ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಜಲಾಶಯದ (Chandrampalli Dam) ಜಲಾಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ (Rain) ಜಲಾಶಯಕ್ಕೆ ಒಳಹರಿವು ಹೆಚ್ಚಿದ್ದು ಯಾವುದೇ ಕ್ಷಣದಲ್ಲಿ ಭರ್ತಿಯಾಗುವ ಹಂತದಲ್ಲಿದೆ. ನೀರು ಗರಿಷ್ಠ ಮಟ್ಟ ತುಂಬಿದ ನಂತರ ಒಳಹರಿವಿನ ನೀರನ್ನು ಅಣೆಕಟ್ಟಿನ ಕೋಡಿಯ ಗೇಟ್‌ಗಳ ಮುಖಾಂತರ ನದಿಗೆ ಹರಿಬಿಡಲಾಗುತ್ತಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ.
ಚಂದ್ರಂಪಳ್ಳಿ ಅಣೆಕಟ್ಟಿನ ನದಿ ಪಾತ್ರದ ರೈತರು, ಸಾರ್ವಜನಿಕರು, ದನಕರುಗಳನ್ನು ಮೇಯಿಸುವವರು ಮತ್ತು ದನಕರುಗಳಿಗೆ ನೀರು ಕುಡಿಸುವುದಾಗಲಿ, ಹಳ್ಳಕ್ಕೆ ಇಳಿಯುವುದಾಗಲಿ, ಮೀನು ಹಿಡಿಯುವುದಾಗಲಿ, ಬಟ್ಟೆ ಒಗೆಯುವುದಾಗಲಿ ಹಾಗೂ ಇನ್ನಿತರ ಯಾವುದೇ ಕಾರಣಕ್ಕೂ ನದಿಗೆ ಇಳಿಯಬಾರದು ಎಂದು ಕೆಎನ್‌ಎನ್‌ಎನ್‌ಎಲ್ ಚಂದ್ರಂಪಳ್ಳಿ ಯೋಜನೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಚೇತನ ಕಳಸ್ಕರ್ ಅವರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಂಪುಟದಿಂದ ರಾಜಣ್ಣ ಕಿಕ್‌ಔಟ್ – ಆಪ್ತನ ತಲೆದಂಡದಿಂದ ಮೌನಕ್ಕೆ ಶರಣಾದ ಸಿಎಂ
ನದಿ ಪಾತ್ರದಲ್ಲಿರುವ ಸಣ್ಣ ನೀರಾವರಿ ಇಲಾಖೆ ಮತ್ತು ಸಾರ್ವಜನಿಕರ ಆಸ್ತಿಗಳಿದ್ದಲ್ಲಿ ಮುಂಜಾಗ್ರತೆಯಾಗಿ ಸುರಕ್ಷಿತವಾಗಿಟ್ಟುಕೊಳ್ಳಬೇಕೆಂದು ಕೋರಲಾಗಿದೆ.