ಧಾರವಾಡ: ಕಳೆದ ಮೂರು ದಿನಗಳಿಂದ ಧಾರವಾಡ (Dharwad) ತಾಲೂಕಿನ ನವಲಗುಂದದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಮನೆಯೊಂದು ಕುಸಿದಿದೆ.
ನವಲಗುಂದ (Navalgund) ಪಟ್ಟಣದ ಹಳ್ಳದ ಓಣಿಯಲ್ಲಿರುವ ಮಕ್ತುಮಬಿ ನರಗುಂದ ಅವರಿಗೆ ಸೇರಿದ ಮನೆ ಕುಸಿದು ಬಿದ್ದಿದೆ. ಸದ್ಯ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಇದೀಗ ಮನೆಯಿಲ್ಲದೆ ಮಕ್ತುಮಬಿ ನರಗುಂದ ಅವರ ಕುಟುಂಬ ಪರದಾಡುತ್ತಿದ್ದು, ಪಕ್ಕದ ಮನೆಯಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಎಟಿಎಂ ಕಳ್ಳತನ ಮಾಡುವಾಗಲೇ ಎಎಸ್ಐಯಿಂದ ಕಳ್ಳ ಅರೆಸ್ಟ್ – ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಸ್ಥಳಕ್ಕೆ ವಿಪತ್ತು ನಿರ್ವಹಣಾ ಅಧಿಕಾರಿಗಳು ಭೇಟಿ ನೀಡಿ, ಮಾಹಿತಿ ಪಡೆದುಕೊಂಡಿದ್ದಾರೆ. ಮನೆ ಕಳೆದುಕೊಂಡ ಕುಟುಂಬಸ್ಥರು ಸರ್ಕಾರ ಆದಷ್ಟು ಬೇಗ ಪರಿಹಾರವನ್ನ ನೀಡಬೇಕು ಎಂದು ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದಾರೆ.