ನವದೆಹಲಿ: ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla) ಭಾರತಕ್ಕೆ (India) ವಾಪಸ್ ಆಗಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ನಂತರ ಮೊದಲ ಬಾರಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ತಾಯ್ನಾಡಿಗೆ ಮರಳಿದ್ದಾರೆ.
A moment of pride for India! A moment of glory for #ISRO! A moment of gratitude to the dispensation that facilitated this under the leadership of PM @narendramodi.
India’s Space glory touches the Indian soil… as the iconic son of Mother India, #Gaganyatri Shubhanshu Shukla… pic.twitter.com/0QJsYHpTuS
— Dr Jitendra Singh (@DrJitendraSingh) August 16, 2025
ಅಮೆರಿಕದಿಂದ ಮಧ್ಯರಾತ್ರಿ 1:30ರ ವೇಳೆಗೆ ದೆಹಲಿಗೆ (Delhi) ಆಗಮಿಸಿದ ಶುಭಾಂಶು ಶುಕ್ಲಾಗೆ ಇಂದಿರಾ ಗಾಂಧಿ ಏರ್‌ಪೋರ್ಟ್‌ನಲ್ಲಿ ಅದ್ದೂರಿ ಸ್ವಾಗತ ಸಿಕ್ಕಿದೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಸಿಎಂ ರೇಖಾ ಗುಪ್ತಾ, ಶುಭಾಂಶು ಶುಕ್ಲಾರನ್ನ ಬರಮಾಡಿಕೊಂಡರು. ಶುಕ್ಲಾ ಇಂದು ಪ್ರಧಾನಿ ಮೋದಿಯನ್ನು ಭೇಟಿಯಾಗಲಿದ್ದಾರೆ. ಬಳಿಕ, ತಮ್ಮ ತವರು ಲಕ್ನೋಗೆ ಪ್ರಯಾಣಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಭಾನುವಾರ ಭಾರತಕ್ಕೆ ಶುಭಾಂಶು ಶುಕ್ಲಾ: ಆಕ್ಸಿಯಂ ಸ್ಪೇಸ್ ಮಿಷನ್ ಬಳಿಕ ತವರಿಗೆ ಮೊದಲ ಭೇಟಿ
ಆಕ್ಸಿಯಂ-4 ಮಿಷನ್‍ಗಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ್ದ ಶುಕ್ಲಾ, 2027ರಲ್ಲಿ ಇಸ್ರೋ ತನ್ನ ಮೊದಲ ಮಾನವ ಬಾಹ್ಯಾಕಾಶ ಹಾರಾಟ ಎದುರು ನೋಡುತ್ತಿರುವುದರಿಂದ ತಮ್ಮ ಅನುಭವಗಳನ್ನು ಸ್ನೇಹಿತರು ಹಾಗೂ ಸಹೋದ್ಯೋಗಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ. ಆಗಸ್ಟ್ 22-23 ರಂದು ನಡೆಯಲಿರುವ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯಲ್ಲಿ ಭಾಗವಹಿಸಲು ಅವರು ದೆಹಲಿಗೆ ಹಿಂದಿರುಗುತ್ತಾರೆ ಎಂದು ಹೇಳಲಾಗಿದೆ.
ಐಎಸ್‍ಎಸ್‍ನಲ್ಲಿ 18 ದಿನಗಳನ್ನು ಕಳೆದ ನಂತರ ಗಗನಯಾತ್ರಿ ಕಳೆದ ತಿಂಗಳು ಭೂಮಿಗೆ ಮರಳಿದ್ದರು. ಈ ಅವಧಿಯಲ್ಲಿ ಅವರು ಭಾರತಕ್ಕೆ ಸಂಬಂಧಿಸಿದ ಏಳು ನಿರ್ದಿಷ್ಟ ಪ್ರಯೋಗಗಳನ್ನು ನಡೆಸಿದ್ದಾರೆ. ಅವುಗಳನ್ನು ಈಗ ಭಾರತೀಯ ವಿಜ್ಞಾನಿಗಳು ಪರಿಶೀಲನೆಗಾಗಿ ಮರಳಿ ತರಲಾಗಿದ್ದು, ಫಲಿತಾಂಶಗಳು ಶೀಘ್ರದಲ್ಲೇ ಬರುವ ನಿರೀಕ್ಷೆಯಿದೆ. ಇದನ್ನೂ ಓದಿ: ಬಾಹ್ಯಾಕಾಶದಿಂದ ಮರಳಿದ ಶುಭಾಂಶು ಶುಕ್ಲಾ – ಮಗನನ್ನು ಕಂಡು ಪೋಷಕರು ಭಾವುಕ