Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಉತ್ತರಕಾಶಿ ಮೇಘಸ್ಫೋಟ | ಕೊಚ್ಚಿ ಹೋದ ಗ್ರಾಮ – ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

Public TV
Last updated: August 6, 2025 7:49 am
Public TV
Share
3 Min Read
Uttarkashi Cloudburst
SHARE

– ಈವರೆಗೆ 10 ಮಂದಿ ಸಾವು, ನೂರಾರು ಮಂದಿ ನಾಪತ್ತೆ
– 9 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ; ಕೆಸರಿನ ರಾಶಿ.. ಊರೇ ಸರ್ವನಾಶ

ಡೆಹ್ರಾಡೂನ್‌: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮದಲ್ಲಿ ಆ.5ರಂದು ಮೇಘಸ್ಫೋಟ (Uttarkashi Cloudburst) ಸಂಭವಿಸಿದೆ. ಇದರಿಂದ ಹಠಾತ್ ಪ್ರವಾಹ ಸೃಷ್ಠಿಯಾಗಿ ಮನೆಗಳು, ಹೋಟೆಲ್‌ಗಳು ಮತ್ತು ಹೋಂಸ್ಟೇಗಳು ಕೊಚ್ಚಿ ಹೋಗಿವೆ. ಘಟನೆಯಲ್ಲಿ 10ಕ್ಕೂ ಅಧಿಕ ಮಂದಿ ಮೃತಪಟ್ಟರೇ 8-10 ಸೈನಿಕರು ಸೇರಿ ನೂರಾರು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

#WATCH | Uttarkashi, Uttarakhand | Blocked roads being cleared with the help of JCB, as landslides hit various places on the Uttarkashi-Harsil road. pic.twitter.com/QZj8nCMSew

— ANI (@ANI) August 6, 2025

ಹರ್ಸಿಲ್ ರಸ್ತೆಯಲ್ಲಿ ಭಾರೀ ಭೂಕುಸಿತ
ಭಾರೀ ಮಳೆಯಿಂದ ಉತ್ತರಕಾಶಿ-ಹರ್ಸಿಲ್ (Uttarkashi-Harsil) ರಸ್ತೆಯಲ್ಲಿ ಭೂಕುಸಿತ ಉಂಟಾಗಿದ್ದು, ಸಂಚಾರ ನಿರ್ಬಂಧಿಸಲಾಗಿದೆ. ಜೆಸಿಬಿ (JCB) ಯಂತ್ರಗಳ ಸಹಾಯದಿಂದ ರಸ್ತೆ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಉತ್ತರಕಾಶಿಯಲ್ಲಿ ಮೇಘಸ್ಫೋಟ – ಆರ್ಮಿ ಕ್ಯಾಂಪ್‌ನಲ್ಲಿದ್ದ 10ಕ್ಕೂ ಅಧಿಕ ಸೈನಿಕರು ನಾಪತ್ತೆ

9 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ, ರೆಡ್‌ ಅಲರ್ಟ್‌
ಭೂಕುಸಿತದ ನಡುವೆ ಭಾರೀ ಮಳೆ (heavy Rain) ಮುಂದುವರಿದ ಕಾರಣ ಭಾರತೀಯ ಹವಾಮಾನ ಇಲಾಖೆ ಇಂದು ಹರಿದ್ವಾರ, ನೈನಿತಾಲ್ ಮತ್ತು ಉಧಮ್ ಸಿಂಗ್ ನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ರಾಜ್ಯದ ಇತರ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೇ ಉತ್ತರಾಖಂಡ ಸರ್ಕಾರವು ಡೆಹ್ರಾಡೂನ್, ನೈನಿತಾಲ್, ತೆಹ್ರಿ, ಚಮೋಲಿ, ರುದ್ರಪ್ರಯಾಗ, ಚಂಪಾವತ್, ಪೌರಿ, ಅಲ್ಮೋರಾ ಮತ್ತು ಬಾಗೇಶ್ವರ್ ಒಂಬತ್ತು ಜಿಲ್ಲೆಗಳಲ್ಲಿ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿದೆ. ಇದನ್ನೂ ಓದಿ: ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ – ಸಾವಿನ ಸಂಖ್ಯೆ 4ಕ್ಕೆ ಏರಿಕೆ

