ಬೆಂಗಳೂರು: ಒಳಮೀಸಲಾತಿ ಪ್ರಕ್ರಿಯೆ ಮುಗಿದ ಬಳಿಕ ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ (Teachers Recruitment) ಪ್ರಕ್ರಿಯೆ ಶುರು ಮಾಡಲಾಗುತ್ತದೆ. ಶಿಕ್ಷಕರ ನೇಮಕಾತಿಯಲ್ಲಿ ದೈಹಿಕ ಶಿಕ್ಷಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ.ಇದನ್ನೂ ಓದಿ: ಹೆಬ್ಬಾಳ ಫ್ಲೈಓವರ್ ಉದ್ಘಾಟಿಸಿದ ಡಿಸಿಎಂ – ಮೇಲ್ಸೇತುವೆಯಲ್ಲಿ ಡಿಕೆಶಿ ಬೈಕ್ ಓಡಿಸಿದ ಸ್ಟೈಲ್ ನೋಡಿ
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್‌ನ (JDS) ಭೋಜೇಗೌಡ ಅವರು ಪ್ರಶ್ನೆ ಕೇಳಿದರು. ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಕೊರತೆಯಿದೆ. 6ರಿಂದ 10ನೇ ತರಗತಿಗೆ ದೈಹಿಕ ಶಿಕ್ಷಣ ಒಂದು ವಿಷಯವಾಗಿ ಸೇರಿಸಬೇಕು ಎಂದು 2006-07ರಲ್ಲಿ ವರದಿಯನ್ನ ಸರ್ಕಾರ ಒಪ್ಪಿದೆ. 80% ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಕರು ಇಲ್ಲ. ದೈಹಿಕ ಶಿಕ್ಷಕರಿಲ್ಲದೆ ಫಿಟ್ ಇಂಡಿಯಾ, ಖೇಲೋ ಇಂಡಿಯಾ ಹೇಗೆ ಆಗುತ್ತದೆ. ಸಮಾರೋಪಾದಿಯಲ್ಲಿ ದೈಹಿಕ ಶಿಕ್ಷಕರ ನೇಮಕ ಆಗಬೇಕು. ಖಾಲಿ ಇರುವ ದೈಹಿಕ ಶಿಕ್ಷಕರ ಹುದ್ದೆಗೂ ಅತಿಥಿ ಶಿಕ್ಷಕರನ್ನ ನೇಮಕ ಮಾಡಿಕೊಳ್ಳಿ ಎಂದು ಒತ್ತಾಯಿಸಿದರು.
ಇದಕ್ಕೆ ಸಚಿವ ಮಧು ಬಂಗಾರಪ್ಪ ಉತ್ತರಿಸಿ, ದೈಹಿಕ ಶಿಕ್ಷಕರ ಕೊರತೆ ಇರುವುದು ಸತ್ಯ. ಈಗ ಆಗುವ ನೇಮಕಾತಿಯಲ್ಲಿ ಹೆಚ್ಚು ಪ್ರಾಮುಖ್ಯತೆ ದೈಹಿಕ ಶಿಕ್ಷಕರಿಗೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಒಳಮೀಸಲಾತಿ ಪ್ರಕ್ರಿಯೆ ಮುಗಿದ ಕೂಡಲೇ ನೇಮಕಾತಿ ಪ್ರಕ್ರಿಯೆ ಶುರು ಮಾಡ್ತೀವಿ. ದೈಹಿಕ ಶಿಕ್ಷಕ ಹುದ್ದೆಗೆ ಅತಿಥಿ ಶಿಕ್ಷಕರ ನೇಮಕ ಮಾಡುವ ಬಗ್ಗೆ ಪರಿಶೀಲನೆ ಮಾಡಲಾಗುತ್ತದೆ ಎಂದು ಹೇಳಿದರು.ಇದನ್ನೂ ಓದಿ: ಸಂಜೆಯೊಳಗೆ ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್ ಮಾಡಲು ಪರಮೇಶ್ವರ್ ಸೂಚನೆ