– ಮಣ್ಣು ತೆರವು ಕಾರ್ಯಕ್ಕೆ ಮಳೆ ಅಡ್ಡಿ
ಹಾಸನ: ಪಶ್ಚಿಮಘಟ್ಟ ಭಾಗದಲ್ಲಿ ಭಾರೀ ಮಳೆಯಿಂದಾಗಿ ಸಕಲೇಶಪುರ (Sakleshpur) ತಾಲ್ಲೂಕಿನ ಎಡಕುಮಾರಿ ಬಳಿ ರೈಲ್ವೇ ಹಳಿ ಮೇಲೆ ಮಣ್ಣು ಕುಸಿತಗೊಂಡಿದೆ. ಇದರಿಂದ ಬೆಂಗಳೂರು-ಮಂಗಳೂರು (Bengaluru-Mangaluru) ರೈಲ್ವೆ ಮಾರ್ಗವನ್ನು ತಾತ್ಕಾಲಿಕ ಬಂದ್ ಮಾಡಲಾಗಿದ್ದು, ರಾತ್ರಿಯಿಡೀ ಮಣ್ಣು ತೆರವುಗೊಳಿಸುವ ಕಾರ್ಯ ನಡೆದಿದೆ.
ಧಾರಾಕಾರ ಮಳೆಯ ನಡುವೆಯೂ ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ ಗುಡ್ಡದ ಮಣ್ಣು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರೂ ಸಹ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಇದನ್ನೂ ಓದಿ: ಎಡಕುಮಾರಿ ಬಳಿ ಭೂಕುಸಿತ | ಮಂಗಳೂರು-ಬೆಂಗಳೂರು ರೈಲು ಸಂಚಾರ ಬಂದ್
ಇದಲ್ಲದೇ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಧಾರಾಕಾರ ಮಳೆಯಿಂದ ಜಿಲ್ಲೆಯಲ್ಲಿ ಅವಾಂತರ ಸೃಷ್ಟಿಯಾಗಿದೆ. ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ಹಲವೆಡೆ ಭೂಕುಸಿತವಾಗಿದೆ. ಮರ, ಗಿಡಗಳ ಸಮೇತ ರಸ್ತೆಗೆ ಮಣ್ಣು ಕುಸಿಯುತ್ತಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಶಿರಾಡಿಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದ್ದಾರೆ. ಇದನ್ನೂ ಓದಿ: ಬುರುಡೆ ಸಿಕ್ಕಿದ್ದೆಲ್ಲಿ? ತಂದಿದ್ದೆಲ್ಲಿ? – ಅನಾಮಿಕ ದೂರುದಾರನ ತೀವ್ರ ವಿಚಾರಣೆ
ಇನ್ನು ಮಾರನಹಳ್ಳಿ ಸಮೀಪ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದವರನ್ನು ಪೊಲೀಸರು ರಕ್ಷಣೆ ಮಾಡಿ ಬದಲಿ ವಾಹನದಲ್ಲಿ ಕಳುಹಿಸಿ ಕೊಟ್ಟಿದ್ದಾರೆ. ಇನ್ನು ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಯಲ್ಲಿ ಪೊಲೀಸರು ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಿದ್ದಾರೆ. ಮಾರನಹಳ್ಳಿ ಬಳಿ ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಇದನ್ನೂ ಓದಿ: ಧರ್ಮಸ್ಥಳ ಕ್ಷೇತ್ರದ ಪರ ನಿಂತ ರಾಜ್ಯ ಬಿಜೆಪಿ – ಶ್ರೀಕ್ಷೇತ್ರ ದೇವಸ್ಥಾನಕ್ಕೆ ಇಂದು ವಿಜಯೇಂದ್ರ & ಟೀಂ