ನವದೆಹಲಿ: ಆನ್‌ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಆನ್‌ಲೈನ್ ಬೆಟ್ಟಿಂಗ್ – ಇ.ಡಿ ವಿಚಾರಣೆಗೆ ಹಾಜರಾದ ನಟ ರಾಣಾ ದಗ್ಗುಬಾಟಿ
VIDEO | Delhi: Former Indian cricketer Suresh Raina appeared before the Enforcement Directorate (ED) for questioning in an alleged illegal betting app-linked money laundering case.
The federal probe agency will record his statement under the Prevention of Money Laundering Act… pic.twitter.com/OcTueUS121
— Press Trust of India (@PTI_News) August 13, 2025
ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮಂಗಳವಾರ (ಆ.12) ಮಾಜಿ ಕ್ರಿಕೆಟಿಗ ಸುರೇಶ್ ರೈನಾಗೆ ನೋಟಿಸ್ ನೀಡಿ, ಬುಧವಾರ (ಆ.13) ವಿಚಾರಣೆ ಹಾಜರಾಗುವಂತೆ ತಿಳಿಸಿತ್ತು. ಅದರಂತೆ ದೆಹಲಿಯಲ್ಲಿರುವ ಇಡಿ ಕಚೇರಿಗೆ ಆಗಮಿಸಿ, ವಿಚಾರಣೆಗೆ ಹಾಜರಾಗಿದ್ದಾರೆ. ಇಡಿ ವಿಚಾರಣೆ ವೇಳೆ ರೈನಾ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಿದ್ದಾರೆ.
ಇದಕ್ಕೂ ಮುನ್ನ ನಟ ಪ್ರಕಾಶ್ ರೈ, ವಿಜಯ ದೇವರಕೊಂಡ, ರಾಣಾ ದಗ್ಗುಬಾಟಿ ಸೇರಿದಂತೆ ಹಲವರನ್ನು ಇಡಿ ವಿಚಾರಣೆ ನಡೆಸಿದೆ.ಇದನ್ನೂ ಓದಿ: ಪರಭಾಷೆಯಲ್ಲಿ ಸಿನಿಮಾ ಮಾಡಲ್ಲ ಅಂದಿದ್ದಕ್ಕೆ ನೋಟಿಸ್ ಕಳುಹಿಸಿದ್ದಾರೆ – ಧ್ರುವ ಮ್ಯಾನೇಜರ್ ಸ್ಪಷ್ಟನೆ