Uttarkashi Cloudburst 2

ಕೊಚ್ಚಿಹೋದ ಧರಾಲಿ ಗ್ರಾಮ
ಉತ್ತರಾಖಂಡದ ಉತ್ತರ ಕಾಶಿ ಜಿಲ್ಲೆಯ ಧರಾಲಿ (Dharali) ಗ್ರಾಮ ನೈಸರ್ಗಿಕ ವಿಕೋಪಕ್ಕೆ ಸಿಲುಕಿದ್ದು, ಮೇಘಸ್ಫೋಟದಿಂದ ವಿನಾಶವೇ ಸೃಷ್ಟಿಯಾಗಿದೆ. ಧರಾಲಿ ಗ್ರಾಮದ ಬಳಿಯಿರುವ ಖೀರ್ ಗಡ್ ಪ್ರದೇಶದಲ್ಲಿ ಪ್ರವಾಹದಿಂದಾಗಿ ಹಠಾತ್ ನೀರಿನ ಹರಿವು ಹೆಚ್ಚಾದ ಪರಿಣಾಮ ದಿಢೀರ್ ಪ್ರವಾಹ ಉಂಟಾಗಿದೆ. ನೋಡನೋಡುತ್ತಿದ್ದಂತೆ ನದಿಯಲ್ಲಿ ರೌದ್ರಾವತಾರ ತಾಳಿ ಹರಿದುಬಂದ ಹೂಳು ತುಂಬಿಕೊಂಡ ಪರಿಣಾಮ ನೀರಿನಿಂದ 25ಕ್ಕೂ ಹೆಚ್ಚು ಹೋಟೆಲ್, ಹೋಂ ಸ್ಟೇಗಳು ಕೊಚ್ಚಿಹೋಗಿವೆ. ಘಟನೆಯಲ್ಲಿ ಸುಮಾರು 10 ಮಂದಿ ಮೃತಪಟ್ಟಿದ್ದು, 100ಕ್ಕೂ ಅಧಿಕ ಜನರು ಕಾಣೆಯಾಗಿದ್ದಾರೆ. ಅವಶೇಷಗಳಡಿ 12ಕ್ಕೂ ಅಧಿಕ ಜನರು ಸಿಲುಕಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಉತ್ತಾರಾಖಂಡದಲ್ಲಿ ಪ್ರವಾಹ – ಕಲಬುರಗಿ ಜಿಲ್ಲಾಡಳಿತದಿಂದ ಸಹಾಯವಾಣಿ ಕೇಂದ್ರ ಆರಂಭ

Uttarakhand Cloudburst

ಹೆಬ್ಬಂಡೆ.. ಕೆಸರಿನ ರಾಶಿ.. ಊರೇ ಸರ್ವನಾಶ
ಘಟನೆ ಸಂಭವಿಸಿದ ವೇಳೆ ಬೆಟ್ಟದ ಇಳಿಜಾರಿನಲ್ಲಿ ಭಾರೀ ಪ್ರಮಾಣದ ನೀರು ಹರಿದು ಬರುವ ಈ ದೃಶ್ಯ ಎಂಥವರ ಎದೆಯನ್ನೂ ನಡುಗಿಸುವಂತಿದೆ. ನೀರಿನೊಂದಿಗೆ ಹರಿದು ಬಂದ ದೊಡ್ಡ ಪ್ರಮಾಣದಲ್ಲಿ ಹೂಳು ಧರಾಲಿ ಗ್ರಾಮವನ್ನು ಆವರಿಸಿಕೊಂಡಿದ್ದು ಅವಶೇಷಗಳ ಅಡಿಯಲ್ಲಿ ಜನರು, ವಾಹನಗಳು, ಮನೆಗಳು ಹುದುಗಿ ಹೋಗಿವೆ. ಈ ಶಾಕ್‌ನಿಂದ ಹೊರ ಬರುವ ಮುನ್ನವೇ ಉತ್ತರಕಾಶಿ ಜಿಲ್ಲೆಯ ಸುಖಿ ಗ್ರಾಮದಲ್ಲಿ ಮತ್ತೊಂದು ಮೇಘಸ್ಫೋಟ ಸಂಭವಿಸಿದೆ. ಉತ್ತರಾಖಂಡದ ಉತ್ತರಕಾಶಿಯ ಸುಖಿ ಟಾಪ್‌ನಲ್ಲಿ ತೀವ್ರ ಮೇಘಸ್ಫೋಟ ಸಂಭವಿಸಿದ್ದು, ಹಲವಾರು ಮನೆಗಳಿಗೆ ಹಾನಿಯಾಗಿದೆ. ಇದನ್ನೂ ಓದಿ: ಕಾಲಿಟ್ಟಲ್ಲೆಲ್ಲಾ ಮರಳಿದ್ದರೂ ಸೌದಿ ಅರೇಬಿಯಾ ಮರಳು ಆಮದು ಮಾಡಿಕೊಳ್ಳುವುದು ಏಕೆ?

Uttarakashi Cloudburst army camp

ಮೂರು ಹೆಲಿಕ್ಯಾಪ್ಟರ್ ನೀಡುವಂತೆ ಕೇಂದ್ರಕ್ಕೆ ಮನವಿ
ಘಟನೆ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮತ್ತು ಭಾರತೀಯ ಸೇನೆಯ ಐಬೆಕ್ಸ್ ಬ್ರಿಗೇಡ್‌ನೊಂದಿಗೆ ರಕ್ಷಣಾ ಕಾರ್ಯಾಚರಣೆಗಳು ನಡೆಸುತ್ತಿವೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರ ರಕ್ಷಣೆ ಮಾಡಲಾಗುತ್ತಿದೆ. ಆದ್ರೆ ದೊಡ್ಡ ಪ್ರಮಾಣದ ಹೂಳು ತುಂಬಿದ ಹಿನ್ನಲೆ ರಕ್ಷಣೆಗೆ ಸಮಸ್ಯೆಯಾಗುತ್ತಿದೆ. ಈ ರಕ್ಷಣೆಗೆ ಅನುಕೂಲವಾಗಲು ಮೂರು ಹೆಲಿಕ್ಯಾಪ್ಟರ್‌ಗಳನ್ನ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿದೆ.

Uttarakhanda Uttarakhashi

10 ಯೋಧರು ನಾಪತ್ತೆ
ಇನ್ನೂ ಗಂಗೋತ್ರಿಯಲ್ಲಿ ಬೀಡುಬಿಟ್ಟಿರುವ ಎಸ್‌ಡಿಆರ್‌ಎಫ್ ತಂಡವು ಇಲ್ಲಿಯವರೆಗೆ ಧರಾಲಿಯಿಂದ 80ಕ್ಕೂ ಹೆಚ್ಚು ಜನರನ್ನು ರಕ್ಷಿಸಿದೆ. ಗಾಯಾಳುಗಳಿಗೆ ಹರ್ಷಿಲ್‌ನಲ್ಲಿರುವ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉತ್ತರಕಾಶಿಯ ಮೇಘಸ್ಫೋಟದಲ್ಲಿ, ಕೆಳ ಹರ್ಸಿಲ್ ಪ್ರದೇಶದ ಶಿಬಿರದಿಂದ 8-10 ಭಾರತೀಯ ಸೇನಾ ಸೈನಿಕರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಸೈನಿಕರ ನಷ್ಟಗಳ ಹೊರತಾಗಿಯೂ, ಬಾಕಿ ಉಳಿದ ಸೇನಾ ಸಿಬ್ಬಂದಿ ಪರಿಹಾರ ಕಾರ್ಯಾಚರಣೆ ಮುನ್ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

