ಶಿವಮೊಗ್ಗ: ಬೈಕ್ (Bike) ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ (Accident) ಮದುವೆ ನಿಶ್ಚಯವಾಗಿದ್ದ ಜೋಡಿ ಸಾವನ್ನಪ್ಪಿದ ಘಟನೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಬಳಿ ನಡೆದಿದೆ.
ಮೃತರನ್ನು ತಾಲೂಕಿನ ಮಟ್ಟಿಕೋಟೆ ಗ್ರಾಮದ ರೇಖಾ (20) ಮತ್ತು ತೊಗರ್ಸಿ ಸಮೀಪದ ಗಂಗೊಳ್ಳಿ ಗ್ರಾಮದ ನಿವಾಸಿ ಬಸವನಗೌಡ ದ್ಯಾಮನಗೌಡ್ರ (25) ಎಂದು ಗುರುತಿಸಲಾಗಿದೆ. ನಗರದ ಗಾರ್ಮೆಂಟ್ಸ್ ಕೆಲಸಕ್ಕೆ ತೆರಳುವವರನ್ನು ಶಿರಾಳಕೊಪ್ಪ ಕಡೆಯಿಂದ ಕರೆದೊಯ್ಯುತ್ತಿದ್ದ ಕಾರು ಮತ್ತು ಬಸವನಗೌಡ ಮತ್ತು ರೇಖಾ ಸಂಚರಿಸುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್ ರಸ್ತೆ ಪಕ್ಕದ ಹಳ್ಳಕ್ಕೆ ಬಿದ್ದಿದೆ. ಕಾರಿನ ಮುಂಭಾಗ ತೀವ್ರ ಹಾನಿಗೊಳಗಾಗಿದೆ. ಇದನ್ನೂ ಓದಿ: ಇನ್‌ಸ್ಟಾ ಪ್ರೇಮಿಯನ್ನ ಮದ್ವೆಯಾಗಿದ್ದ ಗೃಹಿಣಿ ಅನುಮಾನಾಸ್ಪದ ಸಾವು
ರೇಖಾ, ಬಸವನಗೌಡ ಇಬ್ಬರಿಗೂ ಕಳೆದ ತಿಂಗಳು ಮದುವೆ ನಿಶ್ಚಿತಾರ್ಥ ನಡೆದಿತ್ತು. ಮಳೆ ಕಾರಣಕ್ಕೆ ಮದುವೆಯನ್ನು ಡಿಸೆಂಬರ್‌ಗೆ ನಿಗದಿ ಮಾಡಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: Bengaluru | ಮನೆಯ ಎರಡನೇ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವು