– 14.13 ಕೋಟಿ ಹಣ ಇರುವ ಬ್ಯಾಂಕ್ ಖಾತೆ ಸೀಜ್
ಕಾರವಾರ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ (Satish Sail) ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಕೋಟ್ಯಂತರ ರೂ. ಹಣ ಹಾಗೂ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದಿದೆ.
1.68 ಕೋಟಿ ನಗದು, 6.75 ಕೆಜಿ ಚಿನ್ನದ ಬಿಸ್ಕೆಟ್‌ಗಳು ಮತ್ತು 14.13 ಕೋಟಿ ಹಣ ಹೊಂದಿರುವ ಬ್ಯಾಂಕ್ ಖಾತೆಯನ್ನು ಜಾರಿ ನಿರ್ದೇಶನಾಲಯ ಸೀಜ್ ಮಾಡಿದೆ. ಇದನ್ನೂ ಓದಿ: Karwar | ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇ.ಡಿ ದಾಳಿ
ಅಕ್ರಮ ಅದಿರು ಪ್ರಕರಣದಲ್ಲಿ ಜಾಮೀನಿನ ಮೇಲೆ ಶಾಸಕ ಸತೀಶ್ ಸೈಲ್ ಹೊರಗಿದ್ದಾರೆ. ಆ.13 ಮತ್ತು 14 ರಂದು ಇ.ಡಿ ಅಧಿಕಾರಿಗಳು, ಶಾಸಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು. ಈ ವೇಳೆ ಅಪಾರ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ತನಿಖೆಯನ್ನು ಸತೀಶ್ ಸೈಲ್ ಎದುರಿಸುತ್ತಿದ್ದಾರೆ. ಪ್ರಕರಣ ಹೈಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿರುವ ಹೊತ್ತಲ್ಲೇ ಇ.ಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಕಾರವಾರ (ಉತ್ತರ ಕನ್ನಡ), ಗೋವಾ, ಮುಂಬೈ ಮತ್ತು ನವದೆಹಲಿಯ ಅನೇಕ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗಿದೆ. ಇದನ್ನೂ ಓದಿ: ಬೇಲೆಕೇರಿ ಅದಿರು ನಾಪತ್ತೆ ಕೇಸ್ – 6 ಪ್ರಕರಣಗಳಲ್ಲೂ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು