ನೆಲಮಂಗಲ: 16 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಮಾದನಾಯಕನಹಳ್ಳಿ (Madanyakanahalli) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕುಸುಮಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಶುಕ್ರವಾರ ಸಂಜೆ 6:30ಕ್ಕೆ ಕುಸುಮಾ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮನೆಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಬಿಹಾರ ಎಸ್‌ಐಆರ್‌ಗೆ ಪುರಾವೆಯಾಗಿ ಆಧಾರ್ ಕಾರ್ಡ್ ಸ್ವೀಕರಿಸಬೇಕು: ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ
ರಾಮು ಹಾಗೂ ಶೋಭಾ ದಂಪತಿಯ ಕುಸುಮಾ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನೆಲಂಮಗಲ (Nelamangala) ಸರ್ಕಾರಿ ಶವಾಗಾರಕ್ಕೆ ರವಾನಿಸಲಾಗಿದೆ. ಇದನ್ನೂ ಓದಿ: ಅನನ್ಯಾ ಭಟ್ ಫೋಟೋ ಕೇಳಿದಾಗ ಮಾಡೆಲ್ ಫೋಟೋ ಕಳಿಸಿದ್ದರು ಸುಜಾತ ಭಟ್: ಗಿರೀಶ್ ಮಟ್ಟಣ್ಣನವರ್