Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮಸ್ಥಳ ಬುರುಡೆ ರಹಸ್ಯ| ಕಗ್ಗಂಟಾಗಿದೆ 13ನೇ ಪಾಯಿಂಟ್ – ಸವಾಲುಗಳ ಮಧ್ಯೆ ಉತ್ಖನನಕ್ಕೆ ರೆಡಿಯಾದ ಎಸ್‌ಐಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಧರ್ಮಸ್ಥಳ ಬುರುಡೆ ರಹಸ್ಯ| ಕಗ್ಗಂಟಾಗಿದೆ 13ನೇ ಪಾಯಿಂಟ್ – ಸವಾಲುಗಳ ಮಧ್ಯೆ ಉತ್ಖನನಕ್ಕೆ ರೆಡಿಯಾದ ಎಸ್‌ಐಟಿ

Dakshina Kannada

ಧರ್ಮಸ್ಥಳ ಬುರುಡೆ ರಹಸ್ಯ| ಕಗ್ಗಂಟಾಗಿದೆ 13ನೇ ಪಾಯಿಂಟ್ – ಸವಾಲುಗಳ ಮಧ್ಯೆ ಉತ್ಖನನಕ್ಕೆ ರೆಡಿಯಾದ ಎಸ್‌ಐಟಿ

Public TV
Last updated: August 7, 2025 7:39 am
Public TV
Share
2 Min Read
Dharmasthala Mass Burial Case 13th Point SIT Ready for Excavation Amidst Challenges 1
SHARE

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ (Dharmasthala Mass Burial Case) ಶವಗಳನ್ನು ಹೂತಿಟ್ಟ ಪ್ರಕರಣದ ಉತ್ಖನನ ಕಾರ್ಯ ಕೊನೆಯ ಹಂತಕ್ಕೆ ಬಂದು ನಿಂತಿದೆ. ಕೊನೆಯ ಪಾಯಿಂಟ್ ಆಗಿರುವ 13ನೇ ಜಾಗದ ಉತ್ಖನನ ವಿಶೇಷ ತನಿಖಾ ತಂಡ(SIT) ಕಗ್ಗಂಟಾಗಿದ್ದು ಇಂದು ಶೋಧ ನಡೆಯಲಿದೆ.

ದೂರುದಾರ ತೋರಿಸಿದ 13 ಕಡೆಗಳಲ್ಲೂ ಭೂಮಿ ಅಗೆದು ಹುಡುಕಿದರೂ ಪಾಯಿಂಟ್‌ ಸಂಖ್ಯೆ 6 ಹೊರತು ಪಡಿಸಿ ಬೇರೆ ಕಡೆ ಏನೂ ಸಿಗಲಿಲ್ಲ. ನೂರಾರು ಶವ ಹೂತಿಟ್ಟಿದ್ದೇನೆ ಎಂದಿದ್ದ ದೂರುದಾರನೂ ಇದೀಗ ಪಾಯಿಂಟ್ ನಂಬರ್ 13ರಲ್ಲಿ ರಾಶಿ ರಾಶಿ ಹೆಣಗಳಿದೆ ಎಂದು ಹೇಳಿದ್ದಾನೆ. ಈ ಕಾರಣಕ್ಕೆ ಸಾಕಷ್ಟು ಉದ್ದ ಅಗಲಕ್ಕೆ ಮಾರ್ಕ್ ಮಾಡಲಾಗಿದೆ. ಅದರೆ ಈ ಪಾಯಿಂಟ್ ಎಸ್‌ಐಟಿ ಅಧಿಕಾರಿಗಳಿಗೆ ಕಗ್ಗಂಟಾಗಿದೆ.

