– ವಿದ್ಯಾರ್ಥಿನಿ ರಕ್ಷಣೆ, ಆರೋಪಿ ಪೊಲೀಸರ ವಶಕ್ಕೆ
ಲಕ್ನೋ: ಕಾಲೇಜಿಗೆ ಬಂದಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು (Student) 19 ವರ್ಷದ ಯುವಕನೊಬ್ಬ ಕಿಡ್ನ್ಯಾಪ್ (Kidnap) ಮಾಡಿದ ಘಟನೆ ಉತ್ತರ ಪ್ರದೇಶದ (Uttar Pradesh) ನೋಯ್ಡಾದ (Noida) ಸೆಕ್ಟರ್-24 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗಿಜೋರ್ ಪ್ರದೇಶದ ಸೆಕ್ಟರ್-53ರ ಖಾಸಗಿ ಶಾಲೆಯ ಮುಂಭಾಗ ವಿದ್ಯಾರ್ಥಿನಿಯನ್ನು ಅಪಹರಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಕಿಡ್ನ್ಯಾಪ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಲವಂತವಾಗಿ ಕಾರಿನೊಳಗೆ ವಿದ್ಯಾರ್ಥಿನಿಯನ್ನ ಹತ್ತಿಸುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೂಡಲೇ ಅಲರ್ಟ್ ಆಗಿ ಕಾರ್ಯಾಚರಣೆ ಮಾಡಿದ ನೋಯ್ಡಾ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪೃಥ್ಲಾ ವೃತ್ತದ ಬಳಿ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ನಾರಾಯಣಪುರ ಜಲಾಶಯದಿಂದ 1.45 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ – ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ
ಆರೋಪಿ ಮೋನೊ ಯಾದವ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು, ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೇ ಆರೋಪಿ ಕಿಡ್ನ್ಯಾಪ್ ಮಾಡಲು ಬಳಸಿದ ಕಾರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ: ಎಸ್‌ಐಟಿ ತನಿಖೆ ವಿಚಾರದಲ್ಲಿ ಸರ್ಕಾರದ ಎಚ್ಚರಿಕೆ ಹೆಜ್ಜೆ