ಚಿಕ್ಕಮಗಳೂರು: ಕಾಡಾನೆ (Elephant) ದಾಳಿಯಿಂದ ಮಹಿಳೆ ಸಾವನ್ನಪ್ಪಿದ ಘಟನೆ ಎನ್.ಆರ್ ಪುರ (NRpura) ತಾಲೂಕಿನ ಬನ್ನೂರು ಬಳಿ ನಡೆದಿದೆ.
ಮೃತ ಮಹಿಳೆಯನ್ನು ದಾವಣಗೆರೆಯ (Davanagere) ಹೊನ್ನಾಳಿ ಮೂಲದ ಅನಿತಾ (25) ಎಂದು ಗುರುತಿಸಲಾಗಿದೆ. ಅವರು ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ಕೆಲಸ ಮುಗಿಸಿ ರಾತ್ರಿ 9 ಗಂಟೆಗೆ ಮನೆಗೆ ವಾಪಸ್ ಆಗುವಾಗ ಆನೆ ದಾಳಿ ಮಾಡಿದೆ.
ತೀವ್ರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.