– ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ಟ್ರಂಪ್ – ಶ್ವೇತಭವನದಲ್ಲೂ ಅದೇ ರಾಗ
ವಾಷಿಂಗ್ಟನ್: ಉಕ್ರೇನ್ ವಿರುದ್ಧದ ಯುದ್ಧ (Russia Ukraine War) ಮುಂದುವರಿಸದಂತೆ ರಷ್ಯಾವನ್ನು ತಡೆಯಲು ಟ್ರಂಪ್ ಭಾರತದ ಮೇಲೆ ಸುಂಕ ವಿಧಿಸಿದ್ದಾರೆ ಎಂದು ಅಮೆರಿಕದ cಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ (Karoline Leavitt) ಹೇಳಿದ್ದಾರೆ.
ಶ್ವೇತಭವನದಲ್ಲಿ (US White House) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತದ ಮೇಲೆ 50% ಆಮದು ಸುಂಕ ವಿಧಿಸುವುದರ ಹಿಂದಿನ ಉದ್ದೇಶ ರಷ್ಯಾದ ಮೇಲೆ ಒತ್ತಡ ತರುವುದಾಗಿತ್ತು. ಏಕೆಂದ್ರೆ ರಷ್ಯಾ-ಉಕ್ರೇನ್ ಯುದ್ಧ ಕೊನೆಗಾಣಿಸಲು ಸಾರ್ವಜನಿಕರಿಂದ ಭಾರೀ ಒತ್ತಡವಿತ್ತು. ಹಾಗಾಗಿಯೇ ಟ್ರಂಪ್ (Donald Trump) ಈ ಕ್ರಮ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಯಾವುದೇ ಸಭೆ ನಡೆಯುವುದಕ್ಕೂ ಮುನ್ನ ಇನ್ನೊಂದು ತಿಂಗಳು ಕಾಯಬೇಕು ಎಂಬ ಇತರರ ಸಲಹೆಗಳನ್ನು ಅಧ್ಯಕ್ಷರು ತಿರಸ್ಕರಿಸಿದ್ದಾರೆ. ಆದಷ್ಟು ಬೇಗ ಈ ಯುದ್ಧವನ್ನು ಕೊನೆಗಾಣಿಸಲು ಟ್ರಂಪ್ ಬಯಸಿದ್ದಾರೆ ಎಂದು ಲೀವಿಟ್ ತಿಳಿಸಿದ್ದಾರೆ. ಇದನ್ನೂ ಓದಿ: ಝೆಲೆನ್‌ಸ್ಕಿ, EU ನಾಯಕರನ್ನು ಕಚೇರಿಗೆ ಕರೆಸಿ ಪುಟಿನ್‌ಗೆ ಕಾಲ್ – ಬ್ರೋಕರ್ ಕೆಲ್ಸ ಮಾಡಿ ಯುದ್ಧ ಕೊನೆಯಾಗಲಿದೆ ಎಂದ ಟ್ರಂಪ್
ಇದಕ್ಕೂ ಮುನ್ನ ಟ್ರಂಪ್ ಶ್ವೇತಭವನದಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನ ಭೇಟಿಯಾದರು, ಮಾಜಿ ಅಧ್ಯಕ್ಷರು ಉಕ್ರೇನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸಲು ಮಾತುಕತೆ ನಡೆಸಲು ಪುಟಿನ್ ಅವರೊಂದಿಗೆ ತ್ರಿಪಕ್ಷೀಯ ಸಭೆ ನಡೆಸುವುದಾಗಿ ತಿಳಿಸಿದ್ದರು.
ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ಟ್ರಂಪ್
ಭಾರತ ಹಾಗೂ ಪಾಕಿಸ್ತಾನ ನಡುವಣ ಯುದ್ಧವನ್ನು ಕೊನೆಗೊಳಿಸಲು ಟ್ರಂಪ್ ಮಧ್ಯಸ್ಥಿಕೆ ವಹಿಸಿದ್ದಾರೆ ಎಂದೂ ಕ್ಯಾರೋಲಿನ್ ಮಗದೊಮ್ಮೆ ಪುನರುಚ್ಚರಿಸಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್ ಪರಿಸ್ಥಿತಿಯನ್ನ ಅಮೆರಿಕ ಸೂಕ್ಷ್ಮವಾಗಿ ಗಮನಿಸ್ತಿದೆ – ಕದನ ವಿರಾಮ ಕುಸಿಯಬಹುದು: ಮಾರ್ಕೊ ರೂಬಿಯೊ
ವ್ಯಾಪಾರ ವಿಷಯವನ್ನು ಮುಂದಿಟ್ಟುಕೊಂಡು ಭಾರತ-ಪಾಕ್ ಮಿಲಿಟರಿ ಸಂಘರ್ಷವನ್ನು ಟ್ರಂಪ್ ಕೊನೆಗೊಳಿಸಿದ್ದಾರೆ. ಸಂಘರ್ಷ ಅಂತ್ಯಗೊಳಿಸಿರುವುದನ್ನು ನಾವು ನೋಡಿದ್ದೇವೆ. ಇಲ್ಲದಿದ್ದರೇ ನ್ಯೂಕ್ಲಿಯರ್ ಯುದ್ಧಕ್ಕೆ ಕಾರಣವಾಗುತ್ತಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಲು ಮುಂದಾದ ಟ್ರಂಪ್‌ಗೆ ಯುರೋಪಿಯನ್ ಒಕ್ಕೂಟ ಬೆಂಬಲ – ನಾಳೆಯ ಸಭೆ ಮೇಲೆ ನಿಗಾ