ಬುಧವಾರ ಉತ್ಖನನ ಮಾಡಿ ಮುಗಿಸಬೇಕಿದ್ದ ಈ 13ನೇ ಪಾಯಿಂಟ್ ಅಗೆಯದೇ 14 ನೇ ಪಾಯಿಂಟ್ ಉತ್ಖನನ ನಡೆಸಿದ್ದರು. ಈ 13ನೇ ಪಾಯಿಂಟ್‌ನ ಮಧ್ಯಭಾಗದಲ್ಲೇ ಎರಡು ವಿದ್ಯುತ್ ಕಂಬಗಳಿದೆ. ಅಷ್ಟೇ ಅಲ್ಲದೇ ಪಕ್ಕದಲ್ಲೇ ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಲಾದ ಸಣ್ಣ ಅಣೆಕಟ್ಟು ಇದೆ. ಪಾಯಿಂಟ್ ಪಕ್ಕದಲ್ಲೇ ಸಾರ್ವಜನಿಕ ರಸ್ತೆ ಇದೆ. ಹೀಗಾಗಿ ಈ ಎಲ್ಲಾ ಸವಾಲು ಸರಿಪಡಿಸಲು ಒಂದು ದಿನ ಉತ್ಖನನವನ್ನು ಮುಂದೂಡಿದ್ದರು.  ಇದನ್ನೂ ಓದಿ: ಯೂಟ್ಯೂಬರ್‌ಗಳಿಗೆ ಥಳಿತ, ಅಪಪ್ರಚಾರಿಗಳನ್ನು ಬಂಧಿಸಿ – ಸಿಡಿದ ಧರ್ಮಸ್ಥಳದ ಭಕ್ತರು

 

ಈ ಜಾಗವನ್ನು ಉತ್ಖನನ ಮಾಡಲು ಎಸ್‌ಐಟಿ ಸಿದ್ಧತೆ ಮಾಡಿದ್ದು, ಧರ್ಮಸ್ಥಳ ಗ್ರಾಮಪಂಚಾಯತ್, ನೀರಾವರಿ ಇಲಾಖೆ, ಮೆಸ್ಕಾಂ ಇಲಾಖೆ ಜೊತೆ ಸಭೆ ನಡೆಸಿದ್ದಾರೆ. ಕಿರು ಅಣೆಕಟ್ಟು ಪಕ್ಕದಲ್ಲಿ ನೆಲ ಅಗೆಯುವುದು ಹೇಗೆ? ವಿದ್ಯುತ್ ಕಂಬಗಳಿರುವ ಜಾಗದಲ್ಲಿ ಏನ್ ಮಾಡಬೇಕು ಎಂಬ ಬಗ್ಗೆ ತಜ್ಞರ ಅಭಿಪ್ರಾಯವನ್ನು ಎಸ್‌ಐಟಿ ಅಧಿಕಾರಿಗಳು ಸಂಗ್ರಹಿಸಿದ್ದಾರೆ.   ಇದನ್ನೂ ಓದಿ: ಧರ್ಮಸ್ಥಳ ಕೇಸ್; 2 ಗುಂಪುಗಳ ನಡುವೆ ಮಾರಾಮಾರಿ – ವರದಿಗೆ ಹೋದ ಖಾಸಗಿ ವಾಹಿನಿ ವರದಿಗಾರ, ಕ್ಯಾಮೆರಾಮ್ಯಾನ್ ಮೇಲೆ ಹಲ್ಲೆ

ಈ ಹಿನ್ನಲೆಯಲ್ಲೇ ಇಂದು ಉತ್ಖನನ ನಡೆಸಲು ಎಸ್‌ಐಟಿ ಅಧಿಕಾರಿಗಳು ತಯಾರಿ ನಡೆಸಿದ್ದಾರೆ. ಈ ನಡುವೆ 13 ಕಡೆ ಭೂಮಿ ಅಗೆದರೂ ಏನೂ ಸಿಗದೇ ಇರುವ ಕಾರಣ ಮುಸುಕುಧಾರಿ ಅನಾಮಿಕ ಹೇಳುತ್ತಿರುವುದು ಸುಳ್ಳಾ ಎಂಬ ಪ್ರಶ್ನೆಯೂ ಎದ್ದಿದೆ. ಆತ ಹೇಳಿದ ಯಾವ ಪಾಯಿಂಟ್‌ನಲ್ಲೂ ಕಳೇಬರಗಳೇ ಸಿಗದೇ ಇದ್ದು ಹೊಸ ದಿಕ್ಕಿನಲ್ಲೂ ಹುಡುಕಿದರೂ ಯಾವುದೇ ಕುರುಹುಗಳು ಸಿಕ್ಕಿಲ್ಲ. ಹೀಗಾಗಿ ಮುಸುಕುಧಾರಿ ಅನಾಮಿಕನ ವಿರುದ್ಧವೇ ರಿವರ್ಸ್ ತನಿಖೆ ನಡೆಸುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

