ಕಾಫಿನಾಡಲ್ಲಿ ಮಳೆ ಅಬ್ಬರ – 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Public TV
1 Min Read
Rain Holiday Students 2
AI Generated Image

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ (Chikkamagaluru) ಮಳೆಯ ಆರ್ಭಟ ಮುಂದುವರೆದಿದೆ. ಕಳೆದ 2-3 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ (Rain) ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾಗಿರುವ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಐದು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು (ಶನಿವಾರ) ರಜೆ (Holiday) ಘೋಷಿಸಲಾಗಿದೆ.

ಕೊಪ್ಪ, ಶೃಂಗೇರಿ, ಮೂಡಿಗೆರೆ, ಕಳಸ, ನರಸಿಂಹರಾಜಪುರ ತಾಲೂಕು ಸೇರಿದಂತೆ ಚಿಕ್ಕಮಗಳೂರು ತಾಲೂಕಿನ ಮಲೆನಾಡು ಭಾಗದ ಐದು ಹೋಬಳಿಗಳಾದ ಆವುತಿ, ಜಾಗರ, ವಸ್ತಾರೆ, ಖಾಂಡ್ಯದ ಅಂಗನವಾಡಿ, ಶಿಶುಪಾಲನಾ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ – ಇಂದಿನಿಂದ ಎಸ್‌ಐಟಿ ತನಿಖೆ ಆರಂಭ

ಇನ್ನು ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಬಳಿ ಶುಕ್ರವಾರ ಬೃಹತ್ ಮರವೊಂದು ರಾಷ್ಟ್ರೀಯ ಹೆದ್ದಾರಿ 173ರಲ್ಲಿ ರಸ್ತೆಗುರುಳಿದ ಪರಿಣಾಮ ಎರಡು ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಹಾಗೂ ಪ್ರಯಾಣಿಕರು ಪರದಾಡಿದ್ದಾರೆ. ಮಳೆ ಮಧ್ಯೆ ಮರ ತೆರವು ಕಾರ್ಯಾಚರಣೆಗೆ ಗ್ರಾಮಾಂತರ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಪರದಾಡಿದ್ದಾರೆ. ಬಳಿಕ ಪೊಲೀಸರು ಕಾರು-ಬೈಕ್ ಹೋಗಲು ಅನುವು ಮಾಡಿಕೊಟ್ಟು ಮರ ತೆರವು ಮಾಡಿದ ಬಳಿಕ ಲಾರಿ ಹಾಗೂ ಬಸ್ಸುಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್

Share This Article