– ಜೀವನೋಪಾಯಕ್ಕಾಗಿ ಮನವಿ, ತಕ್ಷಣವೇ ಮಧ್ಯಪ್ರವೇಶಿಸುವಂತೆ ಮನವಿ
ನವದೆಹಲಿ: ಕರ್ನಾಟಕದ (Karnataka) ಬೈಕ್ ಟ್ಯಾಕ್ಸಿ ಚಾಲಕರು ರಾಹುಲ್ ಗಾಂಧಿಯವರನ್ನು (Rahul Gandhi) ಭೇಟಿಯಾಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧದಿಂದ ಸಂಕಷ್ಟ ಎದುರಿಸುತ್ತಿರುವ ರಾಜ್ಯದ ಲಕ್ಷಾಂತರ ಅಸಂಘಟಿತ (ಗಿಗ್) ಕಾರ್ಮಿಕರ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘಕ್ಕೆ ದೊಡ್ಡ ಬೆಂಬಲ ಸಿಕ್ಕಿದಂತಾಗಿದೆ.
ಪ್ರತಿಪಕ್ಷ ನಾಯಕ ಮತ್ತು ಕಾಂಗ್ರೆಸ್ (Congress) ಸಂಸದ ರಾಹುಲ್ ಗಾಂಧಿಯವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ಸಂಘದ ಸದಸ್ಯರು, ಬೈಕ್ ಟ್ಯಾಕ್ಸಿ ನಿಷೇಧದಿಂದ ಕರ್ನಾಟಕದಲ್ಲಿ ಚಾಲಕರು ಎದುರಿಸುತ್ತಿರುವ ಸಂಕಷ್ಟವನ್ನು ವಿವರಿಸಿದರು. ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ನಿಟ್ಟಿನಲ್ಲಿ ಸ್ಪಷ್ಟ ನೀತಿ ರೂಪಿಸಲು ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಮನವಿ ಸಲ್ಲಿಸಿದ್ದಾರೆ.ಇದನ್ನೂ ಓದಿ: ಬೆಳಗಾವಿಗೆ ಡ್ರಗ್ಸ್ ವಿತರಿಸುತ್ತಿದ್ದ ಗ್ಯಾಂಗ್ ಸದಸ್ಯರು ಅರೆಸ್ಟ್ – 50 ಕೆಜಿ ಗಾಂಜಾ, 30 ಲಕ್ಷದ ಮಾದಕ ವಸ್ತು ಜಪ್ತಿ
ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸಂಬಂಧ ಸಮರ್ಪಕ ನೀತಿಯನ್ನು ರೂಪಿಸುವಂತೆ ಮನವಿ ಮಾಡಿಕೊಂಡಿದೆ. ನೀತಿ ರೂಪಿಸುವವರೆಗೆ, ಕಾರ್ಮಿಕರ ವಿರುದ್ಧ ದಂಡಾತ್ಮಕ ಕ್ರಮ ಕೈಗೊಳ್ಳದೆ ತಕ್ಷಣ ಸೇವೆ ಪುನರಾರಂಭಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿದೆ.
ಸಂಘದ ಪ್ರತಿನಿಧಿಗಳ ಮಾತುಗಳನ್ನು ಕೇಳಿರುವ ರಾಹುಲ್ ಗಾಂಧಿಯವರು, ಜೀವನ ನಡೆಸಲು ಹೋರಾಡುತ್ತಿರುವ ಯುವ ಕಾರ್ಮಿಕರ ಪರ ನಿಲ್ಲುವುದಾಗಿ ಭರವಸೆ ನೀಡಿದ್ದಾರೆ. ಅವರ ಈ ಭರವಸೆಯಿಂದ, ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರಾಜ್ಯದ 6 ಲಕ್ಷಕ್ಕೂ ಹೆಚ್ಚು ಚಾಲಕರು ಮತ್ತು ಅವರ ಕುಟುಂಬಗಳಿಗೆ ಹೊಸ ಭರವಸೆ ಮೂಡಿದಂತಾಗಿದೆ.ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬಕ್ಕೆ ಬ್ಯಾಂಕ್ ಲಾಕರ್‌ನಿಂದ ತಂದಿದ್ದ 1 ಕೆಜಿ ಚಿನ್ನ, 15 ಲಕ್ಷ ನಗದು ಕಳ್ಳರ ಪಾಲು!