST

ಕರ್ನಾಟಕದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ಕೊಟ್ಟಿರುವುದು ರಾಜ್ಯ ಸರ್ಕಾರದ ತೆರಿಗೆ ಇಲಾಖೆ ಅಧಿಕಾರಿಗಳು. ಹಾಗಿದ್ದರೂ ಇದೀಗ ರಾಜ್ಯ ಸರ್ಕಾರಕ್ಕೂ, ಜಿಎಸ್‌ಟಿ ನೋಟಿಸ್‌ಗೂ ಸಂಬಂಧವಿಲ್ಲ ಎನ್ನುತ್ತ ಜನರ ಕಣ್ಣಿಗೆ ಮಣ್ಣೆರೆಚೋ ಕೆಲಸ ಮಾಡುತ್ತಿದ್ದಾರೆ. ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಕನ್ವರ್ ಯಾತ್ರೆಯ ಮಾರ್ಗದಲ್ಲಿ ಹೋಟೆಲ್‌ಗಳಿಗೆ ಕ್ಯೂಆರ್ ಕೋಡ್ ಕಡ್ಡಾಯ – ಆದೇಶ ಎತ್ತಿ ಹಿಡಿದ ಸುಪ್ರೀಂ

ಬೇರೆಲ್ಲೂ ಇಲ್ಲದ ನೋಟಿಸ್ ಇಲ್ಲೇಕೆ?
ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದರೆ ಬಹುತೇಕ ಎಲ್ಲ ರಾಜ್ಯಗಳಿಗೂ ಅನ್ವಯಿಸುತ್ತಿತ್ತು. ಆದರೆ ಬೇರೆ ಯಾವುದೇ ರಾಜ್ಯಗಳಲ್ಲೂ ತೆರಿಗೆ ಇಲಾಖೆ ಅಧಿಕಾರಿಗಳಿಂದ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ನೀಡಲಾಗಿಲ್ಲ.ಕರ್ನಾಟಕದಲ್ಲಿ ಮಾತ್ರ ಇದಾಗಿದೆ ಎಂದರು. ಇದನ್ನೂ ಓದಿ: ಅಮೆರಿಕದಿಂದ ಮೂರು ಅಪಾಚೆ ಹೆಲಿಕಾಪ್ಟರ್‌ಗಳ ಮೊದಲ ಬ್ಯಾಚ್ ಆಗಮನ

ಜನರ ಜೊತೆಗೆ ಸಣ್ಣ ವ್ಯಾಪಾರಸ್ಥರಿಗೂ ಕಿರುಕುಳ:
ರಾಜ್ಯ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಗೋಳು ಹೊಯ್ದುಕೊಳ್ಳುವ ಜೊತೆಗೆ ಇದೀಗ ಹಣ್ಣು, ಹಾಲು, ತರಕಾರಿ ಸೇರಿದಂತೆ ದಿನನಿತ್ಯದ ಅಗತ್ಯ ಸರಕು ಸೇವಾ ವ್ಯಾಪಾರಿಗಳಿಗೆ ನೋಟಿಸ್ ನೀಡಿ ಕಿರುಕುಳ ಕೊಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಣ್ಣ ಬುದ್ಧಿ ಹೇಳಿದ್ದಕ್ಕೆ ಮಗುವನ್ನು ಬರ್ಬರವಾಗಿ ಕೊಂದ ಚಿಕ್ಕಪ್ಪ

GST 2

ಇದರಲ್ಲಿ ಕೇಂದ್ರದ ಪಾತ್ರವಿಲ್ಲ:
ಜಿಎಸ್‌ಟಿಯಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ ‘ಸಿಜಿಎಸ್‌ಟಿ’ ಮತ್ತು ರಾಜ್ಯ ಸರ್ಕಾರಗಳ ಅಡಿಯಲ್ಲಿ ‘ಎಸ್‌ಜಿಎಸ್‌ಟಿ’ ಎಂದು ಎರಡು ಭಾಗವಿದೆ. ಆದರಂತೆ ಕರ್ನಾಟಕದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಶೀಘ್ರವೇ ಧರ್ಮಸ್ಥಳ ಪ್ರಕರಣಗಳ ತನಿಖೆ ಆರಂಭ; ಎಸ್‌ಐಟಿ ತಂಡದಿಂದ ಯಾರೂ ಹೊರಗುಳಿಯಲ್ಲ: ಪರಮೇಶ್ವರ್

ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಯಾವುದೇ ತೀರ್ಮಾನ ತಗೆದುಕೊಳ್ಳಲು ಮಹತ್ವದ ಪಾತ್ರ ವಹಿಸಿರುವುದು ರಾಜ್ಯ ಸರ್ಕಾರಗಳು. ಕೇಂದ್ರ ಸರ್ಕಾರಕ್ಕೆ ಕೇವಲ 3ನೇ ಒಂದು ಭಾಗ ಮಾತ್ರ ಅಧಿಕಾರವಿದೆ. ಉಳಿದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿದೆ. 3ನೇ ಎರಡು ಭಾಗದಷ್ಟು ಅಧಿಕಾರ ಹೊಂದಿರುವ ರಾಜ್ಯ ಸರ್ಕಾರಗಳ ನಿರ್ಣಯವೇ ಇದರಲ್ಲಿ ಅಂತಿಮವಾಗಿರಲಿದೆ ಎಂಬ ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: GST ನೋಟಿಸ್‌ ಕೊಟ್ಟ ಕೋತಿ ಕೆಲಸ ರಾಜ್ಯ ಸರ್ಕಾರದ್ದು- ನೋಟಿಸ್ ವಾಪಸ್ ಪಡೆಯಬೇಕು: ಸಿ.ಟಿ.ರವಿ

ಯುಪಿಐ ಹದಗೆಡಿಸೋ ದುಸ್ಸಾಹಸ:
ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಜಿಎಸ್‌ಟಿ ನೋಟಿಸ್ ನೀಡುವ ಮೂಲಕ ಡಿಜಿಟಲ್, ಯುಪಿಐ ವಹಿವಾಟು ಹದಗೆಡಿಸುವ ದುಸ್ಸಾಹಸಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಕೈ ಹಾಕಿದೆ ಎಂದು ಗಂಭೀರ ಆರೋಪ ಮಾಡಿದರು. ಇದನ್ನೂ ಓದಿ: ಗದಗ | ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ನಗರಸಭೆಗೆ ಸಾರ್ವಜನಿಕರಿಂದ ಮುತ್ತಿಗೆ

ಯುಪಿಐ ವಹಿವಾಟು ವಿಶ್ವಕ್ಕೇ ಮಾದರಿಯಾಗಿದೆ. ಆದರೆ, ರಾಜ್ಯದಲ್ಲಿ ಈ ಪಾರದರ್ಶಕ ವ್ಯವಸ್ಥೆಗೆ ಸಂಚಕಾರ ತರಲೆತ್ನಿಸುತ್ತಿದ್ದು, ರಾಜ್ಯ ಸರ್ಕಾರದ ಈ ಕ್ಷುಲ್ಲಕ ರಾಜಕಾರಣ ನಿಜಕ್ಕೂ ದುರಂತವೇ ಸರಿ ಎಂದು ತೀವ್ರವಾಗಿ ಖಂಡಿಸಿದರು.  ಇದನ್ನೂ ಓದಿ: Kolar| ಹಾಸ್ಟೆಲ್‌ನಲ್ಲಿ ದೆವ್ವ ಇದೆ ಎಂದು ಹೆದರಿಸುತ್ತಿದ್ದ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ವಾರ್ಡನ್

Share This Article