ಬೆಂಗಳೂರು: ರಾಜ್ಯದ ಸುಮಾರು 26 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನಾಳೆ ಮಾದಿಗ ಸಮುದಾಯಗಳಿಂದ ಒಳಮೀಸಲಾತಿಗೆ (Internal Reservation) ಆಗ್ರಹಿಸಿ ಹೋರಾಟ ನಡೆಯಲಿದೆ ಎಂದು ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ (A Narayanaswamy) ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದಿಗರ ಸಂಘಟನೆಗಳ ಸಭೆ ನಡೆಸಿ ಎಲ್ಲ ಜಿಲ್ಲೆಗಳಲ್ಲಿ ಹೋರಾಟಕ್ಕೆ ಸಿದ್ಧತೆ ನಡೆದಿದೆ. ವಿದ್ಯಾರ್ಥಿಗಳು ಸೇರಿದಂತೆ ಸಮುದಾಯದ ಜನರು ಈ ಹೋರಾಟದಲ್ಲಿ ಭಾಗವಹಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಆಗಸ್ಟ್ ಅಂತ್ಯದಿಂದ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಜಾರಿ: ಪರಮೇಶ್ವರ್
ಸದನ ಮುಗಿಯುವ ಒಳಗೆ ಒಳ ಮೀಸಲಾತಿ ಜಾರಿಗೊಳಿಸದೇ ಇದ್ದಲ್ಲಿ ಕಾಂಗ್ರೆಸ್ ಸರ್ಕಾರದ ಮೇಲಿನ ಅನುಮಾನ ದುಪ್ಪಟ್ಟಾಗಲಿದೆ. ಮಾದಿಗರನ್ನು ತಾತ್ಸಾರವಾಗಿ ನೋಡುವುದು ನಿಮ್ಮ ನಿರ್ಲಕ್ಷ್ಯ. ನಾಗಮೋಹನ್‌ದಾಸ್ ವರದಿಯಲ್ಲಿ ಗೊಂದಲ ಸೃಷ್ಟಿಸಲಾಗುತ್ತಿದೆ. ಮಾದಿಗ ಹೋರಾಟದ ಬಿಸಿ ಕಡಿಮೆ ಮಾಡಲು ಹೇಳಿಕೆಗಳನ್ನು ಕೊಡಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಟ ಪ್ರಥಮ್‌ಗೆ ಜೀವ ಬೆದರಿಕೆ ಕೇಸ್ – ಆರೋಪಿಗಳಾದ ಬೇಕರಿ ರಘು, ಯಶಸ್ವಿನಿಗೆ ಜಾಮೀನು ಮಂಜೂರು
ಹೋರಾಟಕ್ಕೆ ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ ಮೊದಲಾದವರು ಅವಶ್ಯಕತೆ ಇಲ್ಲ. ಹೋರಾಟಕ್ಕೆ ಸಹಕರಿಸದಿರಿ ಎಂದು ಹೇಳಿಕೆ ಕೊಡುತ್ತಿದ್ದಾರೆ. ಒಳಮೀಸಲಾತಿ ಗೊಂದಲಕ್ಕೆ ತಾವೇ ಕಾರಣ ಎಂದು ಕಾಂಗ್ರೆಸ್ಸಿನವರು ಒಪ್ಪಿಕೊಂಡಿಲ್ಲ. ಒಳಮೀಸಲಾತಿ ಸಮಸ್ಯೆ ಪರಿಹಾರಕ್ಕೆ ಮುಂದಾಗಿಲ್ಲ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ರಮ್ಯಾಗೆ ಅಶ್ಲೀಲ ಸಂದೇಶ ಕಳಿಸಿದವ್ರಿಗೆ ಶಿಕ್ಷೆ ಆಗ್ಬೇಕು: ರಾಕ್‍ಲೈನ್ ವೆಂಕಟೇಶ್
ನಾಳೆ ನಡೆಯುವ ಹೋರಾಟದಲ್ಲಿ ಎಲ್ಲ ಮಾದಿಗ ಬಂಧುಗಳು ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುವ ಹೋರಾಟದಲ್ಲಿ ಮಾದಿಗ ಸಮುದಾಯದ ಎಲ್ಲ ಉಪಜಾತಿಯವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಇದು ಸಮುದಾಯದ ಶಕ್ತಿ ಪ್ರದರ್ಶನದಂತಿರಲಿ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಕೋರಿದ್ದಾರೆ.