ಮಣಿಪುರ: ಕಳೆದ ಎರಡು ವರ್ಷಗಳಿಂದ ಹಿಂಸಾಚಾರಪೀಡಿತವಾಗಿದ್ದ ಮಣಿಪುರ ಇದೀಗ ಸಹಜ ಸ್ಥಿತಿಗೆ ಮರಳುತ್ತಿದೆ. 2 ವರ್ಷಗಳಿಂದ ಮೈತೇಯಿ ಜನರಿಗೆ ನಿರ್ಬಂಧಿಸಲಾದ ಹೆದ್ದಾರಿಗಳನ್ನ ತೆರೆಯುವಂತೆ ಮತ್ತೊಂದು ಕುಕಿ ಬುಡಕಟ್ಟು ಸಮುದಾಯದ ಮನವೊಲಿಸುವಲ್ಲಿ ಕೇಂದ್ರ ಸರ್ಕಾರ ಮನವೊಲಿಸುವಲ್ಲಿ ಯಶಸ್ವಿಯಾಗಿದೆ.
ಮಾತುಕತೆ ಸಫಲವಾದ ಬಳಿಕ ಕುಕಿ ಸಮುದಾಯದ ಗುಂಪು ರಾಷ್ಟ್ರೀಯ ಹೆದ್ದಾರಿ-2 ಅನ್ನು ತೆರೆಯಲು ಒಪ್ಪಿಕೊಂಡಿದೆ. ದೆಹಲಿಯಲ್ಲಿ ಗೃಹ ಸಚಿವಾಲಯ ಮತ್ತು ಕುಕಿ-ಝೋ ಕೌನ್ಸಿಲ್ (KZC) ಗುಂಪಿನ ನಡುವೆ ನಡೆದ ಹಲವಾರು ಸುತ್ತಿನ ಸಭೆಯ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: Manipur | ಬಿರೇನ್ ಸಿಂಗ್ ರಾಜೀನಾಮೆ ಬೆನ್ನಲ್ಲೇ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ
ಹೌದು. ಕೇಂದ್ರ ಗೃಹ ಸಚಿವಾಲಯ, ಮಣಿಪುರ ಸರ್ಕಾರ ಮತ್ತು ಕುಕಿ-ಝೋ ಗುಂಪುಗಳು ಗುರುವಾರ ಹೊಸ ಒಪ್ಪಂದಕ್ಕೆ (Suspension of Operations (SoO) ಸಹಿ ಹಾಕಿವೆ. ರಾಜ್ಯದ ಪ್ರಾದೇಶಿಕ ಸಮಗ್ರತೆ ಕಾಪಾಡಿಕೊಳ್ಳುವ ಉದ್ದೇಶವನ್ನು ಈ ಒಪ್ಪಂದ ಪುನರುಚ್ಚರಿಸಿದೆ. ಅಲ್ಲದೇ 2023ರ ಮೇ 3ರಂದು ಜನಾಂಗೀಯ ಸಂಘರ್ಷ ಶಮನಗೊಳಿಸುವ ಮಹತ್ವದ ಹೆಜ್ಜೆಯೂ ಇದಾಗಿದೆ. ಇದನ್ನೂ ಓದಿ: ಜಾರ್ಖಂಡ್‌ನಲ್ಲಿ ಎನ್‌ಕೌಂಟರ್ – ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮ, ಓರ್ವ ಸಿಬ್ಬಂದಿಗೆ ಗಾಯ
ಮುಂದಿನ ವಾರ ಮೋದಿ ಭೇಟಿ ಸಾಧ್ಯತೆ
ಇದೇ ಸೆಪ್ಟೆಂಬರ್ 2ನೇ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಮೈತೇಯಿ – ಕುಕಿ ಸಮುದಾಯಗಳ ನಡುವಿನ ಹಿಂಸಾಚಾರದ ಬಳಿಕ ಇದು ಪ್ರಧಾನಿಯವರ ಮೊದಲ ಭೇಟಿಯಾಗಲಿದೆ. ಇದನ್ನೂ ಓದಿ: ದಸರಾ ಬಳಿಕ ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ನಿಗದಿ – ಚುನಾವಣಾ ಆಯೋಗದ ಮೂಲಗಳ ಹೇಳಿಕೆ
ಮಾತುಕತೆ ಸಫಲ:
ಇಂದು ದೆಹಲಿಯಲ್ಲಿ ನಡೆದ ಸುದೀರ್ಘ ಮಾತುಕತೆಯ ಬಳಿಕ ಕೇಂದ್ರ ಸರ್ಕಾರ, ಕುಕಿ ಗುಂಪು ಹಾಗೂ ಮಣಿಪುರ ಸರ್ಕಾರ ಹೊಸ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಇದರ ಅಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ-2 ಅನ್ನು ಮತ್ತೆ ತೆರೆಲಾಗುತ್ತದೆ. ಇದರಿಂದ ಅಗತ್ಯವಸ್ತುಗಳ ಸಾಗಾಟ ಜೊತೆಗೆ ಪ್ರಯಾಣಿಕರ ಸಂಚಾರಕ್ಕೂ ಅನುಕೂಲವಾಗಲಿದೆ. ಅಲ್ಲದೇ ಕುಕಿ-ಝೋ ಕೌನ್ಸಿಲ್ (KZC) ಈ ಮಾರ್ಗದಲ್ಲಿ ಶಾಂತಿ ಕಾಪಾಡಿಕೊಳ್ಳಲು ಭದ್ರತಾ ಪಡೆಗಳೊಂದಿಗೆ ಒಟ್ಟಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದೆ.
