Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕ ಕಟ್ಟಿದ ಹಿರಿಮೆ ಅರಸು ಸಮುದಾಯದ್ದು: ಡಿಕೆಶಿ ಶ್ಲಾಘನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕ ಕಟ್ಟಿದ ಹಿರಿಮೆ ಅರಸು ಸಮುದಾಯದ್ದು: ಡಿಕೆಶಿ ಶ್ಲಾಘನೆ

Bengaluru City

ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕ ಕಟ್ಟಿದ ಹಿರಿಮೆ ಅರಸು ಸಮುದಾಯದ್ದು: ಡಿಕೆಶಿ ಶ್ಲಾಘನೆ

Public TV
Last updated: August 31, 2025 4:37 pm
Public TV
Share
3 Min Read
DK Shivakumar 13
SHARE

– ಅರಸು ಸಮುದಾಯಕ್ಕೆ ಮೀಸಲಾತಿ ಕುರಿತು ಸರ್ಕಾರದ ಮಟ್ಟದಲ್ಲಿ ಸಮಾಲೋಚನೆ
– ಜನೋಪಕಾರಿ ಕೆಲಸಗಳಿಗೆ ಅಡಿಪಾಯ ಹಾಕಿಕೊಟ್ಟವರು ಮೈಸೂರು ಅರಸರು; ಡಿಸಿಎಂ

ಬೆಂಗಳೂರು: ಮನುಷ್ಯ ಧರ್ಮವನ್ನು ಮೂಲವಾಗಿಟ್ಟುಕೊಂಡು ಮೈಸೂರು ಅರಸರು (Mysuru Arasaru)  ಹಾಗೂ ಅವರ ವಂಶಸ್ಥರು ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕವನ್ನು ಕಟ್ಟಿದ ಇತಿಹಾಸ ಅರಸು ಸಮುದಾಯಕ್ಕಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರು ಬಣ್ಣಿಸಿದರು.

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಎಲ್ಲಾ ವರ್ಗಕ್ಕೂ ಸೇರಿದವರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಅರಸು ಅಸೋಸಿಯೇಷನ್ (ರಿ) ಅವರು ಹಮ್ಮಿಕೊಂಡಿದ್ದ ದೇವರಾಜು ಅರಸು ಭವನದ ಸುವರ್ಣ ಮಹೋತ್ಸವ – 2025 ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಸೋಸಿಯೇಷನ್ ಸದಸ್ಯರಿಗೆ ಶುಭಹಾರೈಸಿದೆ.

ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಆಡಳಿತ ವೈಖರಿ… pic.twitter.com/NsqOer9gXj

— DK Shivakumar (@DKShivakumar) August 31, 2025

ನಗರದ ಅರಮನೆ ಮೈದಾನದಲ್ಲಿ (Palace Grounds) ಭಾನುವಾರ ನಡೆದ ಅರಸು ಅಸೋಸಿಯೇಷನ್‌ನ ಸುವರ್ಣ ಮಹೋತ್ಸವದಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಅರಸು ಸಮುದಾಯವು ಗಾತ್ರದಲ್ಲಿ ಚಿಕ್ಕದಿರಬಹುದು. ಆದರೆ ಈ ರಾಜ್ಯಕ್ಕೆ ಅವರು ನೀಡಿರುವ ಕೊಡುಗೆ ಬಹು ದೊಡ್ಡದು. ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪರಾಜಮ್ಮಣ್ಣಿ, ಜಯಚಾಮರಾಜೇಂದ್ರ ಒಡೆಯರ್ ಅವರು ಹೀಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕನ್ನಂಬಾಡಿ ಕಟ್ಟೆ, ವಾಣಿವಿಲಾಸ ಸಾಗರ ಅಣೆಕಟ್ಟು, ಜೆ.ಸಿ ಎಂಜಿನಿಯರ್ ಕಾಲೇಜು, ವಿಕ್ಟೋರಿಯಾ ಆಸ್ಪತ್ರೆ ಹೀಗೆ ಹಲವಾರು ಜನೋಪಕಾರಿ ಕೆಲಸಗಳಿಗೆ ಅಡಿಪಾಯ ಹಾಕಿಕೊಟ್ಟವರು ಮೈಸೂರು ಅರಸರು. ವಿದ್ಯುತ್ ಉತ್ಪಾದನೆ ಸೇರಿದಂತೆ ರಾಜ್ಯದ ಪ್ರಮುಖ ಸಂಸ್ಥೆಗಳ ಸ್ಥಾಪನೆಗೆ ಅಡಿಪಾಯ ಹಾಕಿಕೊಟ್ಟವರು ಮೈಸೂರಿನ ಒಡೆಯರು. ಅವರು ನೆಟ್ಟಿರುವ ಮರದ ಫಲವನ್ನು ನಾವೆಲ್ಲರೂ ತಿನ್ನುತ್ತಿದ್ದೇವೆ ಎಂದು ಕೊಂಡಾಡಿದರು.

DK Shivakumar 2 3

ಮೀಸಲಾತಿ, ನಿವೇಶನ ನೀಡುವ ಬಗ್ಗೆ ಚರ್ಚೆ
ಅರಸು ಸಮುದಾಯಕ್ಕೆ ಮೀಸಲಾತಿ ಸೇರಿದಂತೆ ಇತರೇ ಅನುಕೂಲಗಳನ್ನು ಕಲ್ಪಿಸಿಕೊಡಬೇಕು ಎಂದು ಮುಖಂಡರು ಮನವಿ ಸಲ್ಲಿಸಿದ್ದಾರೆ. ಇದರ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು. ಸಂಘಕ್ಕೆ ನಿವೇಶನ ಬೇಕು ಎಂದು ಮನವಿ ಸಲ್ಲಿಸಿದ್ದೀರಿ. ನಾನು ಬೆಂಗಳೂರು ಅಭಿವೃದ್ಧಿಯ ಜವಾಬ್ದಾರಿ ಹೊತ್ತಿದ್ದೇನೆ‌. ಆದ ಕಾರಣ ಸಂಘದ ಪ್ರಮುಖರು ಹಾಗೂ ರಾಜ ವಂಶಸ್ಥರ ಜೊತೆಯಲ್ಲಿ ಚರ್ಚೆ ಮಾಡಿ ನಿಮ್ಮ ಬೇಡಿಕೆ ಈಡೇರಿಸುವ ಬಗ್ಗೆ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮೈಸೂರು ಮಹಾರಾಜರು ಯಾವ ಧರ್ಮದಲ್ಲಿ ನಡೆಯಬೇಕು, ಯಾವ ಧರ್ಮವನ್ನ ಉಳಿಸಿಕೊಳ್ಳಬೇಕು ಎಂದು ಯಾವತ್ತೂ ಮಾತನಾಡಲಿಲ್ಲ. ಏಕೆಂದರೆ ಧರ್ಮ ಯಾವುದಾದರೂ ಇರಲಿ, ತತ್ವ, ನಾಮ ನೂರಾರೂ ಇದ್ದರೂ ದೈವವೊಂದೇ. ಪೂಜೆ ಹಲವಾದರೂ ಭಕ್ತಿಯೊಂದೇ, ದೇವನೊಬ್ಬ ನಾಮ ಹಲವು ಎಂದರು.

ಅರಸು ಸಮುದಾಯಕ್ಕೆ ನಾವೆಲ್ಲ ಋಣಿಗಳಾಗಿರಬೇಕು
ನಾವುಗಳು ಹುಟ್ಟುವಾಗ ಇದೇ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡು ಹುಟ್ಟಲಿಲ್ಲ. ಅರಸು ಸಮುದಾಯಕ್ಕೆ ನಾವೆಲ್ಲರೂ ಋಣಿಗಳಾಗಿರಬೇಕು. ಕರ್ನಾಟಕ ಸರ್ಕಾರದ ಪರವಾಗಿ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಾನು ನನ್ನ ಕ್ಷೇತ್ರದಲ್ಲಿ ಹಲವಾರು ಅರಸು ಕುಟುಂಬದವರನ್ನು ಹತ್ತಿರದಿಂದ ನೋಡಿದ್ದೇನೆ. ಬಹಳ ಸ್ವಾಭಿಮಾನದಿಂದ ಬದುಕು ನಡೆಸುತ್ತಿರುವ ಸಮುದಾಯ.‌ ನೀವು ಸರ್ಕಾರದ ಜೊತೆ ನಿಂತು, ಬೆಂಬಲವಾಗಿರಬೇಕು ಎಂದು ಮನವಿ ಮಾಡಿದರು.

ದೇವರಾಜ ಅರಸು ಅವರು ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿಗೆ ತಂದು ಲಕ್ಷಾಂತರ ಭೂ ರಹಿತ ಬಡವರ ಪರವಾಗಿ ನಿಂತರು. ಈ ತೀರ್ಮಾನ ಇತಿಹಾಸದಲ್ಲಿ ಶಾಶ್ವತವಾಗಿ ಉಳಿದುಕೊಂಡಿದೆ. ಒಬ್ಬ ಮನುಷ್ಯ ಯಾವಾಗ ಸಾಹುಕಾರನಾಗುತ್ತಾನೆ, ಯಾವಾಗ ಬಡವನಾಗುತ್ತಾನೆ ಎಂಬುದು ತಿಳಿಯಿವುದಿಲ್ಲ. ಅದಲು-ಬದಲು ಪ್ರಕ್ರಿಯೆ ಅನಿರೀಕ್ಷಿತ ಎಂದರು.

ಸರಳತೆಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ
ದೇವರಾಜ ಅರಸು ಅವರಿಗೆ ಜಾತಿ ಇರಲಿಲ್ಲ. ಆದ್ರೆ ನಾಯಕತ್ವದ ಗುಣವಿತ್ತು. ಆ ಗುಣ ಅವರನ್ನು ದೊಡ್ಡ ಮಟ್ಟಕ್ಕೆ ಬೆಳೆಸಿತು. ಹಿಂದುಳಿದ ಹಾಗೂ ಮೇಲ್ವರ್ಗದ ಎಲ್ಲ ರಾಜಕಾರಣಿಗಳನ್ನು ಬೆಳೆಸಿ ಭದ್ರ ಅಡಿಪಾಯ ಕೊಟ್ಟವರು ದೇವರಾಜ ಅರಸು. ಹಣ, ಐಶ್ವರ್ಯ ಎಷ್ಟೇ ಇದ್ದರೂ ಸರಳತೆಯನ್ನು ಕಾಪಾಡಿಕೊಂಡವರು ಅರಸು ಸಮುದಾಯದವರು. ಸಂಪತ್ತಿಗೆ ಬೆಲೆಕಟ್ಟಬಹುದು. ಆದರೆ ಸರಳತೆಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಇನ್ನೊಬ್ಬರಿಗೆ ಅನ್ಯಾಯವಾಗದ ರೀತಿಯಲ್ಲಿ ನಾವು ಬದುಕಬೇಕು. ಅದೇ ನಿಜವಾದ ಸರಳ ಧರ್ಮ ಎಂದರು.

ಈ ಸಮುದಾಯದ ಎಲ್ಲಾ ವಯೋಮಾನದವರ ಬಳಿ ನಾನು ಪ್ರಾರ್ಥಿಸಿಕೊಳ್ಳುವುದು ಏನೆಂದರೆ ನಿಮ್ಮಲ್ಲಿನ ಆತ್ಮಸ್ಥೈರ್ಯದ ರಕ್ತ ಕುಂದಬಾರದು. ಮಹಾರಾಜರು ಸೇರಿದಂತೆ ದೇವರಾಜ ಅರಸು ಅವರು ತಮಗೆ ತೊಂದರೆಯಾದರೂ ಸಮಾಜದ ಪರವಾಗಿ ನಿಂತವರು. ನನ್ನ ಗುರುಗಳಾದ ಅಜ್ಜಯ್ಯ ಅವರು ಮಾನವ ಧರ್ಮಕ್ಕೆ ಜಯವಾಗಲಿ, ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎನ್ನುವ ಮಾತನ್ನು ಹೇಳಿದ್ದಾರೆ. ಈ ಮಾತಿನಂತೆಯೇ ನಾವೆಲ್ಲರೂ ನಡೆಯಬೇಕು ಎಂದರು.

TAGGED:Arasu CommunityDK Shivakumarmysurureservationಅರಸು ಸಮುದಾಯಡಿಕೆ ಶಿವಕುಮಾರ್ಮೀಸಲಾತಿಮೈಸೂರು ಅರಸರು
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

Ramanagar Monkey
Districts

ವೃದ್ಧೆ ಸಾವಿಗೆ ಮರುಗಿದ ಮಂಗ – ಮೃತದೇಹದ ಮೇಲೆ ಮಲಗಿ ಮೂಕರೋಧನೆ

Public TV
By Public TV
16 minutes ago
Accident on bengaluru mysuru expressway car overturns on side road
Districts

ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ – ಪಕ್ಕದ ರಸ್ತೆಗೆ ಉರುಳಿಬಿದ್ದ ಕಾರು

Public TV
By Public TV
46 minutes ago
income tax returns
Latest

ಆದಾಯ ತೆರಿಗೆ ಪದ್ದತಿಯಲ್ಲಿ ಏನು ಬದಲಾವಣೆ? ಇಲ್ಲಿದೆ ಪೂರ್ಣ ವಿವರ

Public TV
By Public TV
1 hour ago
gajendra elephant
Bengaluru City

ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

Public TV
By Public TV
1 hour ago
AI Image
Bagalkot

ಹೆಚ್ಚಾದ ಬಿಸಿಲು – ಉ.ಕರ್ನಾಟಕದ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

Public TV
By Public TV
1 hour ago
g.parameshwara 2
Bengaluru City

ಗೃಹಸಚಿವ ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ – ಸುಮೋಟೋ ಕೇಸ್ ದಾಖಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?