ಟೀಕೆಯಿಂದ ಖಿನ್ನತೆಗೆ ಜಾರಿದ್ದೆ, ಆತ್ಮಹತ್ಯೆಗೆ ಯೋಚಿಸಿದ್ದೆ – ಮೌನ ಮುರಿದ ಚಹಲ್‌

Public TV
3 Min Read
Yuzvendra Chahal Dhanashree Verma 2

– ಪತ್ನಿಗೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗುತ್ತಿರಲಿಲ್ಲ
– ಎಸಿ ಆನ್‌ ಆಗಿದ್ದರೂ ನಾನು ಬೆವರುತ್ತಿದ್ದೆ

ಮುಂಬೈ: ನಮ್ಮ ದಾಂಪತ್ಯದ ಕುರಿತ ಸುದ್ದಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ, ಟೀಕೆ ನೋಡಿ ಖಿನ್ನತೆಗೆ ಜಾರಿದ್ದೆ. ಈ ಸಂದರ್ಭದಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆಯೂ ಯೋಚಿಸಿದ್ದೆ ಎಂದು ಟೀಂ ಇಂಡಿಯಾ ಸ್ಪಿನ್ನರ್‌ ಯಜುವೇಂದ್ರ ಚಹಲ್‌ (Yuzvendra Chahal) ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಧನಶ್ರೀ ವರ್ಮಾಗೆ (Dhanashree Verma) ವಿಚ್ಛೇದನ (Divorce) ನೀಡಿದ ವಿಚಾರದ ಬಗ್ಗೆ ಇದೇ ಮೊದಲ ಬಾರಿಗೆ ಚಹಲ್‌ ಮೌನ ಮುರಿದಿದ್ದಾರೆ. ರಾಜ್ ಶಮಾನಿ ಯೂಟ್ಯೂಬ್ ಚಾನಲ್‌ನಲ್ಲಿ ವಿಚ್ಛೇದನದ ಬಗ್ಗೆ ಸಾಕಷ್ಟು ವಿಚಾರ ತಿಳಿಸಿದ್ದಾರೆ.

ಸುಮಾರು 5 ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ್ದ ಯಜುವೇಂದ್ರ ಮತ್ತು ಧನಶ್ರೀ ಅವರಿಗೆ ಈ ವರ್ಷದ ಮಾರ್ಚ್ 20 ರಂದು ಬಾಂಬೆ ಹೈಕೋರ್ಟ್ ವಿಚ್ಛೇದನ ನೀಡಿತ್ತು. ಡಿವೋರ್ಸ್‌ ಪಡೆಯುವ ಕೆಲ ತಿಂಗಳ ಮೊದಲು ಆತ್ಮಹತ್ಯೆಯ ಆಲೋಚನೆಗಳು ಬರುತ್ತಿದ್ದವು ಎಂದು ಚಹಲ್‌ ಹೇಳಿದರು.

Yuzvendra Chahal Dhanashree Verma 1

ಚಹಲ್‌ ಹೇಳಿದ್ದೇನು?
ಡಿಸೆಂಬರ್-ಜನವರಿ (2024–25) ತಿಂಗಳುಗಳಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿಯ ಸಮಯದಲ್ಲಿ ನಾನು ರಾಜ್ಯ ಕ್ರಿಕೆಟ್‌ ತಂಡದಿಂದ ವಿರಾಮ ಕೇಳಿದ್ದೆ. ನಮ್ಮಿಬ್ಬರ ಮಧ್ಯೆ ಹೊಂದಾಣಿಕೆಯಾಗದ ಕಾರಣ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದೆ.  ಇದನ್ನೂ ಓದಿ: 5 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ ಚಹಲ್‌, ಧನಶ್ರೀ – ಮುಂಬೈ ಕೋರ್ಟ್‌ನಲ್ಲಿ ಏನಾಯ್ತು?

