– ಆಕ್ರಮಣಕಾರಿ, ಅನಾರೋಗ್ಯ ನಾಯಿಗಳನ್ನ ಮಾತ್ರ ಸ್ಥಳಾಂತರಿಸಿ
– ಸಾರ್ವಜನಿಕವಾಗಿ ಆಹಾರ ಕೊಟ್ರೆ ಕಟ್ಟುನಿಟ್ಟಿನ ಕ್ರಮ
ನವದೆಹಲಿ: ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಶಾಶ್ವತವಾಗಿ ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕೆಂ ತನ್ನದೇ ಸುಪ್ರೀಂ ಕೋರ್ಟ್ (Supreme Court) ತಿದ್ದುಪಡಿ ತಂದಿದೆ. ಬೀದಿ ನಾಯಿಗಳನ್ನು (Stray Dogs) ಹಿಡಿದು, ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಅವುಗಳನ್ನು ಬಿಡುಗಡೆ ಮಾಡಿ, ಆಕ್ರಮಣಕಾರಿ, ಅನಾರೋಗ್ಯ ಇರುವ ನಾಯಿಗಳನ್ನು ಮಾತ್ರ ಶೆಡ್‌ಗಳಿಗೆ ಸ್ಥಳಾಂತರಿಸುವಂತೆ ಕೋರ್ಟ್ ನಿರ್ದೇಶನ ನೀಡಿದೆ. ಈ ಸಂಬಂಧ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.
ನ್ಯಾ. ವಿಕ್ರಮ್ ನಾಥ್, ನ್ಯಾ. ಸಂದೀಪ್ ಮೆಹ್ತಾ ಮತ್ತು ನ್ಯಾ. ಎನ್.ವಿ ಅಂಜಾರಿಯಾ ನೇತೃತ್ವದ ತ್ರಿಸದಸ್ಯ ಪೀಠವು ಈ ಆದೇಶ ಪ್ರಕಟಿಸಿದ್ದು, ಆಗಸ್ಟ್ 11ರಂದು ಹೊರಡಿಸಿದ್ದ ತೀರ್ಪಿನಲ್ಲಿ ತಿದ್ದುಪಡಿ ಮಾಡಿದೆ. ನ್ಯಾ. ಪಾರ್ದಿವಾಲಾ ಪೀಠದ ಆದೇಶಕ್ಕೆ ಶ್ವಾನಪ್ರಿಯರಿಂದ ಅಸಮಾಧಾನ ವ್ಯಕ್ತವಾದ ಹಿನ್ನೆಲೆ ಪ್ರಕರಣ ವಿಚಾರಣೆಯನ್ನ ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಲಾಗಿತ್ತು. ಇದನ್ನೂ ಓದಿ: ಜಮ್ಮು & ಕಾಶ್ಮೀರ | ಕಾನ್ಸ್‌ಟೇಬಲ್‌ಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ್ದ 6 ಪೊಲೀಸರು ಅರೆಸ್ಟ್
ಈ ಮೊದಲು ಬೀದಿ ನಾಯಿಗಳನ್ನು ಶಾಶ್ವತವಾಗಿ ಆಶ್ರಯ ತಾಣಗಳಿಗೆ (ಶೆಡ್) ಸ್ಥಳಾಂತರಿಸಬೇಕು ಎಂದು ಹೇಳಿದ್ದ ಸುಪ್ರೀಂ ಈಗ, ಅನಾರೋಗ್ಯ ಮತ್ತು ಆಕ್ರಮಣಕಾರಿ ಬೀದಿ ನಾಯಿಗಳನ್ನು ಮಾತ್ರ ಆಶ್ರಯ ತಾಣಗಳಲ್ಲಿ ಇರಿಸುವಂತೆ ಸೂಚಿಸಿದೆ. ಉಳಿದ ನಾಯಿಗಳನ್ನು ಹಿಡಿದು, ಸಂತಾನಹರಣ ಚಿಕಿತ್ಸೆ, ಜಂತುಹುಳು ನಿವಾರಣಾ ಲಸಿಕೆ ಹಾಕಿದ ಬಳಿಕ ಅವುಗಳನ್ನು ಹಿಡಿದ ಪ್ರದೇಶದಲ್ಲೇ ಬಿಡುವಂತೆ ತಿಳಿಸಿದೆ. ಇದನ್ನೂ ಓದಿ: ಮತಗಳವು ಆರೋಪ – ಸುಪ್ರೀಂ ಕೋರ್ಟ್‌ಗೆ ಪಿಐಎಲ್ ಸಲ್ಲಿಕೆ
