Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಹಾಸ್‌ ಶೆಟ್ಟಿ ಹತ್ಯೆ ಎನ್‌ಐಎಗೆ ಹಸ್ತಾಂತರ; ಅಮಿತ್‌ ಶಾ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಕ್ಯಾ. ಚೌಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಸುಹಾಸ್‌ ಶೆಟ್ಟಿ ಹತ್ಯೆ ಎನ್‌ಐಎಗೆ ಹಸ್ತಾಂತರ; ಅಮಿತ್‌ ಶಾ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಕ್ಯಾ. ಚೌಟ

Dakshina Kannada

ಸುಹಾಸ್‌ ಶೆಟ್ಟಿ ಹತ್ಯೆ ಎನ್‌ಐಎಗೆ ಹಸ್ತಾಂತರ; ಅಮಿತ್‌ ಶಾ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಕ್ಯಾ. ಚೌಟ

Public TV
Last updated: July 31, 2025 7:18 pm
Public TV
Share
3 Min Read
Captain Brijesh Chowta Amit Shah
SHARE

– ಮಂಗಳೂರಿನಲ್ಲಿ ಆದಷ್ಟು ಬೇಗ ಎನ್‌ಐಎ ಕಚೇರಿ ಸ್ಥಾಪಿಸಲು ಗೃಹ ಸಚಿವರಿಗೆ ಸಂಸದ ಮನವಿ

ನವದೆಹಲಿ: ಹಿಂದೂ ಕಾರ್ಯಕರ್ತರ ಹತ್ಯೆ, ಡ್ರಗ್ಸ್ ಮಾಫಿಯಾ, ಭಟ್ಕಳ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಉಗ್ರ ಚಟುವಟಿಕೆಯ ಸ್ಲೀಪರ್ ಸೆಲ್‌ಗಳ ಆತಂಕದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಆದಷ್ಟು ಬೇಗ ರಾಷ್ಟ್ರೀಯ ತನಿಖಾ ದಳ (NIA)ದ ಕಚೇರಿ ಸ್ಥಾಪಿಸಬೇಕೆಂದು ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ (Captain Brijesh Chowta) ಮನವಿ ಸಲ್ಲಿಸಿದ್ದಾರೆ.

ಇಂದು ಬೆಳಗ್ಗೆ ದೆಹಲಿಯಲ್ಲಿ ಸಚಿವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ಸಂಸದರು, ಮಂಗಳೂರು ತನ್ನ ಸೂಕ್ಷ್ಮ ಭೌಗೋಳಿಕ ಸ್ಥಾನದಿಂದಾಗಿ ಮತ್ತು ಭಟ್ಕಳ, ಕಾಸರಗೋಡಿನಂತಹ ಉಗ್ರ ಚಟುವಟಿಕೆಗಳ ಕೇಂದ್ರಗಳಿಗೆ ಹತ್ತಿರವಿರುವುದರಿಂದ, ರಾಷ್ಟ್ರ ವಿರೋಧಿ ಶಕ್ತಿಗಳು ತಮ್ಮ ವಕ್ರ ದೃಷ್ಟಿ ಬೀರಿರುವುದಕ್ಕೆ ಕೆಲವೊಂದು ಘಟನೆಗಳು ಸಾಕ್ಷಿಯಾಗಿವೆ. ಅಲ್ಲದೇ, ನಿಷೇಧಿತ ಪಿಎಫ್‌ಐ ಸಂಘಟನೆ ರಾಜಕೀಯ ಮುಖವಾಣಿ ಎಸ್‌ಡಿಪಿಐ ತನ್ನ ಮೂಲಕ ಹೊಸ ರೂಪ ತಳೆದು ಮುಂದುವರಿದಿರುವುದು ಮಾತ್ರವಲ್ಲದೇ, ಪ್ರಜಾಪ್ರಭುತ್ವದ ವೇದಿಕೆಗಳನ್ನು ಬಳಸಿಕೊಂಡು ತಮ್ಮ ಮೂಲಭೂತವಾದಿ, ಅಜೆಂಡಾಗಳನ್ನು ಮುಂದುವರೆಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆಗೂ ಮುನ್ನ ಭರ್ಜರಿ ಪಾರ್ಟಿ ಮಾಡಿದ್ದ ಆರೋಪಿಗಳು!

