ಬೆಂಗಳೂರು: ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ (Online Betting Case) ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ಶಾಸಕ ಕೆಸಿ ವಿರೇಂದ್ರ ಪಪ್ಪಿಗೆ (KC Veerendra Puppy) ಜೈಲಾ, ಬೇಲಾ ಅನ್ನೋದು ಇಂದು ನಿರ್ಧಾರವಾಗಲಿದೆ.
ಮೊದಲ ಬಾರಿಗೆ 5 ದಿನ 2ನೇ ಬಾರಿಗೆ 6 ದಿನ ಇಡಿ ಕಸ್ಟಡಿಗೆ ಪಡೆದಿತ್ತು. ಇಂದು ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆ ಮತ್ತೆ ಕೋರ್ಟ್‌ಗೆ ಹಾಜರುಪಡಿಸಲಿದೆ. ಒಂದು ವೇಳೆ ಇಡಿ ಕಸ್ಟಡಿಗೆ ಪಡೆಯದಿದ್ದರೆ ಜೈಲಿಗೆ ತೆರಳುವ ಸಾಧ್ಯತೆ ಇದೆ. ಇದನ್ನೂ ಓದಿ: ‘ಕೈ’ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇ.ಡಿ ದಾಳಿ – ಆರು ಐಷಾರಾಮಿ ಕಾರುಗಳು ವಶಕ್ಕೆ
55 ಕೋಟಿ ರೂ. ನಗದು ಫ್ರೀಜ್:
ಈಗಾಗಲೇ ಪಪ್ಪಿ ಬ್ಯಾಂಕ್ ಖಾತೆಯಿಂದ 55 ಕೋಟಿ ನಗದು ಫ್ರೀಜ್ ಮಾಡಿರುವುದಾಗಿ ಇಡಿ ಪ್ರಕಟಣೆ ಹೊರಡಿಸಿತ್ತು. ಅಲ್ಲದೇ ಕೆ.ಸಿ ವೀರೇಂದ್ರ ಅವರ 9 ಬ್ಯಾಂಕ್ ಖಾತೆಗಳಲ್ಲಿ ಅಂದಾಜು 40.69 ಕೋಟಿ ನಗದು ರೂ. ಪತ್ತೆಯಾಗಿದ್ದು, 262 ಮ್ಯೂಲ್ ಖಾತೆಗಳಲ್ಲಿ ಒಟ್ಟು 14.46 ಕೋಟಿ ರೂ. (ಅಂದಾಜು) ಸೇರಿದಂತೆ 55 ಕೋಟಿ ರೂ. ಹಣವನ್ನು ಇಡಿ ಅಧಿಕಾರಿಗಳು ಫ್ರೀಜ್ ಮಾಡಿದ್ದಾರೆ.
ಜೊತೆಗೆ 5 ಐಷಾರಾಮಿ ಕಾರುಗಳನ್ನೂ ಸೀಜ್ ಮಾಡಲಾಗಿದೆ. ಹೀಗಾಗಿ ಹಣದ ಮೂಲ ಪತ್ತೆಗಾಗಿ ಮತ್ತೆ ಕಸ್ಟಡಿಗೆ ಕೇಳಲು ಇಡಿ ಪ್ಲ್ಯಾನ್ ಮಾಡಿಕೊಂಡಿದೆ. ಒಂದು ವೇಳೆ ಕಸ್ಟಡಿಗೆ ಕೇಳದಿದ್ರೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಕಳಿಸಲಿದೆ. ಇದನ್ನೂ ಓದಿ: ಕೊಲೆ, ಸುಲಿಗೆ ಸೇರಿ 18 ಪ್ರಕರಣದಲ್ಲಿ ಬೇಕಾಗಿದ್ದ ಬಿಹಾರದ ಶಂಕಿತ ನಕ್ಸಲ್ ರಾಯಚೂರಲ್ಲಿ ಅರೆಸ್ಟ್
ಏನಿದು ಪ್ರಕರಣ?
ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ, ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪ ಪಪ್ಪಿ ವಿರುದ್ಧ ಕೇಳಿಬಂದಿತ್ತು. ಈ ಕುರಿತು ಗೋವಾದಲ್ಲಿ 2 ಪ್ರಕರಣ ದಾಖಲಾಗಿತ್ತು. ಇದನ್ನಾಧರಿಸಿ ಇಡಿ ದಾಳಿ (ED Raid) ನಡೆಸಿತ್ತು. ಇದನ್ನೂ ಓದಿ: ED ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನ ಪತ್ತೆ – ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅರೆಸ್ಟ್