Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಂದವರು ಯಾರು? – ಧರ್ಮಸ್ಥಳ ಪ್ರಕರಣದ ಬಗ್ಗೆ ಮಹಿಳಾ ಸಂಘಟನೆಗಳಿಂದ ಸೋನಿಯಾ ಗಾಂಧಿಗೆ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೊಂದವರು ಯಾರು? – ಧರ್ಮಸ್ಥಳ ಪ್ರಕರಣದ ಬಗ್ಗೆ ಮಹಿಳಾ ಸಂಘಟನೆಗಳಿಂದ ಸೋನಿಯಾ ಗಾಂಧಿಗೆ ಪತ್ರ

Bengaluru City

ಕೊಂದವರು ಯಾರು? – ಧರ್ಮಸ್ಥಳ ಪ್ರಕರಣದ ಬಗ್ಗೆ ಮಹಿಳಾ ಸಂಘಟನೆಗಳಿಂದ ಸೋನಿಯಾ ಗಾಂಧಿಗೆ ಪತ್ರ

Public TV
Last updated: September 5, 2025 12:56 pm
Public TV
Share
3 Min Read
Sonia Gandhi
SHARE

– 2018ರ ಉಗ್ರಪ್ಪ ಸಮಿತಿ ವರದಿಯನ್ನ SIT ಪರಿಗಣಿಸಬೇಕು
– ಕಾಂಗ್ರೆಸ್ ನಾಯಕರು SIT ತನಿಖೆಯ ವಿರುದ್ಧ ಹೇಳಿಕೆ ಕೊಡಬಾರದು
– ಸೌಜನ್ಯ ಪ್ರಕರಣದ ತನಿಖಾಧಿಕಾರಿಗಳನ್ನ ತನಿಖೆಗೆ ಒಳಪಡಿಸಬೇಕು ಅಂತ ಒತ್ತಾಯ

ಬೆಂಗಳೂರು/ನವದೆಹಲಿ: ಧರ್ಮಸ್ಥಳ (Dharmasthala) ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಕುರಿತು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರಿಗೆ ಮಹಿಳಾ ಸಂಘಟನೆಗಳು (Women Unions) ಪತ್ರ ಬರೆದಿವೆ. ಸುಮಾರು 10 ಮಹಿಳಾ ಸಂಘಟನೆಗಳು ಹಾಗೂ 40 ಸಾಮಾಜಿಕ ಹೋರಾಟಗಾರ್ತಿಯರು ಪತ್ರ ಬರೆದಿದ್ದು, ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.

ʻಕೊಂದವರು ಯಾರು? Who Killed the Women in Dharmasthala?ʼ ಶೀರ್ಷಿಕೆಯಲ್ಲಿ ಪತ್ರ ಬರೆಯಲಾಗಿದ್ದು, ಎಸ್‌ಐಟಿ ತನಿಖೆಯ ಬೆಳವಣಿಗೆ ಬಗ್ಗೆ ತೀವ್ರ ಆತಂಕ ಹೊರಹಾಕಿವೆ ಮಹಿಳಾ ಸಂಘಟನೆಗಳು. ಅಲ್ಲದೇ ಚಿನ್ನಯ್ಯನ ಬಂಧನ, ಸುಜಾತ ಭಟ್ ಪ್ರಕರಣ, ತನಿಖೆ ಕುರಿತ ಮಾಧ್ಯಮ ವರದಿಗಳು ಹಾಗೂ ಡಿಸಿಎಂ ಡಿಕೆಶಿ ಬಗ್ಗೆಯೂ ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

ಈ ಪ್ರಕರಣದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ, ಪ್ರಕರಣದಲ್ಲಿ ಉರುಳಿಲ್ಲ ಎನ್ನುವಂತೆ ದಾರಿ ತಪ್ಪಿಸುವಂತಹ ಹೇಳಿಕೆಯನ್ನ ಡಿಸಿಎಂ ನೀಡಿದ್ದಾರೆ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಬೆಂಬಲ ವ್ಯಕ್ತಪಡಿಸಿದ್ದಾರೆ. ಗೃಹ ಸಚಿವ ಡಾ.ಜಿ ಪರಮೇಶ್ವರ್ (G Parameshwar) ವಿಪಕ್ಷಗಳ ಒತ್ತಡಕ್ಕೆ ಮಣಿದಿದ್ದಾರೆ ಎಂದಿರುವ ಹೋರಾಟಗಾರರು ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ ಮೂರು ಬೇಡಿಕೆಗಳನ್ನಿಟ್ಟಿದ್ದಾರೆ.

