26 ಸಾಕ್ಷಿಗಳ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Special Court) ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿಯೋ ಅಥವಾ ಅಲ್ಲವೋ ಎಂದು ಇಂದು ತೀರ್ಪು ನೀಡಲಿದೆ. ಕಳೆದ 14 ತಿಂಗಳಿನಿಂದ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ಈ ತೀರ್ಪು ಬಹಳ ಮಹತ್ವದ್ದಾಗಿರಲಿದೆ.ಇದನ್ನೂ ಓದಿ: Shivamogga | ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ – ಇಬ್ಬರು ದುರ್ಮರಣ, 13ಕ್ಕೂ ಹೆಚ್ಚು ಮಂದಿಗೆ ಗಾಯ
ಈಗಾಗಲೇ ಕೆಆರ್ ನಗರ ಸಂತ್ರಸ್ತೆಯ ಅತ್ಯಾಚಾರ ಕೇಸ್‌ಲ್ಲಿ ವಾದ-ಪ್ರತಿವಾದ ಮುಕ್ತಾಯವಾಗಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜು.30ಕ್ಕೆ ಆದೇಶ ಕಾಯ್ದಿರಿಸಿತ್ತು. ಕೆ.ಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿತ್ತು. ಸದ್ಯ ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಇಂದಿನ ಪ್ರಕರಣದ ಕೇಸ್ ಖುಲಾಸೆಯಾದ್ರೂ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಇನ್ನೂ ಮೂರು ಪ್ರಕರಣಗಳು ಬಾಕಿ ಇರೋದ್ರಿಂದ ಕೇಸ್ ಖುಲಾಸೆಯಾದ್ರೂ ಬಿಡುಗಡೆ ಆಗೋದು ಅನುಮಾನವಾಗಿದೆ.
ಏನಿದು ಪ್ರಕರಣ?
ಕೆ.ಆರ್.ನಗರ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ನಂತರ ವಿಷಯ ಹೊರಗೆ ಬರುತ್ತೆ ಎಂದು ತಿಳಿದು ಸಂತ್ರಸ್ತೆಯನ್ನು ರೇವಣ್ಣ, ಭವಾನಿ, ಸತೀಶ್ ಬಾಬು ಸೇರಿದಂತೆ 9 ಜನ ಸೇರಿಕೊಂಡು ಅಪಹರಿಸಿದ್ದರು. ಬಳಿಕ ಆಕೆಯನ್ನು ಹುಣಸೂರು ಬಳಿಯ ತೋಟದ ಮನೆಯೊಂದರಲ್ಲಿ ಕೂಡಿ ಹಾಕಲಾಗಿತ್ತು. ಇದೇ ಅಪಹರಣ ಪ್ರಕರಣದಿಂದಲೇ ರೇವಣ್ಣ ಸೇರಿದಂತೆ 8 ಜನ ಜೈಲಿಗೆ ಹೋಗಿದ್ದರು. ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಬಳಿಕ ನಿರೀಕ್ಷಣಾ ಜಾಮೀನು ಪಡೆದಿದ್ದರು.
ಆನಂತರ ಸಂತ್ರಸ್ತೆಯನ್ನು ರಕ್ಷಿಸಿದ ಎಸ್‌ಐಟಿ, ಆಕೆಯ ಹೇಳಿಕೆ ದಾಖಲು ಮಾಡಿ ಪ್ರಕರಣ ದಾಖಲಿಸಿತ್ತು. ಹೇಳಿಕೆಯ ಮೇಲೆ ತನಿಖೆ ಮಾಡಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಬಳಿಕ ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಸಂತ್ರಸ್ತೆಯನ್ನು ಬೆತ್ತಲುಗೊಳಿಸಿ ಬಲವಂತವಾಗಿ ಲೈಂಗಿಕ ಕಿರುಕುಳ ನೀಡಿದ್ದ ವಿಡಿಯೋವೊಂದು ಪತ್ತೆಯಾಗಿತ್ತು. ಇದು ಪ್ರಕರಣದ ಬಹುದೊಡ್ಡ ಸಾಕ್ಷ್ಯವಾಗಿ ಪರಿಣಮಿಸಿತು. ಕೊನೆಗೆ ಎಫ್‌ಎಸ್‌ಎಸ್ ಮೂಲಕ ವಿಡಿಯೋ ತುಣುಕಿನಲ್ಲಿರುವುದು ಪ್ರಜ್ವಲ್ ರೇವಣ್ಣ ಎನ್ನುವುದು ಸಾಬೀತಾಗಿತ್ತು.
ಕಳೆದ ಲೋಕಸಭಾ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ದೃಶ್ಯವಿದ್ದ ಪೆನ್ ಡ್ರೈವ್‌ಗಳನ್ನು ಹಾಸನ ಕ್ಷೇತ್ರದಾದ್ಯಂತ ಹಂಚಲಾಗಿತ್ತು. ಬಳಿಕ ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ್ದ ದೂರಿನ ಆಧಾರದ ಮೇಲೆ ತನಿಖೆ ಆರಂಭವಾಗಿತ್ತು. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ಇತ್ತೀಚಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಪ್ರಜ್ವಲ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.ಇದನ್ನೂ ಓದಿ: ಡಾ.ರಾಜ್ ಅಪಹರಣ ಪ್ರಕರಣಕ್ಕೆ 25 ವರ್ಷ – 2000 ಇಸವಿಯಲ್ಲಿ ಅಪಹರಿಸಿದ್ದ ವೀರಪ್ಪನ್