ಬೀದರ್: ಅತ್ಯಾಚಾರ ಆರೋಪ ಹೊತ್ತಿರುವ ಬಿಜೆಪಿ ಶಾಸಕ ಪ್ರಭು ಚೌಹಾಣ್ (Prabhu Chauhan) ಪುತ್ರ ಪ್ರತೀಕ್ ಚೌಹಾಣ್ ಬಂಧನ ಭೀತಿಯಲ್ಲಿದ್ದು, ಜಾಮೀನಿಗಾಗಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಚೌಹಾಣ್ ಪುತ್ರನ ಪರ ವಕೀಲ ಎಂ.ಎಂ.ಗೋಡ್ಬಲೆಯಿಂದ ನಿರೀಕ್ಷಣಾ ಜಾಮೀನುಗಾಗಿ ಕೋರ್ಟ್‌ಗೆ ಮಂಗಳವಾರ ಅರ್ಜಿ ಸಲ್ಲಿಸಲಾಗಿದೆ. ಇಂದು ವಾದ-ಪ್ರತಿವಾದ ಆಲಿಸಿದ ಜಿಲ್ಲಾ ಸತ್ರ ನ್ಯಾಯಾಲಯ ಆವೇಶವನ್ನು ಇದೇ ತಿಂಗಳು 31 ಕ್ಕೆ ಮುಂದೂಡಲಾಗಿದೆ. ಇದನ್ನೂ ಓದಿ: ನಂಗೆ ಯಾರೂ ಬಾಯ್‌ಫ್ರೆಂಡ್ ಇಲ್ಲ, 4 ತಿಂಗಳು ನನ್ನ ಫೋನ್ ಪ್ರತೀಕ್ ಚೌಹಾಣ್ ಬಳಿ ಇತ್ತು: ಸಂತ್ರಸ್ತೆ
ನೀರಿಕ್ಷಣಾ ಜಾಮೀನು ಆದೇಶವನ್ನು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾದೀಶ ಬಿ.ಕೆ ಕೋಮಲಾ ಅವರು 31ಕ್ಕೆ ಮೂಂದೂಡಿದ್ದಾರೆ. ಹೀಗಾಗಿ, ಬಂಧನದ ಭೀತಿಯಿಂದ ಸಚಿವ ಚೌಹಾಣ್ ಪುತ್ರನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಚೌಹಾಣ್ ಪುತ್ರನಿಗೆ ನೀರಿಕ್ಷಣಾ ಜಾಮೀನು ನೀಡದಂತೆ ಕೋರ್ಟ್‌ಗೆ ಸಂತ್ರಸ್ತೆ ಪರ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಬೀದರ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ನನ್ನನ್ನು ಮುಗಿಸಬೇಕು ಅಂತ ಭಗವಂತ್ ಖೂಬಾ ಪಿತೂರಿ ಮಾಡಿದ್ದಾರೆ: ಪ್ರಭು ಚೌಹಾಣ್ ಗಂಭೀರ ಆರೋಪ
ಬಿಜೆಪಿ ಶಾಸಕರ ಪುತ್ರನ ವಿರುದ್ಧ ಯುವತಿಯೊಬ್ಬಳು ಅತ್ಯಾಚಾರ ಕೇಸ್ ದಾಖಲಿಸಿದ್ದರು. ಮದುವೆಯಾಗುವುದಾಗಿ ನಂಬಿಸಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಗಂಭೀರ ಆರೋಪ ಮಾಡಿದ್ದರು.