ಬೀದರ್: ಸಾರ್ವಜನಿಕ ಸ್ಥಳಗಳಲ್ಲಿ ಮಾರಾಟಕ್ಕೆ ತಂದಿದ್ದ 5 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಜಪ್ತಿ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ (Basava Kalyana) ತಾಲೂಕಿನ ಜಿಜಾವು ನಗರದಲ್ಲಿ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಬೀದರ್ ಪೊಲೀಸರು (Bidar Police) ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಬಂದಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.ಇದನ್ನೂ ಓದಿ: ಕೊಂದವರು ಯಾರು? – ಧರ್ಮಸ್ಥಳ ಪ್ರಕರಣದ ಬಗ್ಗೆ ಮಹಿಳಾ ಸಂಘಟನೆಗಳಿಂದ ಸೋನಿಯಾ ಗಾಂಧಿಗೆ ಪತ್ರ
ನೆರೆರಾಜ್ಯ ಮಹಾರಾಷ್ಟ್ರದಿಂದ ಗಾಂಜಾ ತಂದು ಬಸವಕಲ್ಯಾಣದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಖದೀಮರ ಜಾಲವನ್ನು ಬಯಲಿಗೆಳೆದಿದ್ದು, ಹೆಡೆಮುರಿ ಕಟ್ಟಿದ್ದಾರೆ.
ಈ ಕುರಿತು ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಸ್ಪೈ ಕ್ಯಾಮೆರಾ ಬಳಸಿ ಮಹಿಳೆ ವೀಡಿಯೋ ರೆಕಾರ್ಡ್ – ದೆಹಲಿಯಲ್ಲಿ ಪೈಲಟ್ ಬಂಧನ