Hindu activist suhas shetty brutally murdered in Bajpe Mangaluru

ಜಿಲ್ಲೆಯಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ಬಂಧನಗಳು ಮತ್ತು ಚಟುವಟಿಕೆಗಳು ಕಳೆದ 10 ವರ್ಷಗಳಲ್ಲಿ ಹೆಚ್ಚಾಗಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಯ ಪ್ರಮುಖ ಸದಸ್ಯರು ಸೇರಿದಂತೆ ಒಟ್ಟು 21 ಆರೋಪಿಗಳನ್ನು ಎನ್‌ಐಎ ತನಿಖಾಧಿಕಾರಿಗಳು ಈಗಾಗಲೇ ಬಂಧಿಸಿದ್ದಾರೆ. ಪಿಎಫ್‌ಐ ಸಂಘಟನೆಯ ಗುಪ್ತ ಭಾಗವಾಗಿದ್ದ ಸರ್ವೀಸ್ ಟೀಂನ ಅಸ್ತಿತ್ವ, ರಹಸ್ಯ ಸಭೆಗಳು, ತರಬೇತಿ ಕೇಂದ್ರದ ಬಗ್ಗೆಯೂ ಎನ್‌ಐಎ ತನಿಖೆಗಳು ಬೆಳಕು ಚೆಲ್ಲಿತ್ತು. ಹೀಗಿರುವಾಗ, ಮಂಗಳೂರಿನಲ್ಲಿ ಎನ್‌ಐಎ ಕಚೇರಿ ಆರಂಭಿಸುವ ಅಗತ್ಯತೆಯನ್ನು ಕ್ಯಾ. ಚೌಟ ಅವರು ಗೃಹ ಸಚಿವರಿಗೆ ಮನವರಿಕೆ ಮಾಡಿದ್ದಾರೆ.

ಈ ನಡುವೆ, ಕಡಲ ನಗರಿಯಲ್ಲಿ ಡ್ರಗ್ಸ್ ಮಾಫಿಯಾಕ್ಕೆ ಅಂಕುಶ ಹಾಕಲು ವಿನಂತಿಸಿರುವ ಸಂಸದ ಕ್ಯಾ. ಚೌಟ ಅವರು, ಕಳೆದ ಮಾರ್ಚ್‌ನಲ್ಲಿ ಮಂಗಳೂರಿನಲ್ಲಿ 75 ಕೋಟಿ ಮೌಲ್ಯದ 37 ಕೆ.ಜಿ.ಗೂ ಹೆಚ್ಚು ಎಂಡಿಎಂಎ ವಶಪಡಿಸಿಕೊಳ್ಳಲಾಗಿದ್ದು, ಅಂತರರಾಷ್ಟ್ರೀಯ ಮಾದಕ ವಸ್ತು ಜಾಲಕ್ಕೆ ಸಂಬಂಧಿಸಿದ ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿತ್ತು. ಪ್ರಸಕ್ತ ವರ್ಷದಲ್ಲೇ ಇಲ್ಲಿವರೆಗೆ ಜಿಲ್ಲೆಯಲ್ಲಿ 375ಕ್ಕೂ ಹೆಚ್ಚು ಎನ್‌ಡಿಪಿಎಸ್ ಪ್ರಕರಣಗಳು ದಾಖಲಾಗಿದ್ದು, 67ಕ್ಕೂ ಹೆಚ್ಚು ವ್ಯಕ್ತಿಗಳು ಬಂಧನವಾಗಿರುವ ಬಗ್ಗೆ ಅಂಕಿ-ಅಂಶಗಳಿವೆ. ಡ್ರಗ್ಸ್ ಚಟುವಟಿಕೆಗಳು ಭಯೋತ್ಪಾದನಾ ಕೃತ್ಯಗಳಿಗೆ ಹಣಕಾಸಿನ ನೆರವು, ಕುಮ್ಮಕ್ಕು ಒದಗಿಸುವುದಲ್ಲದೇ, ಸಾಮಾಜಿಕ ಅಸ್ಥಿರತೆ, ಅಪರಾಧ ಹಾಗೂ ಗಡಿಗಳಲ್ಲಿ ಭದ್ರತಾ ಸವಾಲುಗಳನ್ನು ಹೆಚ್ಚಿಸುವ ಮೂಲಕ ರಾಷ್ಟ್ರೀಯ ಭದ್ರತೆಗೂ ಗಂಭೀರ ಬೆದರಿಕೆಯಾಗುತ್ತಿದೆ ಎಂದು ಸಂಸದರು ಗೃಹ ಸಚಿವರಿಗೆ ನೀಡಿರುವ ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ವೇಳೆ ಕಾಣಿಸಿಕೊಂಡಿದ್ದ ಬುರ್ಖಾಧಾರಿ ಮಹಿಳೆಯರ ಬಗ್ಗೆ ಪೊಲೀಸ್‌ ಕಮಿಷನರ್ ಹೇಳಿದ್ದೇನು?

