ಬೆಂಗಳೂರು: ನಗರದ (Bengaluru) ಕೆಆರ್ ಪೇಟೆಯಯಲ್ಲಿ (KR Pete) ಐವರನ್ನು ಬಲಿ ಪಡೆದಿದ್ದ ಅಗ್ನಿ ದುರಂತ (Fire Accident) ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಾಲಕೃಷ್ಣ ಶೆಟ್ಟಿ ಮತ್ತು ಸಂದೀಪ್ ಶೆಟ್ಟಿ ಎಂದು ಗುರುತಿಸಲಾಗಿದೆ. ಕಟ್ಟಡದಲ್ಲಿ ಅಗ್ನಿ ಅವಘಡ ತಪ್ಪಿಸಲು ಸಾಮಾನ್ಯ ಸೇಫ್ಟಿ ಸಹ ಇರಲಿಲ್ಲ. ಈ ಕಾರಣಕ್ಕಾಗಿ ಕಟ್ಟಡದ ಮಾಲೀಕರನ್ನು ಬಂಧಿಸಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಹಕಾಯ್ ತಿಳಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ – ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ
ಅಗ್ನಿ ಅವಘಡದಲ್ಲಿ ಮೃತಪಟ್ಟ ಮದನ್ ಸಿಂಗ್ ಸಹೋದರ ಗೋಪಾಲ್ ಸಿಂಗ್ ದೂರಿನ ಅಧಾರದ ಮೇಲೆ ಎಫ್‍ಐಆರ್ ದಾಖಲಾಗಿದೆ. ಈ ಘಟನೆಗೆ ಇನ್ನೂ ನಿಖರ ಕಾರಣ ಗೊತ್ತಾಗಿಲ್ಲ. ನಿನ್ನೆ (ಆ.16) ರಕ್ಷಣಾ ಕಾರ್ಯಾಚರಣೆ ಸುಮಾರು 15 ಗಂಟೆಗಳ ಕಾಲ ನಡೆದಿದೆ. ಇವತ್ತು (ಆ.17) ಘಟನಾ ಸ್ಥಳಕ್ಕೆ ಎಫ್‍ಎಸ್‍ಎಲ್ ಟೀಂ ತೆರಳಿ ಮಾಹಿತಿ ಕಲೆ ಹಾಕಲಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಗೊತ್ತಾಗುತ್ತದೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದಿದ್ದಾರೆ.
ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಸಾವನ್ನಪ್ಪಿದ್ದರು. ಮತ್ತೊಂದು ಮಹಡಿಯಲ್ಲಿ ಸುರೇಶ್ ಎಂಬವರೂ ಸುಟ್ಟು ಕರಕಲಾಗಿದ್ದರು. ಇದನ್ನೂ ಓದಿ: ಬೆಂಗಳೂರು | ನಗರ್ತಪೇಟೆಯಲ್ಲಿ ಭೀಕರ ಅಗ್ನಿ ದುರಂತ – ಓರ್ವ ಸುಟ್ಟು ಕರಕಲು, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