TAGGED:heavy rainIMDPushkar Singh DhamiUttarakhandUttarkashi Cloudburst
Share This Article
Facebook Whatsapp Whatsapp Telegram

Cinema News

Kantara Chapter 1 First look of Kanakavati Rukmini Vasanth unveiled on Varamahalakshmi
ಕಾಂತಾರ ಚಾಪ್ಟರ್ 1| ಕನಕವತಿಯ ಮೊದಲ ನೋಟ ವರಮಹಾಲಕ್ಷ್ಮಿಯಂದು ಅನಾವರಣ
Cinema Latest Top Stories
Rajath Kishan
ಕೊಲೆ ಬೆದರಿಕೆ ಸಂದೇಶ – ಡಿಜಿಐಜಿಪಿಗೆ ರಜತ್ ದೂರು
Bengaluru City Cinema Latest Top Stories
love u muddu
ಮಹಾರಾಷ್ಟ್ರದಲ್ಲಿ ನಡೆದ ಕಥೆಗೆ ಸಿದ್ದು ನಾಯಕ
Cinema Latest Sandalwood Top Stories
Thalapathy Vijay Jana Nayagan
ಮಲೇಷಿಯಾದಲ್ಲಿ ರಿಲೀಸ್ ಆಗಲಿದೆ ‘ಜನನಾಯಗನ್’ ಆಡಿಯೋ
Cinema Latest Top Stories
madenuru manu actor
ಮಡೆನೂರು ಮನು ಜೊತೆ ಕಾಂಪ್ರಮೈಸ್ – ಕೇಸ್ ಹಿಂಪಡೆದ ಸಂತ್ರಸ್ತೆ
Cinema Latest Main Post

You Might Also Like

H D Kumaraswamy
Bengaluru City

ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ‍ – ರಾಹುಲ್ ವಿರುದ್ಧ ಹೆಚ್‌ಡಿಕೆ ಕಿಡಿ

Public TV
By Public TV
5 minutes ago
Soladevanahalli Murder
Bengaluru City

ಆನ್‌ಲೈನ್ ಗೇಮ್ ಆಡಲು ಹಣಕ್ಕಾಗಿ ಟಾರ್ಚರ್; ಸ್ವಂತ ಅಳಿಯನನ್ನೇ ಕೊಂದ ಮಾವ

Public TV
By Public TV
12 minutes ago
Raichuru Beggar Woman Donation for Anjaneya Temple
Districts

ಆಂಜನೇಯ ದೇಗುಲ ನಿರ್ಮಾಣಕ್ಕೆ 1.83 ಲಕ್ಷ ದೇಣಿಗೆ ನೀಡಿದ ಭಿಕ್ಷುಕಿ

Public TV
By Public TV
29 minutes ago
trade war India Halts Procurement of Six usa Boeing P 8I Aircraft
Latest

ಟ್ಯಾರಿಫ್‌ ವಾರ್‌ಗೆ ಸೆಡ್ಡು| P-8I ವಿಮಾನ ಖರೀದಿಸಲ್ಲ ಎಂದ ಭಾರತ

Public TV
By Public TV
51 minutes ago
Panner Butter Masala
Food

ಕ್ವಿಕ್‌ ಆಗಿ ಮಾಡಿ ರೆಸ್ಟೋರೆಂಟ್‌ ಸ್ಟೈಲ್‌ ಪನೀರ್ ಬಟರ್ ಮಸಾಲಾ

Public TV
By Public TV
2 hours ago
Mantralaya
Districts

ಮಂತ್ರಾಲಯದಲ್ಲಿ ರಾಯರ 354ನೇ ಆರಾಧನಾ ಮಹೋತ್ಸವ – ಇಂದಿನಿಂದ 7 ದಿನ ಸಪ್ತರಾತ್ರೋತ್ಸವ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?