ಹಿಂಸಾಚಾರ ಭುಗಿಲೆದ್ದಿದ್ದು ಹೇಗೆ?
ಮೀಟೈ ಸಮುದಾಯ ಎಸ್‍ಟಿ ಸ್ಥಾನಮಾನದ ಬೇಡಿಕೆಯ ಕುರಿತು 4 ವಾರಗಳಲ್ಲಿ ಕೇಂದ್ರಕ್ಕೆ ಶಿಫಾರಸನ್ನು ಕಳುಹಿಸುವಂತೆ ಮಣಿಪುರ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ನಂತರ ನಾಗಾಗಳು ಮತ್ತು ಕುಕಿಗಳು ಸೇರಿದಂತೆ ಬುಡಕಟ್ಟು ಜನಾಂಗದವರು ಮೆರವಣಿಗೆಯನ್ನು ಆಯೋಜಿಸಿದ್ದರು. ಆಲ್ ಟ್ರೈಬಲ್ ಸ್ಟೂಡೆಂಟ್ ಯೂನಿಯನ್ ಮಣಿಪುರ ಚುರಾಚಂದ್‍ಪುರ ಜಿಲ್ಲೆಯ ಟೋಬರ್ಂಗ್ ಪ್ರದೇಶದಲ್ಲಿ ಬುಡಕಟ್ಟು ಐಕ್ಯತಾ ಮೆರವಣಿಗೆಗೆ ಕರೆ ನೀಡಿತ್ತು. ಈ ರ‍್ಯಾಲಿಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ಆದರೆ ಈ ಸಂದರ್ಭದಲ್ಲಿ ಆದಿವಾಸಿಗಳು ಮತ್ತು ಬುಡಕಟ್ಟು ಜನಾಂಗದವರ ನಡುವೆ ಹಿಂಸಾಚಾರ ಆರಂಭವಾಗಿತ್ತು. ಈವರೆಗೆ ಸಂಘರ್ಷದಲ್ಲಿ ಸುಮಾರು 260 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ.
ಬಳಿಕ ಮೈತೇಯಿ ಹಾಗೂ ಕುಕಿ ಸಮುದಾಯದ ನಡುವೆ ಹಿಂಸಾಚಾರ ನಡೆಯುತ್ತಲೇ ಇತ್ತು. ಅಲ್ಲದೇ ಕೆಲ ಶಸ್ತ್ರಸಜ್ಜಿತ ಗುಂಪುಗಳು ಸಶಸ್ತ್ರಪಡೆಗಳೊಂದಿಗೆ ಗುಂಡಿನ ಚಕಮಕಿ ನಡೆಸುತ್ತಲೇ ಇದ್ದರು. ಈ ಸಂರ್ಭದಲ್ಲಿ ಅಮಾಯಕರೂ ಸಾವನ್ನಪ್ಪಿದ್ದರು. ಕೊನೆಗೆ ಸಂಘರ್ಷ ನಿಯಂತ್ರಿಸಲಾಗದೇ ಕಳೆದ ವರ್ಷ ಬಿರೇನ್ ಸಿಂಗ್ ಮಣಿಪುರ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದೆ. ಇದನ್ನೂ ಓದಿ: Manipur Violence: ಧಗ ಧಗನೆ ಹೊತ್ತಿ ಉರಿಯುತ್ತಿದ್ದ ಮಣಿಪುರ ಸಹಜ ಸ್ಥಿತಿಗೆ – ಮೂರೇ ದಿನದಲ್ಲಿ 54 ಮಂದಿ ಸಾವು
ಸದ್ಯ ಇದೀಗ ಹೊಸ ಒಪ್ಪಂದದ ಬಳಿಕ ಮಣಿಪುರದಲ್ಲಿ ಶಾಂತಿ ನೆಲೆಸುವ ವಿಶ್ವಾಸವಿದೆ. ಇದನ್ನೂ ಓದಿ: ಮಣಿಪುರ ಹಿಂಸಾಚಾರ ತನಿಖೆಗೆ 53 ಸಿಬಿಐ ಅಧಿಕಾರಿಗಳ ನಿಯೋಜನೆ