ಈ ಸುದ್ದಿ ಪ್ರಕಟವಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ (Social Media) ಬರುತ್ತಿದ್ದ ಚರ್ಚೆ, ಟೀಕೆಗಳನ್ನು ನೋಡಿ ಖಿನ್ನತೆಗೆ ಜಾರಿದ್ದೆ. ಕ್ರಿಕೆಟಿನಿಂದ ವಿರಾಮ ಪಡೆದರೂ ನಾನು ನಡುಗುತ್ತಿದ್ದೆ. ಎಸಿ ಆನ್‌ ಆಗಿದ್ದರೂ ಬೆವರುತ್ತಿದ್ದೆ. ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೆ. ಆದರೆ ಸ್ನೇಹಿತ ನನ್ನನ್ನು ತಡೆದ. ಈ ಸಮಯದಲ್ಲಿ ಎರಡೇ ಗಂಟೆ ಮಲಗುತ್ತಿದ್ದೆ.

ಮದುವೆಯಾದ ಕೆಲ ಸಮಯದ ನಂತರ ನಮ್ಮ ನಡುವೆ ಹೊಂದಾಣಿಕೆ ಸಮಸ್ಯೆ ಕಾಣಿಸತೊಡಗಿತು. ಕ್ರಿಕೆಟ್‌ ಆಡುತ್ತಿದ್ದ ಕಾರಣ ಪತ್ನಿಗೆ ಹೆಚ್ಚಿನ ಸಮಯ ನೀಡಲು ಸಾಧ್ಯವಾಗುತ್ತಿರಲಿಲ್ಲ. ಅವಳು ಕೂಡ ತನ್ನ ಕೆಲಸವನ್ನು ಮಾಡುತ್ತಿದ್ದಳು, ನಮಗೆ ಹೆಚ್ಚು ಭೇಟಿಯಾಗಲು ಸಾಧ್ಯವಾಗಲಿಲ್ಲ. ಇದು 1-2 ವರ್ಷಗಳಿಂದ ಈ ರೀತಿ ನಡೆಯುತ್ತಿತ್ತು. ಇದರಿಂದಾಗಿ ಜಗಳ ಆಗುತ್ತಿತ್ತು. ಇದನ್ನೂ ಓದಿ: ಹೆಣ್ಣನ್ನ ದೂಷಿಸುವುದು ಫ್ಯಾಷನ್‌ ಆಗಿದೆ – ಬ್ಯೂಟಿ ಜೊತೆ ಚಹಲ್‌ ಡೇಟಿಂಗ್‌ ವಂದತಿ ಬೆನ್ನಲ್ಲೇ ಧನಶ್ರೀ ರಿಯಾಕ್ಷನ್‌

Dhanashree Verma

ಈ ಸಂದರ್ಭದಲ್ಲಿ ನನ್ನ ಕೆಲಸದ ಸಮಯವನ್ನು ವಿಭಜಿಸಲು ಮುಂದಾದೆ. ಸಂಬಂಧದ ಬಗ್ಗೆ ಯೋಚಿಸಲು ನನಗೆ ಸಾಧ್ಯವಾಗಲಿಲ್ಲ. ನೀವು 18-20 ವರ್ಷಗಳಿಂದ ಯಾವುದನ್ನಾದರೂ ಕೆಲಸ ಮಾಡುತ್ತಿದ್ದರೆ ಅದನ್ನು ಸಂಬಂಧಕ್ಕಾಗಿ ಬಿಡಲು ಸಾಧ್ಯವಿಲ್ಲ.

ಮದುವೆಯಾಗಿ ಮೂರು ವರ್ಷದ ನಂತರ ಪರಸ್ಪರ ಚರ್ಚಿಸಿ ವಿಚ್ಛೇದನ ನಿರ್ಧಾರ ಕೈಗೊಳ್ಳಲಾಯಿತು. ಆದರೆ ಈ ವಿಚಾರವನ್ನು ಬಹಿರಂಗ ಮಾಡುವುದು ಬೇಡ ಎಂದು ತೀರ್ಮಾನ ತೆಗೆದುಕೊಂಡಿದ್ದೆವು. ಎರಡು ವರ್ಷ ಮುಂದುವರೆಸಿಕೊಂಡು ಬಂದಿದ್ದೆವು.

