– 5 ಲಕ್ಷ ರೂ. ಹಣಕ್ಕೆ ಸಹಾಯಕ ಪ್ರಾಧ್ಯಾಪಕನಿಗೆ ಡಿಮ್ಯಾಂಡ್ ಇಟ್ಟಿದ್ದ ಕಿಡ್ನ್ಯಾಪರ್ಸ್
ಬೆಂಗಳೂರು: ಟ್ಯೂಷನ್‌ಗೆ ಹೋಗ್ತಿದ್ದ ಬಾಲಕನನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆನೇಕಲ್ (Anekal) ಬಳಿ ನಡೆದಿದೆ.
13 ವರ್ಷದ ನಿಶ್ಚಿತ್ ಹತ್ಯೆಯಾದ ಬಾಲಕ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಅರಕೆರೆ ಶಾಂತಿನಿಕೇತನ ಬಡಾವಣೆ ಬಳಿ ಟ್ಯೂಷನ್‌ನಿಂದ ಬರುತ್ತಿದ್ದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿದ್ದರು. ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಅಡ್ಡಿ – ಪ್ರಿಯಕರನ ಜೊತೆಗೂಡಿ ಪತಿಯನ್ನೇ ಕೆರೆಗೆ ತಳ್ಳಿ ಕೊಂದ ಪತ್ನಿ
ಬಾಲಕನ ತಂದೆ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿದ್ದರಿಂದ ಕಿಡ್ನ್ಯಾಪರ್ಸ್ ಕರೆ ಮಾಡಿ 5 ಲಕ್ಷ ರೂ. ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಕಿಡ್ನ್ಯಾಪರ್ಸ್ ಕಡೆಯಿಂದ ಫೋನ್ ಬರ್ತಿದ್ದಂತೆ ಬಾಲಕ ಪೋಷಕರು ಹುಳಿಮಾವು (Hulimavu Police) ಠಾಣೆಗೆ ದೂರು ನೀಡಿದ್ದರು. ಇದನ್ನೂ ಓದಿ: ಟೇಕಾಫ್ ಆಗ್ಬೇಕಿದ್ದ ಫ್ಲೈಟ್‌ನಲ್ಲಿ ತಾಂತ್ರಿಕ ದೋಷ – ದೆಹಲಿಯಿಂದ ಲಂಡನ್‌ಗೆ ಹೊರಟಿದ್ದ ಬೋಯಿಂಗ್ ವಿಮಾನ ರದ್ದು
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಿಡ್ನ್ಯಾಪರ್ಸ್‌ಗಾಗಿ ಹುಡುಕಾಟ ಆರಂಭಿಸಿದ್ದರು. ಪೊಲೀಸರು ಲೊಕೇಶನ್ ಟ್ರೇಸ್ ಮಾಡಿ ಕಿಡ್ನ್ಯಾಪರ್ಸ್‌ಗಾಗಿ ಹುಡುಕಾಟ ನಡೆಸಿದ್ದರು. ಮತ್ತೊಂದೆಡೆ 5 ಲಕ್ಷ ರೂ. ಹಣವನ್ನು ಕೈಯಲ್ಲಿಡಿದು ಪೋಷಕರು ಕಾದು ಕುಳಿತ್ತಿದ್ದರು.
ಆದರೆ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಕಗ್ಗಲೀಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಬಾಲಕನ ಮೃತದೇಹ ಸುಟ್ಟ ರೀತಿಯಲ್ಲಿ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್ ಹಾಗೂ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಹುಳಿಮಾವು ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.