ನವದೆಹಲಿ: ಬೆಂಗಳೂರು ಕೇಂದ್ರ ಸೇರಿದಂತೆ ದೇಶದ ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ‘ಮತಗಳ್ಳತನ’ (Vote Theft) ನಡೆದಿದೆ ಎಂಬ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆರೋಪದ ಕುರಿತು ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ (Supreme Court) ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದೆ.
ಮತದಾರರ ಪಟ್ಟಿಯ ತಯಾರಿಕೆ, ನಿರ್ವಹಣೆ ಮತ್ತು ಪ್ರಕಟಣೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಚೌಕಟ್ಟಿಗೆ ನಿರ್ದೇಶನಗಳನ್ನು ನೀಡುವಂತೆ ಮತ್ತು ನಕಲಿ ಅಥವಾ ಕಾಲ್ಪನಿಕ ನಮೂದುಗಳನ್ನು ಪತ್ತೆಹಚ್ಚುವ ಮತ್ತು ತಡೆಗಟ್ಟುವ ಕಾರ್ಯವಿಧಾನಗಳನ್ನು ಒಳಗೊಂಡಂತೆ ಭಾರತೀಯ ಚುನಾವಣಾ ಆಯೋಗಕ್ಕೆ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಇದನ್ನೂ ಓದಿ: ನನ್ನ ಪತಿ ಸುಳ್ಳು ಹೇಳ್ತಿದ್ದಾನೆ, ಇಟ್ಟುಕೊಂಡವಳ ಜೊತೆ ಸಂಸಾರ ಮಾಡಲು ನನ್ನನ್ನು ಓಡಿಸಿದ್ದ: ಅನಾಮಿಕನ ಮೊದಲ ಪತ್ನಿ
ಅಲ್ಲದೇ ಅರ್ಥಪೂರ್ಣ ಪರಿಶೀಲನೆ, ಲೆಕ್ಕಪರಿಶೋಧನೆ ಮತ್ತು ಸಾರ್ವಜನಿಕ ಪರಿಶೀಲನೆಗೆ ಅನುವು ಮಾಡಿಕೊಡಲು ಮತದಾರರ ಪಟ್ಟಿಯನ್ನು ಸುಲಭವಾಗಿ ಪ್ರವೇಶಿಸಬಹುದಾದ, ಮೆಶಿನ್ ರೀಡೇಬಲ್ ಮತ್ತು ಆಪ್ಟಿಕಲ್ ಕ್ಯಾರೆಕ್ಟರ್ ರಿಕಗ್ನಿಷನ್ ಕಂಪ್ಲೆಂಟ್ ಸ್ವರೂಪಗಳಲ್ಲಿ ಪ್ರಕಟಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಇದನ್ನೂ ಓದಿ: ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಡಿಆರ್‌ಐ ಅಧಿಕಾರಿಗಳಿಂದ ರಾಮಚಂದ್ರ ರಾವ್ ವಿಚಾರಣೆ
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರೀ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಆಗಸ್ಟ್ 7ರಂದು ರಾಹುಲ್ ಗಾಂಧಿ ನಡೆಸಿದ ಪತ್ರಿಕಾಗೋಷ್ಠಿಯನ್ನು ಆಧರಿಸಿ ವಕೀಲ ರೋಹಿತ್ ಪಾಂಡೆ ಪಿಐಎಲ್ ಸಲ್ಲಿಸಿದ್ದಾರೆ. ಇದನ್ನೂ ಓದಿ: ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ – ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್