ಪ್ರಮುಖ ಮೂರು ಬೇಡಿಕೆಗಳೇನು?
* SIT ಯವರು 2018ರ ವಿ.ಎಸ್ ಉಗ್ರಪ್ಪ ಸಮಿತಿ ನೀಡಿದ ವರದಿ ಪರಿಗಣಿಸಬೇಕು.
* SIT ನ್ಯಾಯ ಸಮ್ಮತ ತನಿಖೆ ನಡೆಸಲು ಸರ್ಕಾರದ ಜನಪ್ರತಿನಿಧಿಗಳು ಸಹಕರಿಸಬೇಕು.
* ಸೌಜನ್ಯ ಪ್ರಕರಣದ ತನಿಖೆಯಲ್ಲಿ ಲೋಪ ಎಸಗಿದ ಅಧಿಕಾರಿಗಳನ್ನ ನ್ಯಾಯಲಯದ ಆದೇಶದಂತೆ ತನಿಖೆಗೆ ಒಳಪಡಿಸಬೇಕು.

ಪತ್ರದಲ್ಲಿ ಏನಿದೆ?
ಜುಲೈ 2025ರಲ್ಲಿ ಮಹಿಳಾ ಆಯೋಗದ ಅಧ್ಯಕ್ಷರು ಸಿಎಂಗೆ ಪತ್ರ ಬರೆದಿದ್ದರು. ಧರ್ಮಸ್ಥಳದಲ್ಲಿ ನಡೆದಿದ್ದ ಅಸಹಜ ಸಾವು, ಲೈಂಗಿಕ ದೌರ್ಜನ್ಯಗಳ ಬಗ್ಗೆ ಎಸ್‌ಐಟಿ ರಚಿಸಿ ಎಂದು ಪತ್ರ ಬರೆಯಲಾಗಿತ್ತು. ಮಾಧ್ಯಮಗಳಲ್ಲಿ ಮತ್ತು ಸ್ಥಳೀಯ ಸಾಮಾಜಿಕ ಹೋರಾಟಗಾರರು ಹೇಳುವಂತೆ ಸಾಕಷ್ಟು ದೌರ್ಜನ್ಯ ನಡೆದಿತ್ತು. 2012ರ ಸೌಜನ್ಯ ಕೇಸ್, 1986 ಪದ್ಮಲತಾ ಕೇಸ್, 1979ರ ವೇದವಲ್ಲಿ ಪ್ರಕರಣ ಇವುಗಳಲ್ಲಿ ಪ್ರಮುಖವಾದದ್ದು. ಆರ್‌ಟಿಐ ದಾಖಲೆ ಅನ್ವಯ 2001-2012ರ ನಡುವೆ ಉಜಿರೆ ಮತ್ತು ಧರ್ಮಸ್ಥಳದಲ್ಲಿ 424 ಸಾವುಗಳು ಸಂಭವಿಸಿವೆ ಎಂದೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಸೌಜನ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದರೂ ನಿಜವಾದ ಆರೋಪಿಗಳನ್ನು ಪತ್ತೆ ಹಚ್ಚಲು ಇದುವರೆಗೆ ಸಾಧ್ಯವಾಗಿಲ್ಲ. ಜುಲೈ ತಿಂಗಳ ಆರಂಭದಲ್ಲಿ ಧರ್ಮಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ಹಲವು ಸಾವುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ತೋರಿಸುವುದಾಗಿ ಮಾಧ್ಯಮಗಳ ಮುಂದೆ ಬಂದಿದ್ದ ಮಾಧ್ಯಮಗಳು ಹಾಗೂ ಕೆಲವು ರಾಜಕೀಯ ಮುಖಂಡರು ಇದರ ಲಾಭ ಪಡೆದುಕೊಂಡಿದ್ದಾರೆ. ಸುಜಾತಭಟ್‌ಗೆ ರಕ್ಷಣೆ ಕೊಡಬೇಕಾಗಿತ್ತು, ಕೊಟ್ಟಿಲ್ಲ. ತನಿಖೆ ನಡೆಯುತ್ತಿರುವಾಗಲೇ ಹಲವು ತಿರುವುಗಳನ್ನ ಇದು ಪಡೆದುಕೊಂಡಿದ್ದು, ದೂರುದಾರರನ್ನೇ ಅರೆಸ್ಟ್ ಮಾಡಲಾಯಿತು. ಬಿಜೆಪಿ ಇದನ್ನು ಧರ್ಮಯುದ್ಧ ಎಂದು ಬಿಂಬಿಸುತ್ತಿದೆ.