Praveen Nettar copy

ಎನ್‌ಐಎ ಇತ್ತೀಚೆಗೆ ಮಂಗಳೂರಿನಲ್ಲಿ ತನ್ನ ಕಾರ್ಯ ಚಟುವಟಿಕೆಗಳನ್ನು ಹೆಚ್ಚಿಸಿರುವುದು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಿದ್ದು, ಜಿಹಾದಿ ಉಗ್ರವಾದ, ಸಂಘಟಿತ ಅಪರಾಧ ಮತ್ತು ಅಂತರರಾಷ್ಟ್ರೀಯ ಕಳ್ಳಸಾಗಣೆ ಸೇರಿದಂತೆ ಪುನರಾವರ್ತಿತ ಬೆದರಿಕೆಗಳನ್ನು ಪರಿಗಣಿಸಿ, ಮಂಗಳೂರಿನಲ್ಲಿ ಸಮಗ್ರ ಗುಪ್ತಚರ ಸಮನ್ವಯ ಮತ್ತು ಕಾರ್ಯಾಚರಣೆಯ ಸಾಮರ್ಥ್ಯದೊಂದಿಗೆ ಶಾಶ್ವತವಾದ ಸಂಪೂರ್ಣ ಸುಸಜ್ಜಿತ ಎನ್‌ಐಎ ಕಚೇರಿಯನ್ನು ಸ್ಥಾಪಿಸಲು ವಿನಂತಿಸಿದ್ದು, ಇದರಿಂದ ಇಡೀ ದಕ್ಷಿಣ ಭಾರತಕ್ಕೆ ಒಂದು ದೃಢ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದಕ್ಕೆ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಎನ್‌ಐಎ ಕಚೇರಿ ಸ್ಥಾಪಿಸುವ ಕರಾವಳಿಗರ ಬೇಡಿಕೆಯನ್ನು ಆದಷ್ಟು ಬೇಗ ಕಾರ್ಯರೂಪಕ್ಕೆ ತರಬೇಕೆಂದು ಎಂದು ಕ್ಯಾ. ಬ್ರಿಜೇಶ್ ಚೌಟ ಅವರು ಗೃಹ ಸಚಿವ ಅಮಿತ್‌ ಶಾ ಅವರಲ್ಲಿ ವಿನಂತಿಸಿದ್ದಾರೆ.

