ಮಂಡ್ಯ: ಯಾವುದೇ ಒತ್ತಡಕ್ಕೆ ಮಣಿದರೆ ಖುದ್ದಾಗಿ ನಾನೇ ಮದ್ದೂರಿಗೆ ಬರಬೇಕಾಗುತ್ತದೆ ಎಂದು ಮಂಡ್ಯ ಎಸ್ಪಿಗೆ (Mandya SP) ಕರೆ ಮಾಡಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಮದ್ದೂರಿನಲ್ಲಿ (Maddur) ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಹಾಗೂ ಡಿಸಿಗೆ ಕರೆ ಮಾಡಿ ಮಾತನಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು. ಯಾವುದೇ ಒತ್ತಡಕ್ಕೆ ಮಣಿದರೆ ಖುದ್ದಾಗಿ ನಾನೇ ಮದ್ದೂರಿಗೆ ಬರಬೇಕಾಗುತ್ತದೆ ಎಂದು ಹೇಳಿರುವುದಾಗಿ ತಿಳಿದು ಬಂದಿದೆ.ಇದನ್ನೂ ಓದಿ: ಮದ್ದೂರಿನಲ್ಲಿ ಗಲಾಟೆ ಮಾಡಿದವರ ಬಂಧನ ಆಗಿದೆ: ಪರಮೇಶ್ವರ್
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷವೂ ಕೂಡ ಇದೇ ರೀತಿ ಮಂಡ್ಯದ ನಾಗಮಂಗಲದಲ್ಲಿ ನಡೆದಿತ್ತು. ಅದೇ ರೀತಿ ಇದೀಗ ಪುನರಾವರ್ತನೆಯಾಗಿದೆ. ಈ ಪ್ರಕರಣವನ್ನು ದೊಡ್ಡ ಮಟ್ಟದಲ್ಲಿ ಹಿಂಸೆಗೆ ಒಳಗಾಗುವ ರೀತಿಗೆ ತೆಗೆದುಕೊಂಡು ಹೋಗಲು ಅವಕಾಶ ಕೊಡಬೇಡಿ ಎಂದು ನಾನು ಜಿಲ್ಲೆ ಹಾಗೂ ಮದ್ದೂರಿನ ಜನರಲ್ಲಿ ಕೇಳಿಕೊಳ್ಳುತ್ತೇನೆ. ನಾವು ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಕರೆಯುತ್ತೇವೆ. ಈ ರೀತಿ ಮಂಡ್ಯದಲ್ಲಿ ಯಾವತ್ತೂ ನಡೆದಿರಲಿಲ್ಲ. ಆದರೆ ರಾಜ್ಯದಲ್ಲಿ ಈ ರೀತಿ ಘಟನೆಯಾಗಲು ಕಾಂಗ್ರೆಸ್ ಆಡಳಿತವೇ ಕಾರಣ. ಜೊತೆಗೆ ಹಿಂದೂ ಸಮಾಜವನ್ನು ಅಸಮಾಧಾನಕ್ಕೆ ಒಳಗಾಗುವ ವಾತಾವರಣವನ್ನು ಕಾಂಗ್ರೆಸ್ ಸರ್ಕಾರ ನಿರ್ಮಾಣ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಇಂದು (ಸೆ.8) ಮಧ್ಯಾಹ್ನ 1:30ಕ್ಕೆ ಜೆಡಿಎಸ್ (JDS) ಯುವಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಮದ್ದೂರಿಗೆ ಭೇಟಿ ನೀಡಲಿದ್ದಾರೆ.
ಮದ್ದೂರಿನಲ್ಲಿ ಆಗಿದ್ದೇನು?
ಮದ್ದೂರು ಪಟ್ಟಣದ ರಾಮ್ ರಹೀಂ ನಗರಕ್ಕೆ ಹೊಂದಿಕೊಂಡಿರುವ ಚನ್ನೇಗೌಡ ಬಡಾವಣೆಯ ನಿವಾಸಿಗಳು ಭಾನುವಾರ (ಸೆ.7) ರಾತ್ರಿ ಗಣಪತಿ ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ಮಸೀದಿ ಬಳಿಗೆ ಮೆರವಣಿಗೆ ಬಂದಿದ್ದು, ಯಾವುದೇ ಘೋಷಣೆ ಕೂಗಬಾರದು, ಮೈಕ್ ಹಾಕಬಾರದು ಎಂದು ಎಚ್ಚರಿಕೆ ನೀಡಿದ್ದರು. ಅದರಂತೆ ಮೈಕ್ ಆಫ್ ಮಾಡಿ ಮೆರವಣಿಗೆ ಮಾಡಲಾಗಿತ್ತು. ಇದಾದ ಬಳಿಕ ಲೈಟ್ ಆಫ್ ಮಾಡಿ ಏಕಾಏಕಿ ಗಣಪತಿ ಮೆರವಣಿಗೆಗೆ ಅನ್ಯ ಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲುತೂರಾಟದ ಬೆನ್ನಲ್ಲೇ ಪ್ರತಿಭಟನೆ ಜೋರಾಗಿ ನಡೆದಿದ್ದು ನಾಳೆಯವರೆಗೆ ಮದ್ದೂರಿನಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ.ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾರ್ ಡ್ರೈವರ್‌ನ ಭೀಕರ ಕೊಲೆ – ಸೇಹಿತರಿಂದಲೇ ಹತ್ಯೆ ಶಂಕೆ