ರಾಯಚೂರು: ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಮೀನುಗಾರನೊಬ್ಬ ಸಿಡಿಲು (Lightning) ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಯಚೂರಿನ (Raichur) ತುಂಗಾಭದ್ರಾ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ದೇವಪ್ಪ (42) ಎಂದು ಗುರುತಿಸಲಾಗಿದೆ. ಗ್ರಾಮದ ಬಳಿ ತುಂಗಾಭದ್ರಾ ನದಿಯಲ್ಲಿ (Tungabhadra River) ಮೀನು ಹಿಡಿಯುವ ವೇಳೆ ಸಿಡಿಲು ಬಡಿದಿದೆ. ತೆಪ್ಪದಲ್ಲಿ ಮೀನು ಹಿಡಿಯಲು ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಇದನ್ನೂ ಓದಿ: ಶಿರೂರು ದುರಂತದಲ್ಲಿ ಜೀವ ಉಳಿಸಿಕೊಂಡಿದ್ದ ವೃದ್ಧ ಸಿಡಿಲಿಗೆ ಬಲಿ
ಕೂಡಲೇ ಉಳಿದ ಮೀನುಗಾರರು ದೇವಪ್ಪನ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಈ ಸಂಬಂಧ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಳ್ಳಾರಿ | ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು