– ಪವಿತ್ರಾ ಗೌಡಗೆ ಈ ಸ್ಥಿತಿ ಬರಬಾರದಿತ್ತು ಎಂದ ನಟಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ಲ್ಲಿ (Renukaswamy Case) ಸುಪ್ರೀಂ (Supreme Court) ಆದೇಶದ ಬೆನ್ನಲ್ಲೇ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ (Actress Ramya) ಸಾಫ್ಟ್ ಕಾರ್ನರ್ ತೋರಿಸಿದ್ದಾರೆ.
ದರ್ಶನ್ ಜೈಲುಪಾಲಾಗಿರುವ ಬಗ್ಗೆ `ಪಬ್ಲಿಕ್ ಟಿವಿ’ ಜೊತೆ ಮಾತನಾಡಿರುವ ಅವರು, ನಟ ದರ್ಶನ್ ಜೊತೆ ನಾನು ಸಿನಿಮಾ ಮಾಡಿದ್ದೇನೆ. ಸಿನಿಮಾ ಶೂಟಿಂಗ್ ವೇಳೆ ತಾವು ನಡೆದುಕೊಂಡು ಬಂದ ಹಾದಿ ಬಗ್ಗೆ ನನ್ನ ಬಳಿ ಹಂಚಿಕೊಂಡಿದ್ದರು. ನನಗೆ ಹೆಮ್ಮೆ ಅನಿಸಿತ್ತು. ಲೈಟ್ ಬಾಯ್ ಆಗಿ ಕೆಲಸ ಮಾಡಿ ಈ ಮಟ್ಟಕ್ಕೆ ಬೆಳೆದಿದ್ದಾರೆ. ಆದರೆ ಇತ್ತೀಚಿಗೆ ಅವರ ನಡವಳಿಕೆಯಿಂದ ತುಂಬಾ ಬೇಜಾರಾಗಿತ್ತು. ಎಲ್ಲೋ ಒಂದು ಕಡೆ ಅವರು ತಮ್ಮ ಜೀವನ ಹಾಳು ಮಾಡಿಕೊಂಡರು. ಈ ಮಟ್ಟಕ್ಕೆ ಬೆಳೆದ ಮೇಲೆ ಜವಾಬ್ದಾರಿ ಇರುತ್ತದೆ. ಅವರ ಅಕ್ಕಪಕ್ಕ ಯಾರು ಒಳ್ಳೆಯವರಿಲ್ಲ ಅನಿಸುತ್ತೆ ಗೊತ್ತಿಲ್ಲ. ತಮ್ಮ ಸುತ್ತಮುತ್ತ ಒಳ್ಳೆಯವರನ್ನು ಇಟ್ಟುಕೊಂಡು ಒಳ್ಳೆಯ ದಾರಿಯಲ್ಲಿ ಕರೆದುಕೊಂಡು ಹೋಗಬಹುದಿತ್ತು. ಮೊದಲು ಅಕ್ಕಪಕ್ಕದವರ ಸಹವಾಸ ಬಿಡಬೇಕು ಕಿವಿಮಾತು ಹೇಳಿದ್ದಾರೆ.ಇದನ್ನೂ ಓದಿ: ಬೆಂಗಳೂರು | ನಿಗೂಢ ಸ್ಫೋಟ – ಬಾಲಕ ಸಾವು, 8 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ
ಇನ್ನೊಂದು ಕಡೆ ಜಡ್ಜ್ಮೆಂಟ್ ಕೇಳಿದಾಗ ರಿಲೀಫ್ ಅಂತಾ ಅನಿಸಿದೆ. ಈಗ ನಾವು ಹೋಗುತ್ತಿರುವ ಸಮಾಜ ಕೆಟ್ಟ ದಾರಿಯಲ್ಲಿದೆ. ಹೆಣ್ಣುಮಕ್ಕಳ ರಕ್ಷಣೆ, ಗೌರವ ವಿಷಯದಲ್ಲಿ ಸುಪ್ರೀಂ ಕೋರ್ಟ್ ಆರ್ಡರ್ ಬಂದಾಗ ನಾನು ಮಾಡಿದ ಪೋಸ್ಟ್ಗೆ ಕೆಟ್ಟದಾಗಿ ಕಾಮೆಂಟ್ ಹಾಕುತ್ತಿದ್ದರು. ನಾವೇ ಕಾನೂನು ಕೈಗೆತ್ತಿಕೊಂಡರೆ ಈ ರೀತಿಯ ಕೆಟ್ಟ ಕೆಲಸಗಳು ಆಗುತ್ತವೆ. ಜಡ್ಜ್ಮೆಂಟ್‌ನಿಂದ ಸಮಾಜಕ್ಕೆ ಒಳ್ಳೆಯದಾಗುತ್ತೆ. ಸಮಾಜಕ್ಕೆ ಒಂದೊಳ್ಳೆ ಮೆಸೇಜ್ ಹೋಗಿದೆ. ಯಾರೇ ಆಗಿರಲಿ ಎಲ್ಲರೂ ಸಮಾನರು. ದೊಡ್ಡವರೇ ಆಗ್ಲಿ ಚಿಕ್ಕವರೇ ಆಗ್ಲಿ ಎಲ್ಲರೂ ಕಾನೂನಿನ ಮುಂದೆ ಒಂದೇ ಎಂದು ತಿಳಿಸಿದ್ದಾರೆ.