ಇನ್ನೂ ಎಸ್‌ಐಟಿ ತನಿಖೆ ನಡೆಯುತ್ತಿರುವಾಗಲೇ ಕೆಲವು ಕಾಂಗ್ರೆಸ್ ನಾಯಕರೂ ಹೇಳಿಕೆಗಳನ್ನು ಕೊಡುವುದು ಕಂಡು ಬರುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್, ಗೃಹಸಚಿವ ಪರಮೇಶ್ವರ್, ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಧರ್ಮಸ್ಥಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾತನಾಡದಂತೆ ವಾರ್ನ್ ಮಾಡಿದ್ದಾರೆ. ಹಾಗಾಗಿ ಒಬ್ಬ ವಿರೋಧ ಪಕ್ಷದ ಹಿರಿಯ ನಾಯಕಿಯಾಗಿ ನಾವು ನಿಮಗೆ ಪತ್ರ ಬರೆಯುತ್ತಿದ್ದೇವೆ. 2018ರ ಉಗ್ರಪ್ಪ ವರದಿಯನ್ನು ಎಸ್‌ಐಟಿ ತನಿಖೆಯಲ್ಲಿ ಪರಿಗಣಿಸಬೇಕು. ಈ ಪ್ರಕರಣದ ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಕಾಂಗ್ರೆಸ್ ನಾಯಕರು ಎಸ್‌ಐಟಿ ತನಿಖೆಯ ವಿರುದ್ಧ ಹೇಳಿಕೆಗಳನ್ನು ಕೊಡಬಾರದು. ಸೌಜನ್ಯ ಪ್ರಕರಣದ ತನಿಖೆ ನಡೆಸಿದ ಅಧಿಕಾರಿಗಳನ್ನೂ ತನಿಖೆಗೆ ಒಳಪಡಿಸಬೇಕು. ಅದಕ್ಕಾಗಿ ಮಧ್ಯಪ್ರವೇಶಿಸಬೇಕು ಎಂದು ಮಹಿಳಾ ಸಂಘಟನೆಗಳು ಪತ್ರದಲ್ಲಿ ಒತ್ತಾಯಿಸಿವೆ.

TAGGED:congressDharmasthala CaseDK ShivakumarsitSonia GandhiWomen Unionsಧರ್ಮಸ್ಥಳ ಪ್ರಕರಣಮಹಿಳಾ ಸಂಘಟನೆಗಳುಸೋನಿಯಾ ಗಾಂಧಿ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

Raichuru Accident 1
Districts

ಮಂತ್ರಾಲಯ ಬಳಿ ಭೀಕರ ಅಪಘಾತ – ಮೂರು ವರ್ಷದ ಮಗು ಸೇರಿ 8 ಜನ ದುರ್ಮರಣ

Public TV
By Public TV
8 minutes ago
karnataka High Court
Bengaluru City

SSLCಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ: ಹೈಕೋರ್ಟ್

Public TV
By Public TV
16 minutes ago
Akshaya Tritiya 1
Bengaluru City

ಯುದ್ಧದ ಭೀತಿಯ ಮಧ್ಯೆ ಅಕ್ಷಯ ತೃತೀಯ – ಈ ಬಾರಿ ಚಿನ್ನ ಖರೀದಿಗೆ ಸೂಕ್ತನಾ?

Public TV
By Public TV
32 minutes ago
virat kohli anushka sharma
Cricket

IPLನಲ್ಲಿ ಕೇವಲ 1 ರನ್‌ನಿಂದ 66ನೇ ಅರ್ಧಶತಕ ಮಿಸ್‌ ಮಾಡಿಕೊಂಡ ಕೊಹ್ಲಿ – ಪತ್ನಿ ಅನುಷ್ಕಾ ರಿಯಾಕ್ಷನ್‌ ಹೇಗಿತ್ತು?

Public TV
By Public TV
55 minutes ago
Strait of Hormuz India Flagged Fuel Tanker
Latest

ಒಮನ್‌ ಭಾಗದ ಹಾರ್ಮುಜ್‌ ಜಲಸಂಧಿ ಮೂಲಕ ಹಡಗುಗಳ ಮುಕ್ತ ಪ್ರಯಾಣಕ್ಕೆ ಅನುಮತಿ ನೀಡುತ್ತಾ ಇರಾನ್?

Public TV
By Public TV
2 hours ago
Vinay Kulkarni 3
Bengaluru City

ಯೋಗೇಶ್‌ಗೌಡ ಕೊಲೆ ಕೇಸಲ್ಲಿ ವಿನಯ್ ಕುಲಕರ್ಣಿ ದೋಷಿ – ಇಂದು ಶಿಕ್ಷೆ ಪ್ರಮಾಣ ಪ್ರಕಟ, ಎಲ್ಲರ ಚಿತ್ತ ಕೋರ್ಟ್‌ನತ್ತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?