ಪುನೀತ್ ರಾಜಕುಮಾರ್ (Puneeth Rajkumar) ಅವರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ (Anushree) ಅವರು ತಾವು ಮದುವೆಯಾಗುತ್ತಿರುವ ಮಂಟಪದಲ್ಲಿ ಅಪ್ಪು ಫೋಟೋವನ್ನು ರಾರಾಜಿಸುವಂತೆ ಮಾಡಿದ್ದಾರೆ.
ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ನಿರೂಪಣೆಯಿಂದ ಹೆಚ್ಚು ಜನಪ್ರಿಯತೆ ಗಳಿಸಿದ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ ಹಸೆಮಣೆ ಏರಿದ್ದು, 10:56ರ ಶುಭ ಮೂಹೂರ್ತದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಇದನ್ನೂ ಓದಿ: ದಾವಣಗೆರೆ | ಶಿಕ್ಷಕನ ಬ್ಯಾಂಕ್ ಖಾತೆಯಿಂದ 22 ಲಕ್ಷ ಎಗರಿಸಿದ್ದ ಆರೋಪಿ ಅರೆಸ್ಟ್
ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ ಮದುವೆ ಮಂಟಪದಲ್ಲಿ ಅಪ್ಪು ಫೋಟೋವೊಂದನ್ನು ಇರಿಸಿ, ಸುತ್ತಲೂ ಹೂವುಗಳಿಂದ ಅಲಂಕಾರ ಮಾಡಿದ್ದಾರೆ. ಈ ಮೂಲಕ ಅಪ್ಪು ಮೇಲಿನ ಪ್ರೀತಿಯನ್ನು ತೋರ್ಪಡಿಸಿದ್ದಾರೆ. ಈ ಹಿಂದೆಯೂ ಅಪ್ಪು ಬಗ್ಗೆ ನಟಿ ಅನುಶ್ರೀ ಮಾತನಾಡಿದ್ದರು. ಅಪ್ಪು ಸರ್ ನನಗೆ ತುಂಬಾ ಹತ್ತಿರ. ಸಿನಿಮಾ ಇಷ್ಟ ಪಡಲು ಶುರುವಾಗಿದ್ದ ದಿನದಿಂದ ಅವರು ನನಗೆ ತುಂಬಾ ಹತ್ತಿರವಾಗಿದ್ದಾರೆ. ನಾನು ಇಷ್ಟ ಪಡುವ ಏಕೈಕ ನಟ ಅಂದ್ರೆ ಅಪ್ಪು ಸರ್. ಅವರನ್ನು ಭೇಟಿಯಾದ ಮೇಲೆ ಅವರ ಗುಣ, ವ್ಯಕ್ತಿತ್ವಕ್ಕೆ ನಾನು ಅಭಿಮಾನಿಯಾದೆ ಎಂದು ಹಲವು ಭಾರೀ ಭಾವುಕರಾಗಿದ್ದರು.
ಗುರುವಾರ ಬೆಂಗಳೂರಿನ ಕಗ್ಗಲಿಪುರ ಬಳಿಯ ಹೊರವಲಯದ ರೆಸಾರ್ಟ್‌ನಲ್ಲಿ ಮದುವೆ ನೆರವೇರಿದ್ದು, ನಟ ಶರಣ್, ಹಿರಿಯ ನಟಿ ಪ್ರೇಮ, ಡಾಲಿ ಧನಂಜಯ್, ಚೈತ್ರಾ ಆಚಾರ್, ನಾಗಭೂಷಣ, ಗಾಯಕ ವಿಜಯಪ್ರಕಾಶ್, ನಟ ವಿಜಯ ರಾಘವೇಂದ್ರ ಸೇರಿದಂತೆ ಕಿರುತೆರೆ ಕಲಾವಿದರು, ಚಿತ್ರೋದ್ಯಮದ ಗಣ್ಯರು ನವಜೋಡಿಗೆ ಶುಭ ಹಾರೈಸಿದ್ದಾರೆ.ಇದನ್ನೂ ಓದಿ: ಅಮೆರಿಕದ ಚರ್ಚ್ ಮೇಲೆ ಶೂಟೌಟ್ – ಗನ್‌ನಲ್ಲಿ ಬರೆದಿತ್ತು Nuke India