ಆಲ್ಬನಿ: ನಯಾಗರಾ ಫಾಲ್ಸ್ (Niagara Falls) ವೀಕ್ಷಿಸಿ ನ್ಯೂಯಾರ್ಕ್‌ಗೆ (New York) ಹಿಂತಿರುಗುತ್ತಿದ್ದ ಬಸ್‌ವೊಂದು ಪಲ್ಟಿ ಹೊಡೆದ ಪರಿಣಾಮ ಭಾರತೀಯರು (Indians) ಸೇರಿ ಐದು ಜನರು ಸಾವನ್ನಪ್ಪಿರುವ ಘಟನೆ ಪೆಂಬ್ರೋಕ್‌ನಲ್ಲಿ ನಡೆದಿದೆ.
ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.ಇದನ್ನೂ ಓದಿ: ಕೊಲ್ಲಾಪುರದಲ್ಲಿ ಅನ್ಯಕೋಮಿನ ಗುಂಪುಗಳ ನಡುವೆ ಘರ್ಷಣೆ – 10ಕ್ಕೂ ಹೆಚ್ಚು ಮಂದಿಗೆ ಗಾಯ
ಅಪಘಾತದಲ್ಲಿ ಮೃತಪಟ್ಟವರೆಲ್ಲರು ವಯಸ್ಕರಾಗಿದ್ದಾರೆ. ಬಸ್ ಪಲ್ಟಿಯಾದಾಗ ಕೆಲವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಬಳಿಕ ಹೆಲಿಕಾಪ್ಟರ್ ಹಾಗೂ ಆಂಬ್ಯುಲೆನ್ಸ್ ಮೂಲಕ 40ಕ್ಕೂ ಹೆಚ್ಚು ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ನ್ಯೂಯಾರ್ಕ್ ಪೊಲೀಸರು ತಿಳಿಸಿದ್ದಾರೆ.
ಸ್ಟೇಟನ್ ಐಲ್ಯಾಂಡ್‌ನ ಎಂ&ವೈ ಟೂರ್ ಲಿಂಕ್ ನಿರ್ವಹಿಸುತ್ತಿದ್ದ ಈ ಬಸ್, ಕಳೆದ ಎರಡು ವರ್ಷಗಳಲ್ಲಿ ಯಾವುದೇ ಅಪಘಾತಗಳ ದಾಖಲೆಯನ್ನು ಹೊಂದಿರಲಿಲ್ಲ ಎಂದು ತಿಳಿದು ಬಂದಿದೆ.ಇದನ್ನೂ ಓದಿ: ಶ್ರಾವಣ ಕೊನೆ ಶನಿವಾರ – ಅಂಜನಾದ್ರಿಗೆ ಹರಿದು ಬಂದ ಭಕ್ತ ಸಾಗರ