ಮುಂದುವರಿದು… ರೇಬೀಸ್ ಅಥವಾ ಅನಾರೋಗ್ಯವುಳ್ಳ ನಾಯಿಗಳು ಹಾಗೂ ಆಕ್ರಮಣಕಾರಿ ನಾಯಿಗಳನ್ನ ಮಾತ್ರ ಲಸಿಕೆ ಹಾಕಿ ಪ್ರತ್ಯೇಕ ಆಶ್ರಯತಾಣಗಳಲ್ಲಿ ಇರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದೆ. ಇದನ್ನೂ ಓದಿ: ಐದೇ ನಿಮಿಷದಲ್ಲಿ ಆಟೋ, ಇಲ್ಲವಾದಲ್ಲಿ 50 ರೂ. ಆಫರ್ ನೀಡಿ ವಂಚನೆ – ರಾಪಿಡೋಗೆ 10 ಲಕ್ಷ ದಂಡ
ಸಾರ್ವಜನಿಕವಾಗಿ ಆಹಾರ ನೀಡುವಂತಿಲ್ಲ
ಮುಂದುವರಿದು… ಬೀದಿ ನಾಯಿಗಳಿಗೆ ಸಾರ್ವಜನಿಕವಾಗಿ ಆಹಾರ ನೀಡುವುದಕ್ಕೆ ಸುಪ್ರೀಂ ನಿಷೇಧ ಹೇರಿದೆ. ನಿಮಯ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಿದೆ. ಸಾರ್ವಜನಿಕವಾಗಿ ಅವುಗಳಿಗೆ ಆಹಾರ ನೀಡುವುದಕ್ಕೆ ಅನುಮತಿಯಿಲ್ಲ, ಪ್ರತ್ಯೇಕ ಮೀಸಲಾದ ಆಹಾರ ಸ್ಥಳಗಳನ್ನ ರಚಿಸಲಾಗುವುದು, ಅಲ್ಲಿ ಮಾತ್ರ ಆಹಾರ ನೀಡಬೇಕು ಎಂದು ಕೋರ್ಟ್ ಹೇಳಿದೆ.
ಇನ್ನೂ ಪ್ರಾಣಿ ಪ್ರಿಯರು ನಾಯಿಗಳನ್ನು ದತ್ತು ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಿರುವ ಕೋರ್ಟ್, ದತ್ತು ಪಡೆದ ನಾಯಿಗಳನ್ನು ಮರಳಿ ಬೀದಿಗಳಿಗೆ ಹಿಂತಿರುಗಿಸದಂತೆ ನೋಡಿಕೊಳ್ಳುವುದು ಅವರ ಜವಾಬ್ದಾರಿ. ಅದಕ್ಕಾಗಿ ಪ್ರತಿ ಅರ್ಜಿದಾರ 25,000 ರೂ. ಮತ್ತು ಎನ್‌ಜಿಒಗಳು 2 ಲಕ್ಷ ರೂ. ಠೇವಣಿ ಇಡಬೇಕು ಎಂದು ನಿರ್ದೇಶಿಸಿತು. ಮುಖ್ಯವಾಗಿ ಈ ಕುರಿತು ರಾಷ್ಟ್ರೀಯ ನೀತಿ ರೂಪಿಸಲು ಸೂಚಿಸಿತು. ಇದನ್ನೂ ಓದಿ: ಅಡಿಕೆ ಬೆಳೆ GST ವ್ಯಾಪ್ತಿಯಿಂದ ಹೊರಗಿಡಿ, ಹಳದಿ ಎಲೆ ರೋಗ ಬಿದ್ದ ಭೂಮಿಗೆ ಪರಿಹಾರ ನೀಡಿ – ರಾಜ್ಯ ಸಂಸದರ ನಿಯೋಗ ಮನವಿ