Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ವಂಚನೆ | ರಾಹುಲ್‌ ಆರೋಪಕ್ಕೆ ಹೈಕೋರ್ಟ್ ತೀರ್ಪಿಗಾಗಿ ಕಾಯಿರಿ ಎಂದ ಚುನಾವಣಾ ಆಯೋಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕರ್ನಾಟಕದಲ್ಲಿ ವಂಚನೆ | ರಾಹುಲ್‌ ಆರೋಪಕ್ಕೆ ಹೈಕೋರ್ಟ್ ತೀರ್ಪಿಗಾಗಿ ಕಾಯಿರಿ ಎಂದ ಚುನಾವಣಾ ಆಯೋಗ

Latest

ಕರ್ನಾಟಕದಲ್ಲಿ ವಂಚನೆ | ರಾಹುಲ್‌ ಆರೋಪಕ್ಕೆ ಹೈಕೋರ್ಟ್ ತೀರ್ಪಿಗಾಗಿ ಕಾಯಿರಿ ಎಂದ ಚುನಾವಣಾ ಆಯೋಗ

Public TV
Last updated: July 24, 2025 6:57 pm
Public TV
Share
2 Min Read
Rahul Gandhi 4
SHARE

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕರ್ನಾಟಕದ (Karnataka) ಒಂದು ಕ್ಷೇತ್ರದಲ್ಲಿ ವಂಚನೆ ನಡೆದಿದೆ ಎಂಬ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಆರೋಪ ಆಧಾರರಹಿತ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ ಎಂದು ANI ವರದಿ ಮಾಡಿವೆ.

ಹೈಕೋರ್ಟ್‌ ತೀರ್ಪಿಗಾಗಿ ಕಾಯಲಾಗುತ್ತಿದೆ. ತೀರ್ಪು ಬರೋವರೆಗೆ ಕಾಯಬೇಕು. ಆಧಾರ ರಹಿತ ಆರೋಪಗಳು ಯಾಕೆ ಮಾಡಲಾಗುತ್ತಿದೆ ಎಂದು ಆಯೋಗ ಪ್ರಶ್ನಿಸಿದೆ.

ರಾಹುಲ್‌ ಗಾಂಧಿ ಹೇಳಿದ್ದೇನು?
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ವಿಪಕ್ಷಗಳು ಮಾಡುತ್ತಿರುವ ಹೋರಾಟ ಹೊಸ ತಿರುವು ಪಡೆದುಕೊಂಡಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. 2024ರ ಲೋಕಸಭೆ ಚುನಾವಣೆ (Lok Sabha Election) ವೇಳೆ ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ (Karnataka) ಕಳ್ಳಾಟವಾಗಿದೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ

ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು, ಅಲ್ಲಿನ ಚುನಾವಣಾ ಪ್ರಕ್ರಿಯೆ ಬಗ್ಗೆ ಆಳವಾದ ಅಧ್ಯಯನ ನಡೆಸಿದ್ದೆವು. ಬೋಗಸ್ ವೋಟಿಂಗ್ ಬಗ್ಗೆ ಇಂಚಿಂಚು ಮಾಹಿತಿ ನಮಗೆ ಲಭ್ಯವಾಗಿದೆ. ಎಲ್ಲಾ ವಿಚಾರಗಳನ್ನು ಸದ್ಯದಲ್ಲೇ ಜನರ ಮುಂದೆ ಇಡಲಿದ್ದೇವೆ. ಎಲ್ಲಾ ಕಳ್ಳಾಟ ಸದ್ಯದಲ್ಲೇ ಹೊರಬರಲಿದೆ ಎಂದು ಹೇಳಿದ್ದಾರೆ.

