– ರೆಡ್ಡಿ ಕೃತ್ಯಗಳನ್ನ ಬಯಲಿಗೆಳೆದಿದ್ದಕ್ಕೆ ನನ್ನ ವಿರುದ್ಧ ಆರೋಪ ಎಂದ ಸಂಸದ
– ʻವೋಟ್ ಚೋರಿʼ ಪ್ರಕರಣದ ಗಮನ ಬೇರೆಡೆಗೆ ಸೆಳೆಯಲು ಬಿಜೆಪಿ ಯತ್ನ
ನವದೆಹಲಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ (Sasikanth Senthil) ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟಿದ್ದೇ ಕೈ ಸಂಸದ ಸಸಿಕಾಂತ್ ಸೆಂಥಿಲ್ ಎಂಬ ಶಾಸಕ ಜನಾರ್ದನ ರೆಡ್ಡಿ (Janardhana Reddy) ಆರೋಪಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟಿದ್ದೇ ಕೈ ಸಂಸದ ಸಸಿಕಾಂತ್ ಸೆಂಥಿಲ್: ಜನಾರ್ದನ ರೆಡ್ಡಿ
ದೆಹಲಿಯಲ್ಲಿ ʻಪಬ್ಲಿಕ್ ಟಿವಿ; ಜೊತೆಗೆ ಮಾತನಾಡಿರುವ ಸೆಂಥಿಲ್, ಜನಾರ್ದನ ರೆಡ್ಡಿ ಹೇಳಿಕೆಗಳು ಆಧಾರ ರಹಿತ, ಅದರಲ್ಲಿ ಯಾವುದೇ ಸತ್ಯವಿಲ್ಲ. ಬಳ್ಳಾರಿಯಲ್ಲಿ ನಾನು ಸಹಾಯಕ ಆಯುಕ್ತನಾಗಿದ್ದಾಗ ಅವರ ಅಪರಾಧಗಳನ್ನ ಬಹಿರಂಗಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ನನ್ನ ಕೆಲಸದ ಭಾಗವಾಗಿ ನಾನು ಇದನ್ನು ಮಾಡಿದ್ದೇನೆ. ಬಹುಶಃ ಆ ಕಾರಣಗಳಿಂದ ನನ್ನ ಮೇಲೆ ಈ ಆರೋಪ ಮಾಡಿರಬಹುದು. ಇದನ್ನ ಹೊರತುಪಡಿಸಿ ಇದು ಬಿಜೆಪಿಯ ಹತಾಶ ರಾಜಕೀಯವಾಗಿರಬಹುದು ಎಂದು ತಿರುಗೇಟು ನೀಡಿದ್ದಾರೆ.
ಇತ್ತಿಚೇಗೆ ಕರ್ನಾಟಕದಲ್ಲಿ ಹೊರ ಬಂದ ʻವೋಟ್ ಚೋರಿʼ ಪ್ರಕರಣದ ಗಮನವನ್ನ ಬೇರೆಡೆ ಸೆಳೆಯುವ ಪ್ರಯತ್ನಕ್ಕಾಗಿ ರೆಡ್ಡಿ ಆರೋಪ ಮಾಡಿರಬಹುದು. ವದಂತಿಗೆ ನಾನು ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಚಿವ ಸೆಂಥಿಲ್ ಬಾಲಾಜಿಗೆ ಶೀಘ್ರವೇ ಬೈಪಾಸ್ ಸರ್ಜರಿ ಅಗತ್ಯ – ಇಡಿ ಅರೆಸ್ಟ್ ಬೆನ್ನಲ್ಲೇ ವೈದ್ಯರ ಸಲಹೆ
ಜನಾರ್ಧನ ರೆಡ್ಡಿ ಆರೋಪಗಳೇನು?
ಮಾಜಿ ಐಎಎಸ್ ಅಧಿಕಾರಿ, ತಮಿಳುನಾಡಿನ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟು ಕಳುಹಿಸಿದ್ದಾರೆ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪಿಸಿದ್ದರು.
ಕಳೆದ 15-20 ದಿನದಿಂದ ಧರ್ಮಸ್ಥಳದ ವಿಚಾರದಲ್ಲಿ ಸಾಕಷ್ಟು ಅಪಪ್ರಚಾರ ನಡೆಯುತ್ತಿದೆ. ಬಳ್ಳಾರಿ ಮೂಲದ ಅನ್ಯಮತಿಯ ಯುಟ್ಯೂಬರ್ ಒಬ್ಬ ಸೌಜನ್ಯ ಪ್ರಕರಣದ ಬಗ್ಗೆ ಮಾತನಾಡಿದ ವಿಡಿಯೋಗೆ ಮಿಲಿಯನ್ಸ್ ವ್ಯೂವ್ಸ್ ಬಂತು. ಆಗ ಎಡ ಪಂತಿಯ ಮೂವರು ಸೇರಿಕೊಂಡು ಇದನ್ನ ದೊಡ್ಡ ಮಟ್ಟಕ್ಕೆ ಕೊಂಡೊಯ್ಯಲು ಮುಂದಾದರು. ಕರ್ನಾಟಕ, ಭಾರತ ಅಷ್ಟೇ ಅಲ್ಲ ಈ ಜಗತ್ತಿನಲ್ಲಿ ಕೋಟ್ಯಂತರ ಜನ ನಂಬುವ ಸತ್ಯ ದೇವರು ಧರ್ಮಸ್ಥಳ. ಇಂತಹ ಧರ್ಮಸ್ಥಳದ ಬಗ್ಗೆ ಎಡಪಂತಿಯರು ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ತಂದಿದ್ದಾರೆ. ಹೈಕಮಾಂಡ್ ಸರ್ಕಾರಕ್ಕೆ ಒತ್ತಡ ಹಾಕಿದ್ದರಿಂದ ವಿಶೇಷ ತನಿಖಾ ತಂಡ ರಚನೆಯಾಗಿದೆ. ಧರ್ಮಸ್ಥಳ ಬುರುಡೆ ರಹಸ್ಯದ ಮಾಸ್ಟರ್ ಮೈಂಡ್ ಸೆಂಥಿಲ್.
ಹೈಕಮಾಂಡ್ ಸೂಚನೆಯಿಂದ ಕಾಂಗ್ರೆಸ್ ಸರ್ಕಾರ ಈಗ ಟ್ರ್ಯಾಪ್‌ನಲ್ಲಿ ಸಿಲುಕಿದೆ. ಅಭಿಮನ್ಯು ಚಕ್ರವ್ಯೂಹದಲ್ಲಿ ಸಿಲುಕಿದಂತೆ ಎಸ್‌ಐಟಿ ತನಿಖೆ ಮೂಲಕ ಚಕ್ರವ್ಯೂಹದಲ್ಲಿ ಸಿಲುಕಿದೆ. ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರೇ ಹೇಳಿದ್ದಾರೆ. ಧರ್ಮಸ್ಥಳದ ವಿರುದ್ಧ ವ್ಯವಸ್ಥಿತವಾದ ಈ ಅಪಪ್ರಚಾರ ನಡೆದಿದೆ ಎಂದು ದೂರಿದ್ದರು. ಇದನ್ನೂ ಓದಿ: ಬುರುಡೆ ಕೇಸ್ ಹಿಂದೆ ಕೈ ಸಂಸದ ಶಶಿಕಾಂತ್ ಸೆಂಥಿಲ್ ಇದ್ದಾರೆ: ಯಶ್‌ಪಾಲ್ ಸುವರ್ಣ