ಪವಿತ್ರಾ ಗೌಡ ಯಾರು ಅಂತಾ ನನಗೆ ಮೊದಲು ಗೊತ್ತಿರಲಿಲ್ಲ. ಆಕೆಗೆ ಈ ಸ್ಥಿತಿ ಬರಬಾರದಿತ್ತು. ಒಂದು ಕಡೆ ನನಗೆ ಬೇಜಾರಾಗುತ್ತೆ. ಯಾಕಂದ್ರೆ ಪವಿತ್ರಾ ಗೌಡ ಒಬ್ಬ ತಾಯಿ, ಅವರಿಗೆ ಮಗಳಿದ್ದಾಳೆ. ಕಾನೂನು ಕೈಗೆ ತೆಗೆದುಕೊಳ್ಳದೇ ನಾವು ನಿಯಮಗಳ ಪ್ರಕಾರ ನಡೆದುಕೊಂಡಿದ್ರೆ ಇದೆಲ್ಲಾ ಆಗುತ್ತಿರಲಿಲ್ಲ. ನಾವು ಏನಾದರೂ ಮಾಡುವ ಮುಂಚೆ ಯೋಚನೆ ಮಾಡಬೇಕು. ಕೋಪ ಬರೋದು ಸಾಮಾನ್ಯ, ಆದರೆ ಎಲ್ಲರ ಜೀವನದಲ್ಲಿ ಒಳ್ಳೆಯದೇ ಆಗಲ್ಲ. ಕೆಲವೊಂದು ಘಟನೆಗಳು ನಡೆಯುತ್ತವೆ. ಹಾಗಂತ ನಾವು ಕಾನೂನನ್ನ ಕೈಗೆತ್ತಿಕೊಳ್ಳಬಾರದು. ಕಾನೂನು ಪ್ರಕಾರವೇ ನಡೆದುಕೊಂಡು ಬರಬೇಕು. ಮತ್ತೇನಾದರೂ ಆದರೆ ಅಂತ ಜೀವನ ಹಾಳು ಮಾಡಿಕೊಳ್ತೀರಾ? ಅದೇ ರೀತಿ ಬೇರೆಯವರು ಶುರು ಮಾಡ್ಕೊಂಡ್ರೆ ಸಮಾಜ ಹೇಗೆ ಬದಲಾಗುತ್ತೆ? ಎಲ್ಲದಕ್ಕೂ ಒಂದು ಲಿಮಿಟ್ ಇರುತ್ತೆ. ಆದರೆ ಕಾನೂನಿಂದ ನಾವ್ಯಾರು ಎಸ್ಕೇಪ್ ಆಗೋಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ರೇಣುಕಾಸ್ವಾಮಿ ಕುಟುಂಬದ ಬಗ್ಗೆ ಮಾತನಾಡಿ, ಅವರದ್ದು ಬಡಕುಟುಂಬ. ಅವರಿಗೆ ಎಲ್ಲೋ ಒಂದು ಕಡೆ ಸುಪ್ರೀಂ ತೀರ್ಪಿನಿಂದ ನ್ಯಾಯ ಸಿಕ್ಕಂತಾಗಿದೆ ಅನಿಸುತ್ತದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ದೇಶದ ಜನತೆಗೆ ಮೋದಿ ದೀಪಾವಳಿ ಡಬಲ್ ಗಿಫ್ಟ್ – ತೆರಿಗೆ ಇಳಿಕೆ, ಯುವಜನತೆಗೆ ವಿಕಸಿತ ಭಾರತ ರೋಜ್‌ಗಾರ್ ಯೋಜನೆ