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ನಂತರ ಬಿಹಾರದಾದ್ಯಂತ (Bihar) 56 ಲಕ್ಷ ಜನರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗುವುದು ಎಂದು ಚುನಾವಣಾ (Election Commission) ಆಯೋಗ ಹೇಳಿದ್ದಕ್ಕೆ ವಿಪಕ್ಷಗಳು ಈಗ ಭಾರೀ ಪ್ರತಿಭಟನೆ ನಡೆಸುತ್ತಿವೆ. ಇದನ್ನೂ ಓದಿ: Madikeri | ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಶವ ಪತ್ತೆ – ಕೊಲೆ ಶಂಕೆ, ಕುಟುಂಬಸ್ಥರಿಂದ ದೂರು

ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಚುನಾವಣಾ ಆಯೋಗ, ಮತದಾರರ ಪಟ್ಟಿಯಲ್ಲಿ ಲೋಪದೋಷಗಳಿದ್ದರೆ ಅದನ್ನು ಸರಿಪಡಿಸಲು 1 ತಿಂಗಳ ಅವಕಾಶ ನೀಡಲಾಗುತ್ತದೆ. ಈ ಅವಧಿಯೊಳಗಡೆ ಪಟ್ಟಿಯಿಂದ ಹೆಸರು ಡಿಲೀಟ್‌ ಆಗಿದ್ದರೆ ಅರ್ಹ ಮತದಾರರು ಆಯೋಗದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದೆ.

ಚುನಾವಣಾ ಸಮಯದಲ್ಲೇ ವಿಶೇಷ ತೀವ್ರ ಪರಿಷ್ಕರಣೆಯನ್ನು ಪ್ರಶ್ನಿಸಿ ವಿಪಕ್ಷಗಳು ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿಗೆ ಸಲ್ಲಿಸಿದ್ದವು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್‌ ತಡೆ ನೀಡದೇ ಚುನಾವಣಾ ಆಯೋಗಕ್ಕೆ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು ಅನುಮತಿ ನೀಡಿತ್ತು.

TAGGED:BiharBihar ElectionelectionkarnatakaRahul Gandhiಕರ್ನಾಟಕಚುನಾವಣಾ ಆಯೋಗಬಿಹಾರಬಿಹಾರ ಚುನಾವಣೆರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

Indias energy supplies
Latest

ನಮಗೆ ಯಾರ ಅಪ್ಪಣೆಯೂ ಬೇಕಿಲ್ಲ: ರಷ್ಯಾ ತೈಲ ಖರೀದಿಗೆ ಅಮೆರಿಕ ವಿನಾಯಿತಿ ಬಗ್ಗೆ ಭಾರತ ಖಡಕ್‌ ಮಾತು

Public TV
By Public TV
6 minutes ago
Gujarat Girls Suicide
Crime

ದೇವಾಲಯದ ಸ್ನಾನಗೃಹದಲ್ಲಿ ಇಬ್ಬರು ಹುಡುಗಿಯರ ಮೃತದೇಹ ಪತ್ತೆ

Public TV
By Public TV
33 minutes ago
Train
Latest

ಟಿ20 ವಿಶ್ವಕಪ್‌ಗೆ ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

Public TV
By Public TV
58 minutes ago
Iranian President Masoud Pezeshkian
Latest

ನೆರೆ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸುತ್ತೇನೆ: ಇರಾನ್‌ ಅಧ್ಯಕ್ಷ ಮಸೌದ್‌

Public TV
By Public TV
1 hour ago
DK Shivakumar 11
Bengaluru City

ಸಿಎಂ ಬಜೆಟ್‌ ಮಂಡನೆ ಬೆನ್ನಲ್ಲೇ ದೆಹಲಿಗೆ ತೆರಳಲಿದ್ದಾರೆ ಡಿಕೆಶಿ

Public TV
By Public TV
2 hours ago
UP DCM Keshav Prasad Maurya
Latest

ಯುಪಿ ಡಿಸಿಎಂ ಕೇಶವಪ್ರಸಾದ್ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ – ಲಕ್ನೋದಲ್ಲಿ ತುರ್ತು ಭೂಸ್ಪರ್ಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?