ಇಸ್ಲಾಮಾಬಾದ್: ಸಿಂಧೂ ಜಲ ಒಪ್ಪಂದ ಸ್ಥಗಿತಗೊಳಿಸೋದನ್ನ ಮುಂದುವರಿಸಿದ್ರೆ ನಾವು ಯುದ್ಧದಿಂದ ಹಿಂದೆ ಸರಿಯಲ್ಲ ಅಂತ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (PPP) ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ (Bilawal Bhutto Zardari) ಭಾರತಕ್ಕೆ ಬೆದರಿಕೆಯೊಡ್ಡಿದ್ದಾರೆ.
ಸಿಂಧ್ ಸರ್ಕಾರದ ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸಿಂಧೂ ಜಲ ಒಪ್ಪಂದ ಸ್ಥಗಿತಗೊಳಿಸಿರುವುದು ಸಿಂಧೂ ಕಣಿವೆ ನಾಗರಿಕತೆ ಮತ್ತು ಸಂಸ್ಕೃತಿಯ ಮೇಲೆ ಭಾರತ ಮಾಡುತ್ತಿರುವ ದಾಳಿಯಾಗಿದೆ. ಪಾಕಿಸ್ತಾನ ಯಾವಾಗಲೂ ಶಾಂತಿಯನ್ನ ಪ್ರತಿಪಾದಿಸುತ್ತೆ. ಆದ್ರೆ ಭಾರತ ಯುದ್ಧಕ್ಕೆ ಒತ್ತಾಯಿಸಿದರೆ, ನಾವು ಹಿಂದೆ ಸರಿಯಲ್ಲ ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: 1990ರ ಕಾಶ್ಮೀರಿ ಪಂಡಿತ್ ನರ್ಸ್ ಹತ್ಯೆ ಕೇಸ್; ಶ್ರೀನಗರದ 8 ಸ್ಥಳಗಳ ಮೇಲೆ ಎಸ್‌ಐಎ ದಾಳಿ
ಮೋದಿ ಸರ್ಕಾರಕ್ಕೆ ನಾವು ಒಂದು ಸಂದೇಶ ಕಳಿಸುತ್ತೇವೆ. ನಾವು ಯಾವುದಕ್ಕೂ ಹಿಂದೆ ಸರಿಯುವುದಿಲ್ಲ, ತಲೆಬಾಗುವುದಿಲ್ಲ ಮತ್ತು ನೀವು ಸಿಂಧೂ ನದಿಯನ್ನು ಅತಿಕ್ರಮಿಸಲು ಧೈರ್ಯ ಮಾಡಿದರೆ, ಪಾಕಿಸ್ತಾನದ ಪ್ರತಿಯೊಂದು ಪ್ರಾಂತ್ಯದ ಜನರು ನಿಮ್ಮೊಂದಿಗೆ ಹೋರಾಡಲು ಸಿದ್ಧರಿರುತ್ತಾರೆ ಭುಟ್ಟೋ ಹೇಳಿದ್ದಾರೆ. ಇದನ್ನೂ ಓದಿ: ಎಥೆನಾಲ್ ಪೆಟ್ರೋಲ್‌ನಿಂದ ಮೈಲೇಜ್ ಕುಸಿತವಾಗಲ್ಲ, ವಿಮೆ ರದ್ದಾಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
ಸಿಂಧೂ ಜಲ ಒಪ್ಪಂದ ಸ್ಥಗಿತಗೊಳಿಸಿದ್ದೇಕೆ?
ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತ 1960ರ ಸಿಂಧೂ ಜಲ ಒಪ್ಪಂದವನ್ನ ಸ್ಥಗಿತಗೊಳಿಸುವುದು ಸೇರಿದಂತೆ ಪಾಕಿಸ್ತಾನದ ಜೊತೆಗಿನ ಎಲ್ಲ ರಾಜತಾಂತ್ರಿಕ ಸಂಬಂಧಕ್ಕೆ ಬ್ರೇಕ್ ಹಾಕಿತು. ಇದನ್ನೂ ಓದಿ: ಸತ್ಯ ಹೇಳಿದ್ದಕ್ಕೆ ಎಸ್ಟಿ ನಾಯಕನ ಕತ್ತು ಹಿಡಿದು ಹೊರದಬ್ಬಿದೆ ಕಾಂಗ್ರೆಸ್: ಪ್ರಹ್ಲಾದ್ ಜೋಶಿ