ಬೆಂಗಳೂರು: ನೇಪಾಳದಲ್ಲಿ (Nepal) ಸಿಲುಕಿರುವ ಕನ್ನಡಿಗರು (Kannadigas) ಸುರಕ್ಷಿತವಾಗಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಸ್ಪಷ್ಟಪಡಿಸಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಸಿಎಂ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ ಎಂದು ಅಧಿಕೃತವಾಗಿ ಹೇಳಿದ್ದಾರೆ. ಇದನ್ನೂ ಓದಿ: Nepal | 120 ವರ್ಷಗಳಷ್ಟು ಹಳೆಯದಾದ, ಏಷ್ಯಾದ ಅತಿದೊಡ್ಡ ಅರಮನೆ ʻಸಿಂಹ ದರ್ಬಾರ್ʼ ಧಗಧಗ
ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನು ಮುಖ್ಯಮಂತ್ರಿಗಳ ಸೂಚನೆ ಬಳಿಕ ಮುಖ್ಯಕಾರ್ಯದರ್ಶಿ ನಿರಂತರವಾಗಿ ವಿದೇಶಾಂಗ ಇಲಾಖೆ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ʻಬೆಂಕಿಯ ಬಲೆʼಯಲ್ಲಿ ನೇಪಾಳ – ಕನ್ನಡಿಗರ ರಕ್ಷಣೆಗೆ ತಂಡ ರಚಿಸಿದ ರಾಜ್ಯ ಸರ್ಕಾರ