ಚೆನ್ನೈ: 2026ರ ಐಪಿಎಲ್ (IPL 2025) ಟೂರ್ನಿಯ ಮಿನಿ ಹರಾಜಿಗೆ ಇನ್ನೂ ಕೆಲ ತಿಂಗಳು ಬಾಕಿಯಿದೆ. ಅದಕ್ಕೂ ಮುನ್ನವೇ 5 ಬಾರಿ ಐಪಿಎಲ್ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ತೊರೆಯಲು ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ನಿರ್ಧರಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ಈ ಕುರಿತು ಎಂ.ಎಸ್ ಧೋನಿ ಹಾಗೂ ನಾಯಕ ರುತುರಾಜ್ ಗಾಯಕ್ವಾಡ್ ಅವರೊಂದಿಗೆ ಚರ್ಚಿಸಿದ ಬಳಿಕ ಅಧಿಕೃತವಾಗಿ ತಿಳಿಸುವುದಾಗಿ ಅಶ್ವಿನ್ (R Ashwin) ಹೇಳಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ದೂರವಾದಾಗಲೇ ಬೆಲೆ ತಿಳಿಯೋದು – ಮತ್ತೆ ಒಂದಾಗುತ್ತೇವೆಂದ ಸೈನಾ ನೆಹ್ವಾಲ್ ದಂಪತಿ
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಅಶ್ವಿನ್ 2025ರ ಋತುವಿನಲ್ಲ ಸ್ಥಿರ ಪ್ರದರ್ಶನವನ್ನೂ ನೀಡಲಾಗಲಿಲ್ಲ. ಕೇವಲ 9 ಪಂದ್ಯಗಳಲ್ಲಿ ಮಾತ್ರವೇ ಕಾಣಿಸಿಕೊಂಡು 7 ವಿಕೆಟ್ ಪಡೆದಿದ್ದರು. ಕಳಪೆ ಪ್ರದರ್ಶನದಿಂದಾಗಿ ಅವರನ್ನು 5 ಪಂದ್ಯಗಳಿಗೆ ಬೆಂಚ್‌ನಲ್ಲಿ ಇರಿಸಲಾಗಿತ್ತು. ಅಲ್ಲದೇ ಸಿಎಸ್‌ಕೆ ಕೂಡ ಕೇವಲ 4 ಪಂದ್ಯಗಳಲ್ಲಿ ಗೆದ್ದು, ಕೊನೇ ಸ್ಥಾನದಲ್ಲೇ 18ನೇ ಆವೃತ್ತಿ ಮುಗಿಸಿತ್ತು. ಸದ್ಯ ಸಿಎಸ್‌ಕೆ ತೊರೆಯಲು ನಿರ್ಧರಿಸಿರುವ ಅಶ್ವಿನ್ ಮತ್ತೆ ರಾಜಸ್ಥಾನ್ ರಾಯಲ್ಸ್ ತಂಡ ಸೇರಲಿದ್ದಾರೆ ಎಂಬ ವದಂತಿಗಳೂ ಹಬ್ಬಿವೆ. ಇದನ್ನೂ ಓದಿ: ಟೀಕೆಯಿಂದ ಖಿನ್ನತೆಗೆ ಜಾರಿದ್ದೆ, ಆತ್ಮಹತ್ಯೆಗೆ ಯೋಚಿಸಿದ್ದೆ – ಮೌನ ಮುರಿದ ಚಹಲ್
ಸಿಎಸ್‌ಕೆಗೆ ಸಂಜು ಸ್ಯಾಮ್ಸನ್
ಮತ್ತೊಂದು ಕಡೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಮತ್ತು ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ (Sanju Samson) ಫ್ರಾಂಚೈಸಿ ತೊರೆಯಲು ಬಯಸಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ರಾಜಸ್ಥಾನ್ (Rajasthan Royals) ಪರ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಹಾಗೂ ಅತಿಹೆಚ್ಚು ರನ್ ಗಳಿಸಿದ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ ಸಂಜು ಸ್ಯಾಮ್ಸನ್. ಹರಾಜಿಗೂ ಮುನ್ನವೇ ತಮ್ಮನ್ನು ತಂಡದಿಂದ ಬಿಡುಗಡೆ ಮಾಡಲು ಅಥವಾ ವಿನಿಯಮ ಮಾಡಿಕೊಳ್ಳಲು ರಿಕ್ವೆಸ್ಟ್ ಮಾಡಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಬಾಗಲಕೋಟೆ | ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಕ್ರಿಕೆಟಿಗ ರಿಷಭ್ ಪಂತ್ ಆರ್ಥಿಕ ನೆರವು
ವರದಿಗಳು ಹರಿದಾಡುತ್ತಿದ್ದಂತೆ ಸಂಜು ಸ್ಯಾಮ್ಸನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ಸಿಎಸ್‌ಕೆ ಬಯಸಿದೆ. ಈ ಬಗ್ಗೆ ಸಂಜು ಸ್ಯಾಮ್ಸನ್ ಮುಖ್ಯಕೋಚ್ ಸ್ಟೀಫನ್ ಫ್ಲೆಮಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ಸಹ ನಡೆಸಿದ್ದರು ಎಂದು ಹೇಳಲಾಗಿದೆ. ಆದ್ರೆ ಉಭಯ ಫ್ರಾಂಚೈಸಿಗಳು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.