ನನ್ನ ಬಗ್ಗೆ ಯಾರು ಏನು ಬೇಕಾದರೂ ಹೇಳಬಹುದು. ನಾನು ಇಬ್ಬರು ಸಹೋದರಿಯರ ಜೊತೆಗೆ ಬೆಳೆದಿದ್ದೇನೆ. ಹೆಣ್ಣು ಮಕ್ಕಳನ್ನು ಗೌರವಿಸುವುದು ನನಗೆ ತಿಳಿದಿದೆ. ದೇವರ ದಯೆಯಿಂದ ನಾನು ಬದುಕಿದ್ದೇನೆ. ವಿಚ್ಛೇದನ ಪಡೆದ ನಂತರ ಜನರು ನನ್ನನ್ನು ಮೋಸಗಾರ ಎಂದು ಆರೋಪಿಸಿದರು. ನಾನು ನನ್ನ ಜೀವನದಲ್ಲಿ ಎಂದಿಗೂ ಮೋಸ ಮಾಡಿಲ್ಲ. ನಾನು ಆ ರೀತಿಯ ವ್ಯಕ್ತಿಯಲ್ಲ. ಜನರಿಗೆ ಏನೂ ತಿಳಿಯದ ಕಾರಣ ಅವರು ನನ್ನನ್ನು ದೂಷಿಸುತ್ತಿದ್ದರು ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ:ಬ್ಯೂಟಿ ಜೊತೆ ಚಹಲ್‌ ಫೈನಲ್‌ ಪಂದ್ಯ ವೀಕ್ಷಣೆ – ಯಾರಿದು ಯುವತಿ?

ಭಾರತದ ಖ್ಯಾತ ಜೋಡಿಗಳಲ್ಲಿ ಒಬ್ಬರಾಗಿದ್ದ ಚಹಲ್ ಮತ್ತು ಧನಶ್ರೀ 2020ರ ಡಿಸೆಂಬರ್‌ನಲ್ಲಿ ಮದುವೆಯಾಗಿದ್ದರು. ಆ ಬಳಿಕ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ಬ್ರೇಕ್ ಅಪ್‍ಗೆ ಮುಂದಾಗಿದ್ದಾರೆ ಎಂದು 2023 ರಲ್ಲಿ ಸುದ್ದಿ ಪ್ರಕಟವಾಗಿತ್ತು. ನಂತರ ಇಬ್ಬರು ಜೊತೆಯಾಗಿ ಕಾಣಿಸಿಕೊಳ್ಳುವ ಮೂಲಕ ವದಂತಿಗೆ ತೆರೆ ಎಳೆದಿದ್ದರು. ಕೊರೋನಾ ಕಾಲದ ಲಾಕ್‌ಡೌನ್ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು ಧನಶ್ರೀ ಎಂದು ಹೇಳಿದ್ದರು.

ಇಬ್ಬರೂ ಇನ್‌ಸ್ಟಾದಲ್ಲಿ ಪರಸ್ಪರ ಅನ್‌ಫಾಲೋ ಆಗಿದ್ದರು. ಆಗಲೇ ಇಬ್ಬರ ಮಧ್ಯೆ ಬಿರುಕು ಮೂಡಿದೆ ಎಂದು ವರದಿಯಾಗಿತ್ತು. ಇನ್‌ಸ್ಟಾದಲ್ಲಿ ಚಹಲ್‌ ಅವರು ಧನಶ್ರೀ ಜೊತೆಗಿನ ಫೋಟೋ ಡಿಲೀಟ್‌ ಮಾಡಿದ್ದರೆ ಧನಶ್ರೀ ಚಹಲ್‌ ಅವರೊಂದಿಗೆ ಫೋಟೋ ಡಿಲೀಟ್‌ ಮಾಡಿಲ್ಲ. ಈಗಲೂ ಧನಶ್ರೀ ಇನ್‌ಸ್ಟಾದಲ್ಲಿ ಇಬ್ಬರು ಜೊತೆಯಲ್ಲಿರುವ ಫೋಟೋಗಳನ್ನು ನೋಡಬಹುದಾಗಿದೆ.

Share This Article