ದಿನದಿಂದ ದಿನಕ್ಕೆ ಕುತೂಹಲ ಹುಟ್ಟಿಸಿದ ಈ ತಲೆ ಬುರುಡೆ ಕಥೆಯನ್ನು ಅನಾಮಿಕ ವ್ಯಕ್ತಿ ಬುರುಡೆ ಬಿಟ್ಟಿದ್ದಾನಾ ಎಂಬ ಮಾತುಗಳು ಈಗ ಹರಿದಾಡಲು ಆರಂಭವಾಗಿದೆ. ಆತ ಎಸ್‌ಐಟಿ ಸೇರಿದಂತೆ ಎಲ್ಲರ ದಿಕ್ಕು ತಪ್ಪಿಸಿದ್ದಾನಾ ಎಂಬ ಅನುಮಾನವೂ ಹೆಚ್ಚಾಗಿದೆ. ಒಟ್ಟಿನಲ್ಲಿ ಇಂದು ಉತ್ಖನನ ಮಾಡುವ ಪಾಯಿಂಟ್‌ನಲ್ಲಿ ಏನಾಗುತ್ತದೆ ಎಂಬ ನಿರೀಕ್ಷೆ, ಕುತೂಹಲ ಎಲ್ಲರಲ್ಲಿದೆ.

TAGGED:dharmasthalaMass Burialpolicesitಎಸ್‍ಐಟಿಧರ್ಮಸ್ಥಳಪೊಲೀಸ್ಬುರುಡೆ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Tristan Stubbs Sameer Rizvi
Cricket

26 ರನ್‌ಗಳಿಗೆ 4 ವಿಕೆಟ್‌ ಉರುಳಿದ್ರೂ 119 ರನ್‌ ಜೊತೆಯಾಟ – ಡೆಲ್ಲಿಗೆ ಭರ್ಜರಿ ಜಯ

Public TV
By Public TV
30 minutes ago
HARIRAM SHANKAR
Crime

ಗ್ಯಾಸ್‌ ಅಭಾವದ ಲಾಭ ಪಡೆದ ಸೈಬರ್‌ ವಂಚಕರು – KYC ಅಪ್ಡೇಟ್‌ ಹೆಸರಲ್ಲಿ ಲಕ್ಷ ಲಕ್ಷ ವಂಚನೆ

Public TV
By Public TV
1 hour ago
Dinesh Gundurao 1
Bengaluru City

ಯುದ್ಧದಿಂದ ಔಷಧಿಗಳ ದರ ಏರಿಕೆಯಾದರೆ ನಾವು ಏನೂ ಮಾಡಲು ಆಗಲ್ಲ: ದಿನೇಶ್‌ ಗುಂಡೂರಾವ್‌

Public TV
By Public TV
1 hour ago
A boy brandished a knife during an RSS boys RSS Shakha Haveri School
Crime

RSS ಬಾಲಕರ ಶಾಖೆ ನಡೆಯುತ್ತಿದ್ದಾಗ ಚಾಕು ಪ್ರದರ್ಶಿಸಿದ ಅನ್ಯ ಕೋಮಿನ ಬಾಲಕ

Public TV
By Public TV
2 hours ago
Captain Brijesh Chowta
Dakshina Kannada

ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಬ್ರಿಜೇಶ್‌ ಚೌಟ ಒತ್ತಾಯ

Public TV
By Public TV
2 hours ago
New Mangalore Port
Dakshina Kannada

ನವ ಮಂಗಳೂರು ಬಂದರು ಮೇಲ್ದರ್ಜೆಗೇರಿಸಲು 438.29 ಕೋಟಿ ರೂ. ಅನುಮೋದನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?