ಬೆಂಗಳೂರು: ಇಲ್ಲಿನ ಕೆ.ಆರ್ ಮಾರ್ಕೆಟ್ (KR Market) ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿದ್ದಲ್ಲಿ ಭೀಕರ ಅಗ್ನಿ ಅವಘಡ (Massive fire) ಸಂಭವಿಸಿದ್ದು, ಓರ್ವ ವ್ಯಕ್ತಿ ಸುಟ್ಟುಕರಕಲಾಗಿರುವ ಘಟನೆ ನಡೆದಿದೆ.
ರಾಜಸ್ಥಾನ ಮೂಲದ ಮದನ್ ಸಿಂಗ್ ಮೃತಪಟ್ಟಿರುವ ವ್ಯಕ್ತಿ. ವಾಣಿಜ್ಯ ಕಟ್ಟಡದ (Commercial building) 3ನೇ ಅಂತಸ್ಥಿನಲ್ಲಿದ್ದ ಮನೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ದುರಂತ ಸಂಭವಿಸಿದೆ. ಈ ವೇಳೆ ಮಳಿಗೆಯಲ್ಲೇ ಇದ್ದ ಮದನ್ ಸಿಂಗ್ ಸಾವನ್ನಪ್ಪಿದ್ದಾನೆ. ಇನ್ನೂ ದುರಂತ ನಡೆದ ಮಳಿಗೆಯಲ್ಲಿ ಒಂದೇ ಕುಟುಂಬದ ಇನ್ನೂ ಮೂವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಒಟ್ಟು ನಾಲ್ವರು ಮನೆಯಲ್ಲಿ ವಾಸಿಸುತ್ತಿದ್ದರು. ಮನೆಯಲ್ಲಿ ಪತಿ, ಪತ್ನಿ ಹಾಗೂ 8 ಮತ್ತು 5 ವರ್ಷದ ಇಬ್ಬರು ಮಕ್ಕಳಿದ್ದರು. ಮದನ್ ಸಿಂಗ್ ಎಂಬಾತ ಸಾವನ್ನಪ್ಪಿದ್ದು, ಉಳಿದ ಮೂವರು ಸಾವನ್ನಪ್ಪಿರುವ ಶಂಕ್ಯೆ ವ್ಯಕ್ತವಾಗಿದೆ. ಇದನ್ನೂ ಓದಿ: ಈ ದೇಶಗಳಲ್ಲಿ ಬೀದಿ ನಾಯಿಗಳಿಗೆ ಗ್ಯಾಸ್ ಚೇಂಬರ್, ದಯಾಮರಣ ಶಿಕ್ಷೆ – ಯಾವ ದೇಶದಲ್ಲಿ ಏನು ಕಾನೂನು?
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಇದರೊಂದಿಗೆ ಸ್ಥಳದಲ್ಲಿ ಮೂರು ಅಂಬುಲೆನ್ಸ್‌ಗಳನ್ನ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಬಸ್ ಡಿಕ್ಕಿ – 10 ಮಂದಿ ಯಾತ್ರಿಕರು ಸಾವು
ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿರುವ ಹಿನ್ನೆಲೆ ರಕ್ಷಣಾ ಸಿಬ್ಬಂದಿ ಆಕ್ಸಿಜನ್ ಸಿಲಿಂಡರ್ ಧರಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇನ್ನೂ ದುರಂತ ನಡೆದ ಮಳಿಗೆಯಲ್ಲಿ ತಾಯಿ-ಮಗು ಒಳಗೆ ಸಿಲುಕಿದ್ದಾರೆಂದು ಹೇಳಲಾಗುತ್ತಿದೆ. ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಇದನ್ನೂ ಓದಿ: ಇಂದು ಬಿಜೆಪಿಯಿಂದ ʻಧರ್ಮಸ್ಥಳ ಚಲೋʼ – 500 ಕಾರುಗಳಲ್ಲಿ ಬೃಹತ್ ಯಾತ್ರೆ