– ಸತತ 5 ಗಂಟೆಗಳಿಂದ ನಿಂತಲ್ಲೇ ನಿಂತ ವಾಹನಗಳು
ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಸಕಲೇಶಪುರ ತಾಲ್ಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ನಿರಂತರ ಮಳೆ (Rain) ಸುರಿಯುತ್ತಿರುವ ಹಿನ್ನೆಲೆ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ (Bisle Ghat Highway) ಭೂಕುಸಿತ ಉಂಟಾಗಿದೆ.
ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದೆ (Landslide). ರಸ್ತೆಗೆ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ನಿರಂತರ ಮಳೆಗೆ ಬೆಳೆಹಾನಿ – ಜಮೀನುಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ
ಮುಂಜಾನೆ 3 ಗಂಟೆಯಿಂದ ಬಿಸಿಲೆ – ಕುಕ್ಕೆ ಸುಬ್ರಹ್ಮಣ್ಯ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಆಗಿದ್ದು, ಸತತ ಐದು ಗಂಟೆಗಳಿಂದ ವಾಹನಗಳು ನಿಂತಲ್ಲೇ ನಿಂತಿವೆ. ಕಂದಾಯ ಇಲಾಖೆ ಸಿಬ್ಬಂದಿ ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅವಘಡ ಸಂಭವಿಸಿದೆ. ಇದನ್ನೂ ಓದಿ: ಅಕ್ರಮ ಗಣಿಗಾರಿಕೆಯಲ್ಲಿ ಶಾಮೀಲು ಆರೋಪ – ಕಂದಾಯ ನಿರೀಕ್ಷಕ, ಗ್ರಾಮಾಡಳಿತ ಅಧಿಕಾರಿ ಸಸ್ಪೆಂಡ್