ನವದೆಹಲಿ: ನಮ್ಮ ನೆಲದಿಂದಲೇ ಒಬ್ಬರು, ನಾವೇ ತಯಾರಿಸಿದ ಕ್ಯಾಪ್ಸೂಲ್‌ನಲ್ಲಿ ಕುಳಿತು, ನಮ್ಮದೇ ರಾಕೆಟ್ ಮೂಲಕ ಬಾಹ್ಯಾಕಾಶಕ್ಕೆ ಪ್ರಯಾಣಿಸುವ ಹಂತ ಸಮೀಪದಲ್ಲಿದೆ ಎಂದು ಗಗನಯಾತ್ರಿ ಶುಭಾಂಶು ಶುಕ್ಲಾ (Shubanshu Shukla) ಹೇಳಿದ್ದಾರೆ.ಇದನ್ನೂ ಓದಿ: ಅಡಿಕೆ ಬೆಳೆ GST ವ್ಯಾಪ್ತಿಯಿಂದ ಹೊರಗಿಡಿ, ಹಳದಿ ಎಲೆ ರೋಗ ಬಿದ್ದ ಭೂಮಿಗೆ ಪರಿಹಾರ ನೀಡಿ – ರಾಜ್ಯ ಸಂಸದರ ನಿಯೋಗ ಮನವಿ
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಯೋಜನೆಗಳ ಬಗ್ಗೆ ಅನುಭವವನ್ನು ಹಂಚಿಕೊಂಡಿದ್ದಾರೆ. ಆಕ್ಸಿಯಮ್-4 ಯೋಜನೆಯೂ ಭಾರತ ಕೈಗೊಳ್ಳುತ್ತಿರುವ ಗಗನಯಾನ ಯೋಜನೆಗೆ ನೆರವಾಗಿದೆ. ಕಳೆದ ಒಂದು ವರ್ಷದಿಂದ ಬಾಹ್ಯಾಕಾಶ ಯಾನಕ್ಕಾಗಿ ಸಾಕಷ್ಟು ತರಬೇತಿ ಪಡೆದಿದ್ದೇನೆ ಎಂದರು. ನನ್ನ ಬಾಹ್ಯಾಕಾಶ ಯಾತ್ರೆಯೂ ಇಡೀ ದೇಶದ ಧ್ಯೇಯವಾಗಿತ್ತು. ಬಾಹ್ಯಾಕಾಶದಲ್ಲಿನ ಅನುಭವವು ನೆಲದ ಮೇಲೆ ಕಲಿಯುವುದಕ್ಕಿಂತಲೂ ಬಹಳ ಭಿನ್ನವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಬಾಹ್ಯಾಕಾಶದ ಅದ್ಭುತ ಅವಕಾಶ ನೀಡಿದ್ದಕ್ಕಾಗಿ ಭಾರತ ಸರ್ಕಾರ, ಇಸ್ರೋ, ಹಾಗೂ ಸಂಶೋಧಕರಿಗೆ ಧನ್ಯವಾದ. ಇದೇ ವೇಳೆ ಭಾರತದಲ್ಲಿ ಬೆಳೆಯುತ್ತಿರುವ ಬಾಹ್ಯಾಕಾಶ ಸಾಮರ್ಥ್ಯಗಳನ್ನು ಎತ್ತಿ ತೋರಿಸಿದರು. ಆಕ್ಸಿಯಮ್-4 ಕಾರ್ಯಾಚರಣೆಯ ಒಳನೋಟಗಳನ್ನು ದೇಶದ ಜನತೆ ಮುಂದೆ ಹಂಚಿಕೊಂಡಿದ್ದಾರೆ.ಇದನ್ನೂ ಓದಿ: ಜಮ್ಮು ರೈಲು ನಿಲ್ದಾಣ ಸ್ಫೋಟಿಸುವ ಸಂದೇಶ ಹೊತ್ತೊಯ್ಯುತ್ತಿದ್ದ ಪಾರಿವಾಳ ಸೆರೆ