– ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದ ವಿಜಯೇಂದ್ರ & ಟೀಂ
ಮಂಗಳೂರು: ಧರ್ಮಸ್ಥಳ (Dharmasthala) ಶ್ರೀ ಕ್ಷೇತ್ರಕ್ಕಿಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ನೇತೃತ್ವದ ಶಾಸಕರ ತಂಡ ಭೇಟಿ ನೀಡಿದೆ.
ಬೆಳ್ಳಂಬೆಳಗ್ಗೆಯೇ ವಿಜಯೇಂದ್ರ, ಸಿ.ಟಿ ರವಿ, ಎಸ್.ಆರ್ ವಿಶ್ವನಾಥ್, ಛಲವಾದಿ ನಾರಾಯಣಸ್ವಾಮಿ, ಬಿವೈ ವಿಜಯೇಂದ್ರ, ಕ್ಯಾಪ್ಟನ್ ಬೃಜೇಶ್ ಚೌಟ, ವೇದವ್ಯಾಸ ಕಾಮತ್, ಗುರುರಾಜ್ ಗಂಟಹೊಳೆ, ಪ್ರತಾಪ್ ಸಿಂಹ ನಾಯಕ್, ಹರೀಶ್ ಪೂಂಜಾ, ಕಿರಣ್ ಕುಮಾರ್ ಕೊಡ್ಗಿ, ಯಶ್ ಪಾಲ್ ಸುವರ್ಣ, ಧನಂಜಯ ಸರ್ಜಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದಿದ್ದಾರೆ.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿರುವ ವಿಜಯೇಂದ್ರ, ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದಾಗ ಬಿಜೆಪಿ ಸ್ವಾಗತ ಮಾಡಿದೆ. ತನಿಖೆ ಪಾರದರ್ಶಕವಾಗಿ ಆಗಬೇಕು, ಹುಟ್ಟಿರುವ ಅನುಮಾನಗಳು ಇತ್ಯರ್ಥ ಆಗಬೇಕು ಅಂತ ಸರ್ಕಾರದ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದೆವು ಎಂದರು.
ತನಿಖೆ ನಡೆಯುವ ವೇಳೆ ಅನೇಕ ಗೊಂದಲಗಳು, ಅಪಪ್ರಚಾರ ಸಾಮಜಿಕ ಜಾಲತಾಣಗಳಲ್ಲಿ ನಡೆಯುತ್ತಿದೆ. ಅಪಪ್ರಚಾರ ಬಗ್ಗೆ ಕಡಿವಾಣ ಹಾಕುವಂತಹ ಕೆಲಸ ಸರ್ಕಾರದಿಂದ ಆಗಬೇಕು. ಆದ್ರೆ ಸರ್ಕಾರ ಕಡಿವಾಣ ಹಾಕದೇ ಅಪಚಾರ ಎಸಗಿದೆ. ಕಡಿವಾಣ ಹಾಕದ ಸಿಎಂ ಈ ರಾಜ್ಯದ ಜನತೆಗೆ ಕ್ಷಮೆ ಕೇಳಬೇಕು. ಎಡಪಂಥೀಯವರನ್ನ ಕೇಳಿ ತನಿಖೆಗೆ ನೀಡಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದರ ಹಿಂದೆ ಎಡಪಂಥೀಯ ಸಂಘಟನೆಗಳಿವೆ ಅಂತ ಸ್ವತಃ ದಿನೇಶ್ ಗುಂಡುರಾವ್ ಹೇಳಿದ್ದಾರೆ. ಅದು ಸತ್ಯವಾದ್ರೆ ಸಮಗ್ರ ತನಿಖೆ ಆಗ್ಲಿ. ಜೊತೆಗೆ ಡಿಕೆಶಿಯವರೇ ಇದರ ಹಿಂದೆ ಷಡ್ಯಂತ್ರ ನಡೀತಿದೆ, ಸಂದರ್ಭ ಬಂದಾಗ ಷಡ್ಯಂತ ಬಯಲಿಗೆಳೆಯುತ್ತೇವೆ ಅಂತಾ ಹೇಳಿದ್ದಾರೆ. ಯಾಕೆ ಇದಕ್ಕೆ ಇನ್ನೂ ಸಂದರ್ಭ ಬಂದಿಲ್ವಾ ಅಂತಾ ಜನತೆ ಕೇಳ್ತಿದ್ದಾರೆ..? ಷಡ್ಯಂತ್ರ ಯಾರು ಮಾಡ್ತಿದ್ದಾರೆ ಅವರನ್ನ ಬಹಿರಂಗ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡ್ತಿಲ್ಲ. ಸರ್ಕಾರ ಇದರ ಹಿಂದೆ ಇರುವವರನ್ನ ಬಯಲಿಗೆಳೆಯಬೇಕು ಅಷ್ಟೇ. ಬಿಜೆಪಿ ಮದ್ಯಂತರ ವರದಿ ನೀಡಬೇಕೆಂದು ಸದನದಲ್ಲಿ ಆಗ್ರಹಿದೆ. ಇದಕ್ಕೆ ಶೀಘ್ರದಲ್ಲೆ ಇತಿಶ್ರೀ ಹಾಡಬೇಕು ಎಂದು ಆಗ್ರಹಿಸಿದರು.