ಬಳ್ಳಾರಿ: ದಿಢೀರ್ ಬೆಲೆ ಕುಸಿತದಿಂದಾಗಿ ಈರುಳ್ಳಿ (Onion) ಬೆಳೆದ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಉತ್ತಂಗಿ ಗ್ರಾಮದ ಅನ್ನದಾತರು (Farmers) ಕಣ್ಣೀರು ಹಾಕಿದ್ದಾರೆ.
ಮಾರುಕಟ್ಟೆಯಲ್ಲಿ ತಿಂಗಳ ಹಿಂದೆ ಕ್ವಿಂಟಾಲ್‌ಗೆ 2500-3000 ಸಾವಿರ ರೂ. ಇದ್ದ ದರ ಈಗ ಏಕಾಏಕಿ 1,500 ರೂ.ಗೆ ಕುಸಿದಿದೆ. ಬಳ್ಳಾರಿ (Ballari) ಹಾಗೂ ವಿಜಯನಗರ (Vijayangara) ಜಿಲ್ಲೆಯಲ್ಲಿ 35,000 ಹೆಕ್ಟೇರ್ ಪ್ರದೇಶದಲ್ಲಿ ರೈತರು ಈರುಳ್ಳಿ ಬೆಳೆದಿದ್ದಾರೆ. ದರ ಇಲ್ಲದ ಕಾರಣ ಹೊಲದಲ್ಲಿಯೇ ಈರುಳ್ಳಿ ಬೆಳೆ ಬಿಟ್ಟಿದ್ದಾರೆ. ಇದನ್ನೂ ಓದಿ: ಯಾವ ಕ್ಷಣದಲ್ಲಾದ್ರೂ ಸೂಪಾ ಡ್ಯಾಮ್‌ನಿಂದ ನೀರು ಬಿಡುಗಡೆ – ಪ್ರವಾಹದ ಬಗ್ಗೆ ಕೆಪಿಟಿಸಿಎಲ್‌ನಿಂದ ಅಂತಿಮ ಎಚ್ಚರಿಕೆ
ಕಟಾವು ಮಾಡಿ ಮಾರುಕಟ್ಟೆಗೆ ಸಾಗಾಟ ಮಾಡಿದರೆ ನಷ್ಟ ಅನುಭವಿಸುವ ಭೀತಿಯಲ್ಲಿ ರೈತರಿದ್ದಾರೆ. ಸದ್ಯ ಇರುವ ಬೆಲೆಗೆ ಈರುಳ್ಳಿ ಮಾರಾಟ ಮಾಡಿದರೆ ಖರ್ಚು ಮಾಡಿದಷ್ಟೂ ಹಣ ಬರುವುದಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.
ಸೂಕ್ತ ಬೆಲೆ ನಿಗದಿ ಮಾಡಿ ಕೇಂದ್ರ- ರಾಜ್ಯ ಸರ್ಕಾರಗಳು ಈರುಳ್ಳಿ ಬೆಳೆಗಾರ ರೈತರ ಸಂಕಷ್ಟಕ್ಕೆ ನೆರವಾಗಬೇಕು ಎಂದು ರೈತರು ಒತ್ತಾಯಿಸಿದ್ದಾರೆ.