ಮೂರು ತಿಂಗಳ ಹಿಂದೆ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಕೇಂದ್ರ ಸರ್ಕಾರವು ಇತ್ತೀಚೆಗೆ ಎನ್‌ಐಎ ತನಿಖೆಗೆ ವಹಿಸಿದೆ. ಪ್ರಕರಣದ ಗಂಭೀರತೆ ಅರಿತು ಸುಹಾಸ್‌ ಹತ್ಯೆಯನ್ನು ಎನ್‌ಐಎ ತನಿಖೆಗೆ ಹಸ್ತಾಂತರಿಸುವಲ್ಲಿ ಕೇಂದ್ರ ಗೃಹ ಸಚಿವರು ಮುತುವರ್ಜಿ ವಹಿಸಿ ತ್ವರಿತ ಕ್ರಮ ಕೈಗೊಂಡಿರುವುದಕ್ಕೆ ಸಂಸದ ಬ್ರಿಜೇಶ್ ಚೌಟ ಅವರು ಇಂದು ಅಮಿತ್‌ ಶಾ ಅವರನ್ನು ಭೇಟಿಯಾದ ವೇಳೆ ಸುಹಾಸ್ ಹೆತ್ತವರು, ಕಾರ್ಯಕರ್ತರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ. ಈ ನಿರ್ಧಾರವು ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸುವ ಭರವಸೆ ನೀಡಿದೆ ಮತ್ತು ದಕ್ಷಿಣ ಕನ್ನಡದ ಜನತೆಗೆ ಭದ್ರತೆಯ ಭಾವನೆಯನ್ನು ಹೆಚ್ಚಿಸಲಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ರಕ್ತಕ್ಕೆ ರಕ್ತವೇ ಉತ್ತರ, ಸುಹಾಸ್‌ ಹತ್ಯೆ ಬಳಿಕ ಪ್ರತೀಕಾರದ ಪೋಸ್ಟ್‌ – 12 ಎಫ್‌ಐಆರ್‌ ದಾಖಲು

TAGGED:Amit ShahCaptain Brijesh ChowtaMangalurusuhas shettyಅಮಿತ್ ಶಾಕ್ಯಾಪ್ಟನ್‌ ಬ್ರಿಜೇಶ್‌ ಚೌಟಮಂಗಳೂರುಸುಹಾಸ್ ಶೆಟ್ಟಿ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

Flight Seat
Latest

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ – ಇನ್ಮುಂದೆ ವಿಮಾನದ ಶೇ.60ರಷ್ಟು ಸೀಟುಗಳ ಆಯ್ಕೆ ಫ್ರೀ

Public TV
By Public TV
12 minutes ago
UPSC Rank Bihar Youth Arrest
Chikkaballapur

ಕನ್ನಡಿಗ ಪಡೆದಿದ್ದ ರ‍್ಯಾಂಕ್‌ ತನ್ನದೆಂದು ಹೇಳಿ ಸನ್ಮಾನ – ಬಿಹಾರದ ಯುವಕ ಅರೆಸ್ಟ್

Public TV
By Public TV
14 minutes ago
PRAJWAL REVANNA 1
Bengaluru City

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
20 minutes ago
hailstorm in bengaluru weekend holiday traffic jams many roads in bengaluru ugadi ramzan
Bengaluru City

ಸಾಲು ಸಾಲು ರಜೆ ಊರಿಗೆ ಹೊರಡುವಾಗಲೇ ಆಲಿಕಲ್ಲು ಮಳೆ – ಬೆಂಗಳೂರಿನ ಹಲವು ರಸ್ತೆಗಳಲ್ಲಿ ಟ್ರಾಫಿಕ್‌ ಜಾಮ್‌

Public TV
By Public TV
46 minutes ago
ಸಾಂದರ್ಭಿಕ ಚಿತ್ರ
Bellary

ಕೊಲ್ಲಿ ಯುದ್ಧದಿಂದ ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿ ಜೀನ್ಸ್ ಉದ್ಯಮ – 20 ಲಕ್ಷ ಪ್ರಾಡಕ್ಟ್‌ಗಳ ರಫ್ತು ಸ್ಥಗಿತ

Public TV
By Public TV
2 hours ago
krishna byre gowda
Bengaluru City

KPSC Row| ಒಂದೇ ಕೊಠಡಿಯಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಪಾಸ್‌ – ವಿವಾದಕ್ಕೆ ಉತ್ತರ ಕೊಟ್ಟ ಕೃಷ್ಣಬೈರೇಗೌಡ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?