ಶಿವಮೊಗ್ಗ: ಭದ್ರಾವತಿಯ (Bhadravathi) ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು (Bengaluru) ಮೂಲದ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕೆಂಗೇರಿ ನಿವಾಸಿ ಮಂಜುಳಾ.ಆರ್ (21) ಮತ್ತು ಸುಜೈನ್ ಖಾನ್ (24) ಎಂದು ಗುರುತಿಸಲಾಗಿದೆ. ಆ.18 ರಂದು ಪೇಪರ್ ಟೌನ್ 5ನೇ ವಾರ್ಡ್‌ನಲ್ಲಿನ ನಿವಾಸಿ ಚಂದ್ರಮ್ಮ ಎಂಬವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಮನೆಯ ಬೀರುವಿನಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಲಾಗಿತ್ತು. ಪ್ರಕರಣದ ಸಂಬಂಧ ಭದ್ರಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಸಾಗರ | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್ ಸ್ಫೋಟ – ಯುವಕನಿಗೆ ಗಂಭೀರ ಗಾಯ
ಪೊಲೀಸರು ಆರೋಪಿಗಳ ಪತ್ತೆಗೆ ಕ್ರಮಕೈಗೊಂಡಿದ್ದರು. ಅದರಂತೆ ಆ.30ರಂದು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಹೆಚ್ಚಿನ ವಿಚಾರಣೆ ನಡೆಯುತ್ತಿದೆ.
ಬಂಧಿತರಿಂದ 7.82 ಲಕ್ಷ ರೂ. ಮೌಲ್ಯದ 83 ಗ್ರಾಂ ತೂಕದ ಮಾಂಗಲ್ಯ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ | ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