ನವದೆಹಲಿ: ಬೀದಿ ನಾಯಿಗಳನ್ನು (Street Dogs) ಆಶ್ರಯ ತಾಣಗಳಿಗೆ ಸ್ಥಳಾಂತರ ಸಂಬಂಧ ದೆಹಲಿ ಮಹಾನಗರ ಪಾಲಿಕೆ (MCD) ಹೊರಡಿಸಿದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ (Supreme Court) ನಿರಾಕರಿಸಿದೆ.
ಈ ಸಂಬಂಧ ಅರ್ಜಿ ಸಲ್ಲಿಸಲಾಗಿದೆ ಎಂದು ವಕೀಲರು ತಿಳಿಸಿದ ನಂತರ, ನ್ಯಾ.ಜೆ.ಕೆ ಮಹೇಶ್ವರಿ ಮತ್ತು ವಿಜಯ್ ಬಿಷ್ಣೋಯ್ ಅವರಿದ್ದ ಪೀಠವು ತುರ್ತು ವಿಚಾರಣೆಯನ್ನು ನಡೆಸಲು ನಿರಾಕರಿಸಿದೆ.ಇದನ್ನೂ ಓದಿ: ಉಪ ರಾಷ್ಟ್ರಪತಿ ಚುನಾವಣೆಗೆ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ನ್ಯಾ. ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ನ್ಯಾ.ಜೆಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರನ್ನೊಳಗೊಂಡ ಪೀಠವು, ಆ.11ರಂದು ದೆಹಲಿ-ಎನ್‌ಸಿಆರ್ ಸುತ್ತಮುತ್ತಲಿನ ಬೀದಿ ನಾಯಿಗಳನ್ನು ಹಿಡಿದು ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿತ್ತು. ಈ ನಿರ್ದೇಶನಗಳಿಗೆ ತಡೆ ನೀಡಬೇಕೆಂದು ಕೋರಿ ಸಲ್ಲಿಸಲಾದ ಮಧ್ಯಂತರ ಅರ್ಜಿಯ ಆದೇಶವನ್ನು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್‌ವಿ ಅಂಜಾರಿಯಾ ಅವರಿದ್ದ ಪೀಠವು ಕಾಯ್ದಿರಿಸಿತ್ತು. ಬೀದಿ ನಾಯಿಗಳ ಸಂಪೂರ್ಣ ಸಮಸ್ಯೆಗೆ ಸ್ಥಳೀಯ ಅಧಿಕಾರಿಗಳ ನಿಷ್ಕ್ರಿಯತೆಯೇ ಕಾರಣ ಎಂದು ಹೇಳಿತ್ತು.
ರಾಷ್ಟ್ರ ರಾಜಧಾನಿಯಲ್ಲಿ ಬೀದಿ ನಾಯಿ ಕಡಿತವು ವಿಶೇಷವಾಗಿ ಮಕ್ಕಳಲ್ಲಿ ರೇಬೀಸ್‌ಗೆ ಕಾರಣವಾದ ಬಗ್ಗೆ ದಾಖಲಾದ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆ ಜು.28 ರಂದು ಪ್ರಾರಂಭವಾಗಿತ್ತು. ಈ ವೇಳೆ ಸುಪ್ರೀಂ ಕೋರ್ಟ್ ಹಲವಾರು ನಿರ್ದೇಶನಗಳನ್ನು ನೀಡಿತ್ತು.ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೆ ಬೈಕ್ ಟ್ಯಾಕ್ಸಿ ಸೇವೆ ಆರಂಭ